ಬಿಎಂಟಿಸಿ ಬಸ್​ ಮೇಲೆ ಬಿತ್ತು ರೈಲ್ವೇ ಬ್ರಿಡ್ಜ್​ಗೆ ಹಾಕಿದ್ದ ಕಬ್ಬಿಣದ ಶೀಟ್​; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಆನಂದ್ ರಾವ್ ಸರ್ಕಲ್ ಹಾಗೂ ಶೇಷದ್ರಿ ಪುರಂಗೆ ಹೋಗುವ ರೈಲ್ವೆ ಅಂಡರ್ ಪಾಸ್ ಬಳಿ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಬಾರಿ ದುರಂತ ತಪ್ಪಿದೆ. ಕಬ್ಬಿಣದ ಶೀಟ್​ಗಳು ಜನರ ಮೇಲೆ ಬಿದ್ದಿದ್ದರೆ, ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿ ಬಸ್​ ಮೇಲೆ ಬಿತ್ತು ರೈಲ್ವೇ ಬ್ರಿಡ್ಜ್​ಗೆ ಹಾಕಿದ್ದ ಕಬ್ಬಿಣದ ಶೀಟ್​; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಬಸ್ ಮೇಲೆ ಶೀಟ್ ತಪ್ಪಿದ ಬಾರಿ ಅನಾಹುತ
Follow us
TV9 Web
| Updated By: preethi shettigar

Updated on:Oct 24, 2021 | 2:07 PM

ಬೆಂಗಳೂರು: ರೈಲ್ವೆ ಬ್ರಿಡ್ಜ್​ಗೆ ಹಾಕಿದ್ದ ಕಬ್ಬಿಣದ ಶೀಟ್ ಬಿಎಂಟಿಸಿ ಬಸ್ ಮೇಲೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆನಂದ್ ರಾವ್ ಸರ್ಕಲ್ ಹಾಗೂ ಶೇಷದ್ರಿ ಪುರಂಗೆ ಹೋಗುವ ರೈಲ್ವೆ ಅಂಡರ್ ಪಾಸ್ ಬಳಿ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಬಾರಿ ದುರಂತ ತಪ್ಪಿದೆ. ಕಬ್ಬಿಣದ ಶೀಟ್​ಗಳು ಜನರ ಮೇಲೆ ಬಿದ್ದಿದ್ದರೆ, ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಇಲಾಖೆಯ ಮಹಾ ಯಡವಟ್ಟು ರೈಲ್ವೆ ಇಲಾಖೆಯ ಯಡವಟ್ಟಿನಿಂದಾಗಿ ಬೆರಳಣಿಕೆಯ ಸಮಯದಲ್ಲಿ ಜನರು ಪಾರಾಗಿದ್ದಾರೆ. ವಾಹನ ಸವಾರರು ಸಾವಿನ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಅಲ್ಲದೇ ಅಂಡರ್ ಪಾಸ್ ರೈಲ್ವೇ ಬ್ರೀಡ್ಜ್​ಗಳು ಅದ್ವಾನದ ಹಾದಿ ಹಿಡಿದಿವೆ. ಸಾಲದಕ್ಕೆ ರೈಲು ಸಂಚರಿಸುವಾಗ ಗಲೀಜು ಬೀಳಬಾರದು ಎನ್ನುವ ಕಾರಣಕ್ಕೆ ರೈಲ್ವೆ ಹಳಿಗೆ ಶೀಟ್​ಗಳನ್ನು ಅಳವಾಡಿಕೆ ಮಾಡಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಯಿಂದಾಗಿ ರೈಲ್ವೆ ಟ್ರಾಕ್​ಗೆ ಹಾಕಾಲಾಗಿದ್ದ ಶೀಟ್ ಕೆಳಗೆ ಬಿದ್ದಿದೆ. ಮಲಮೂತ್ರ ರಸ್ತೆಗೆ ಬೀಳದಂತೆ ತಡೆಯಲು ಹಾಕಿದ್ದ ಸೆಕ್ಯುರ್ ಪ್ಲೇಟ್ಸ್ ನೇತಾಡುತ್ತಿದೆ. ಶೇಷಾದ್ರಿಪುರಂ ಬಳಿಯಿರುವ ರೈಲ್ವೆ ಬ್ರಿಡ್ಜ್​ಗೆ ಹಾಕಿದ್ದ ತಗಡಿನ ಶೀಟ್​ಗಳು ಅಪಾಯಕಾರಿಯಾಗಿ ರಸ್ತೆಯಲ್ಲಿ ಜೊತು ಬಿದ್ದಿದೆ. ಸದ್ಯ ಸ್ಥಳಕ್ಕೆ ಆಗಮಿಸಿ ಪರೀಶೀಲಿಸುತ್ತಿರುವ ಪೊಲೀಸ್ ಹಾಗೂ ರೈಲ್ವೆ ಅಧಿಕಾರಿಗಳ ತಂಡ ಬಸ್ ಸಂಚಾರ ಮಾಡುವಾಗ ಶೀಟ್​ಗೆ ತಾಗಿರಬಹುದು ಎಂದು ಹೇಳಿವೆ.

