ಕ್ರೀಡಾಕೂಟಕ್ಕೆ ಗೈರಾಗಿದ್ದ ಪಿಎಸ್‌ಐ ಮೇಲೆ ಹಲ್ಲೆ: ಐಪಿಎಸ್​​ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕ್ರೀಡಾ ಚಟುವಟಿಕೆಗೆ ಗೈರಾದ ಪಿಎಸ್‌ಐ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ವಿರುದ್ಧದ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರ ಎತ್ತಿದೆ. ಆ ಮೂಲಕ ನ್ಯಾಯಮೂರ್ತಿ ರವಿ ವಿ. ಹೊಸಮನಿ ನೇತೃತ್ವದ ಪೀಠವು ಐಪಿಎಸ್ ಅಧಿಕಾರಿಯ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಕ್ರೀಡಾಕೂಟಕ್ಕೆ ಗೈರಾಗಿದ್ದ ಪಿಎಸ್‌ಐ ಮೇಲೆ ಹಲ್ಲೆ: ಐಪಿಎಸ್​​ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Image Credit source: Getty images
Edited By:

Updated on: Sep 11, 2026 | 3:03 PM

ಬೆಂಗಳೂರು, ಸೆಪ್ಟೆಂಬರ್​​ 11: ಕ್ರೀಡಾ ಚಟುವಟಿಕೆಗೆ ಗೈರಾದ ಕಾರಣಕ್ಕೆ ಸಬ್‌ಇನ್ಸ್‌ಪೆಕ್ಟರ್ ಮೇಲೆ ಪೇಪರ್ ವೇಯ್ಟ್ ಎಸೆದು ಹಲ್ಲೆ ಮಾಡಿರುವ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಅಧೀನ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶಿಸಿದೆ.

ಘಟನೆಯ ಹಿನ್ನೆಲೆ ಮತ್ತು ಹಲ್ಲೆ ಆರೋಪ

2012ರ ಜನವರಿ 2 ರಂದು ಈ ಘಟನೆ ನಡೆದಿತ್ತು. ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ಇಲಾಖೆಯ ಕ್ರೀಡಾ ಚಟುವಟಿಕೆಗಳಿಗೆ ಮಲ್ಲಂದೂರು ಠಾಣೆಯ ಪಿಎಸ್‌ಐ ಜಿಎಸ್​ ಚಂದ್ರಶೇಖರ್ ಗೈರಾಗಿದ್ದರು. ಇದರಿಂದ ಆಕ್ರೋಶಗೊಂಡ ಅಂದು ಚಿಕ್ಕಮಗಳೂರು ಎಸ್‌ಪಿ ಆಗಿದ್ದ ವಿಕಾಶ್ ಕುಮಾರ್ ವಿಕಾಶ್, ಪಿಎಸ್‌ಐ ಚಂದ್ರಶೇಖರ್​ರನ್ನು ಎಸ್‌ಪಿ ಕಚೇರಿಗೆ ಕರೆಸಿಕೊಂಡು ಪೇಪರ್ ವೇಯ್ಟ್ ಎಸೆದು ಹಲ್ಲೆ ನಡೆಸಿದ್ದರು. ಪಿಎಸ್‌ಐ ಹಣೆಗೆ ರಕ್ತ ಬರುವಷ್ಟು ಗಾಯವಾಗಿತ್ತು ಎಂದು ಆರೋಪಿಸಲಾಗಿತ್ತು.

ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ನೀಡಿದ್ದ ಕೋರ್ಟ್

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ದೂರಿನ ತನಿಖೆ ನಡೆಸಿದ ಪೊಲೀಸರು, ಅಂತಿಮವಾಗಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಅಧೀನ ನ್ಯಾಯಾಲಯವು ಪೊಲೀಸರ ಬಿ ರಿಪೋರ್ಟ್ ಅನ್ನು ಒಪ್ಪದೆ ತಿರಸ್ಕರಿಸಿತ್ತು. ಅಷ್ಟೇ ಅಲ್ಲದೆ, ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್​​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೆ ಆದೇಶಿಸಿತ್ತು.

ಇದನ್ನೂ ಓದಿ: ಯಶವಂತಪುರ ಎಪಿಎಂಸಿಗೆ ದಿಢೀರ್​​​ ಭೇಟಿ, ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಹೈಕೋರ್ಟ್ ಮೆಟ್ಟಿಲೇರಿದ್ದ ವಿಕಾಶ್ ಕುಮಾರ್ ವಿಕಾಶ್​​ಗೆ ಹಿನ್ನಡೆ

ಅಧೀನ ನ್ಯಾಯಾಲಯ ನೀಡಿದ್ದ ಸಮನ್ಸ್ ಹಾಗೂ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ವಿಕಾಶ್ ಕುಮಾರ್ ವಿಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ಪೀಠವು ಅರ್ಜಿ ವಜಾಗೊಳಿಸಿದೆ. ಹೀಗಾಗಿ ಐಪಿಎಸ್ ಅಧಿಕಾರಿಗೆ ಕಾನೂನು ಸಂಕಷ್ಟ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us