ನಮ್ಮದು ಅಕ್ರಮ ಆಸ್ತಿ ಅಲ್ಲ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಕುಟುಂಬದ ಸ್ಪಷ್ಟನೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 04, 2022 | 11:39 PM

ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿರುವಂತೆ ನಮ್ಮದು ಅಕ್ರಮ ಆಸ್ತಿ ಅಲ್ಲ ಎಂದು ರವಿ ಅವರ ತಾಯಿ ರತ್ನವ್ವ ಮತ್ತು ತಂದೆ ದ್ಯಾಮಪ್ಪ ಚನ್ನಣ್ಣವರ್ ಸ್ಪಷ್ಟನೆ ನೀಡಿದ್ದಾರೆ

ನಮ್ಮದು ಅಕ್ರಮ ಆಸ್ತಿ ಅಲ್ಲ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಕುಟುಂಬದ ಸ್ಪಷ್ಟನೆ
ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್
Follow us on

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅವರ ತಂದೆ-ತಾಯಿ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿರುವಂತೆ ನಮ್ಮದು ಅಕ್ರಮ ಆಸ್ತಿ ಅಲ್ಲ ಎಂದು ರವಿ ಅವರ ತಾಯಿ ರತ್ನವ್ವ ಮತ್ತು ತಂದೆ ದ್ಯಾಮಪ್ಪ ಚನ್ನಣ್ಣವರ್ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರದ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 25 ವರ್ಷಗಳಿಂದ ನಮ್ಮ ಕುಟುಂಬಕ್ಕೆ 6 ಎಕರೆ ಪಿತ್ರಾರ್ಜಿತ ಆಸ್ತಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವಂತ ಪರಿಶ್ರಮದಿಂದ ಹಿರಿಯ ಮಗ ಯುಪಿಎಸ್​ಸಿ ತೇರ್ಗಡೆಯಾಗಿ, ಐಪಿಎಸ್ ಅಧಿಕಾರಿಯಾಗಿದ್ದಾನೆ. ನಮ್ಮ ಕಿರಿಯ ಮಗ ರಾಘವೇಂದ್ರ ಚನ್ನಣ್ಣವರ್ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಹೇಳಿರುವ ಅವರು, ಸುಮಾರು ಐದು ಸ್ಥಳಗಳಲ್ಲಿರುವ ಆಸ್ತಿ ವಿವರ ಪ್ರಕಟಿಸಿದ್ದಾರೆ. ಕಿರಿಯ ಮಗನ ಆದಾಯ, ಕೃಷಿ ಆದಾಯದಿಂದ ಆಸ್ತಿ ಗಳಿಸಿರುವ ಆಸ್ತಿಯ ವಿವರಗಳನ್ನೂ ಬಹಿರಂಗಪಡಿಸಿದ್ದಾರೆ.

ಕುಟುಂಬ ಸಂಪಾದಿಸಿದ ಆದಾಯ ಮಾಹಿತಿಯನ್ನು ಸಲ್ಲಿಸುತ್ತಿದ್ದೇವೆ. ವ್ಯಾಪಾರದಲ್ಲಿ ಆಸಕ್ತಿಯಿರು ಹಿನ್ನೆಲೆಯಲ್ಲಿ ಕಿರಿಯ ಮಗ ಮನೆ ದೇವರು ರೇಣುಕಾ ಎಂಟರ್ ಪ್ರೈಸಸ್ ಹೆಸರಲ್ಲಿ ವ್ಯಾಪಾರ ನಡೆಸಲು ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದ. ನಮ್ಮ ಎಲ್ಲಾ ಆಸ್ತಿ ಪರಿಶ್ರಮದಿಂದಲೇ ಸಂಪಾದಿಸಿದ್ದು ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಸುದ್ದಿ ಸುಳ್ಳು ಹಾಗೂ ಹೀಗೆ ಸುಳ್ಳುಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧ. ಸುಳ್ಳುಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರವಿ ಚೆನ್ನಣ್ಣನವರ್ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ: ಗೃಹ ಸಚಿವ ಆರಗ ಜ್ಞಾನೇಂದ್ರ
ಇದನ್ನೂ ಓದಿ: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