ನಮ್ಮ ಮೆಟ್ರೋ ಕಾಮಗಾರಿ ವೇಳೆ ಎಡವಟ್ಟು; 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕ್ರೇನ್ ಕಟ್ ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ಸಂಭವಿಸಿದೆ. ನಮ್ಮ ಮೆಟ್ರೋ ಫೇಸ್-2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹುದೊಡ್ಡ ಮಷೀನ್ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಮಷೀನ್ ಅರ್ಧಕ್ಕೆ ಕಟ್ ಆಗಿದೆ.

ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಜೋಡಣೆ ವೇಳೆ ಈ ಘಟನೆ ಸಂಭವಿಸಿದ್ದು ಬೆಳಗ್ಗೆ 6.30ರ ಸುಮಾರಿಗೆ ಕ್ರೇನ್ ಕೆಳಗೆ ಬಿದ್ದಿದೆ. ಸದ್ಯ ಕರ್ತವ್ಯನಿರತ ನೂರಾರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲ್ಕ್ ಬೋರ್ಡ್-ಕೆ.ಆರ್.ಪುರಂ ಮಾರ್ಗವಾಗಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ವೇಳೆ ಅಸಂಬಲ್ ಜೋಡಿಸುವಾಗ ಲಾಂಚಿಂಗ್ ಗಾರ್ಡ್ ಎಂಬ ಬೃಹತ್ ಮಷೀನ್ ದಿಢೀರ್ ಕುಸಿದು ಕೆಳಗೆಬಿದ್ದಿದೆ. ಮಷೀನ್ ಅರ್ಧಕ್ಕೆ ಕಟ್ ಆಗಿದೆ. ಮಷೀನ್ ಮೇಲೆತ್ತಲು ಕಾರ್ಮಿಕರು ಹರಸಾಹಸ ಪಡುತ್ತಿದ್ದಾರೆ. ಘಟನೆ ನಡೆದು 6 ಗಂಟೆ ಕಳೆದರೂ ಇದುವರೆಗೂ ಸ್ಥಳಕ್ಕೆ ಯಾವೊಬ್ಬ ಮೆಟ್ರೋ ಅಧಿಕಾರಿಯೂ ಭೇಟಿ ನೀಡಿಲ್ಲ.

ಇದನ್ನೂ ಓದಿ: BMTC Revenue: ಸಾರಿಗೆ ಸಿಬ್ಬಂದಿಗೆ ಬಿಎಂಟಿಸಿಯಿಂದ ಟಾರ್ಗೆಟ್ ಟಾರ್ಚರ್!

ವಾಯ್ಸ್ ರೆಕಾರ್ಡ್ ಕಳಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ; ನಿಯಂತ್ರಣಾಧಿಕಾರಿಗಳ ವಿರುದ್ಧ ಮಾನಸಿಕ ಕಿರುಕುಳ ಆರೋಪ

Published On - 1:50 pm, Sun, 24 October 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್