ಪೆಟ್ರೋಲ್ ಟ್ಯಾಂಕರ್​ ಒಳಗೆ ಬೇಬಿ ಟ್ಯಾಂಕರ್, ಸರ್ಕಾರಕ್ಕೆ ಭಾರಿ ವಂಚನೆ: ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಟ್ಯಾಂಕರ್ ಅವ್ಯವಹಾರ

ಟ್ಯಾಂಕರ್​ನ ಒಳಗೆ 80ರಿಂದ 100 ಲೀಟರ್ ಸಂಗ್ರಹವಾಗುವ ಬೇಬಿ ಟ್ಯಾಂಕರ್ ಮಾಡಿ ಇಂಧನವನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಸದಸ್ಯ ಮರಿತಿಬ್ಬೇಗೌಡ ದೂರಿದರು.

ಪೆಟ್ರೋಲ್ ಟ್ಯಾಂಕರ್​ ಒಳಗೆ ಬೇಬಿ ಟ್ಯಾಂಕರ್, ಸರ್ಕಾರಕ್ಕೆ ಭಾರಿ ವಂಚನೆ: ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಟ್ಯಾಂಕರ್ ಅವ್ಯವಹಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 28, 2022 | 3:15 PM

ಬೆಂಗಳೂರು: ನಗರ ಹೊರವಲಯದಲ್ಲಿರುವ ಹೊಸಕೋಟೆ ಸಮೀಪ ಅಧಿಕಾರಿಗಳಿಂದಲೇ ಡೀಸೆಲ್, ಪೆಟ್ರೋಲ್ ಅವ್ಯವಹಾರ ನಡೆಯುತ್ತಿದೆ. ಹಲವು ಹಿರಿಯ ಅಧಿಕಾರಿಗಳೇ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು. ಟ್ಯಾಂಕರ್ ಒಳಗೆ ಮತ್ತೊಂದು ಚಿಕ್ಕ (ಬೇಬಿ) ಟ್ಯಾಂಕರ್ ಅಳವಡಿಸಿ ಅವ್ಯವಹಾರ ಮಾಡುತ್ತಿದ್ದಾರೆ. ಟ್ಯಾಂಕರ್​ನ ಒಳಗೆ 80ರಿಂದ 100 ಲೀಟರ್ ಸಂಗ್ರಹವಾಗುವ ಬೇಬಿ ಟ್ಯಾಂಕರ್ ಮಾಡಿ ಇಂಧನವನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ. ಡೀಲರ್​ಗಳಿಗೆ ಇದರಿಂದ ನಷ್ಟವಾಗುತ್ತಿದೆ. ಡೀಲರ್ ಅಸೋಸಿಯೇಷನ್ ಅಧ್ಯಕ್ಷರೇ ಅಧಿಕಾರಿಗಳಿಗೆ ಪತ್ರ ಬರೆದರೂ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇಲಾಖೆ ಅಧಿಕಾರಿಗಳು ವರ್ಷಕ್ಕೊಮ್ಮೆ ಸ್ಟಾಂಪಿಂಗ್ ಮಾಡಿದರೂ ಬೇಬಿ ಟ್ಯಾಂಕರ್ ಇರುವುದನ್ನು ಗಮನಿಸುತ್ತಿಲ್ಲ ಎಂದು ಅವರು ದೂರಿದರು. ಅಕ್ರಮ ಎಸಗುತ್ತಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಉಮೇಶ್ ಕತ್ತಿ, ಬೇಬಿ ಟ್ಯಾಂಕರ್ ಮೂಲಕ ಪೆಟ್ರೋಲ್, ಡೀಸೆಲ್ ಕಳವು ಮಾಡುತ್ತಿರುವುದು ನಮ್ಮ ಗಮನಕ್ಕೆ ತಂದ ತಕ್ಷಣ ಸಂಬಂಧಿಸಿದವರ ವಿರುದ್ಧ ಹೊಸಕೋಟೆಯ ಅನುಗೊಂಡನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಯಿತು. ಪೆಟ್ರೋಲ್, ಡೀಸೆಲ್ ಕಳವಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಈ ಉತ್ತರಕ್ಕೆ ಸದಸ್ಯ ಮರಿತಿಬ್ಬೇಗೌಡ ಆಕ್ಷೇಪ ವ್ಯಕ್ತಪಡಿಸಿದರು. 2 ವಾರದಿಂದ ಮಾಹಿತಿ ಇದ್ದರೂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿ ಕ್ರಮಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು. ನೀರಿನ ಟ್ಯಾಂಕರ್‌ಗಳಲ್ಲೂ ಅನಧಿಕೃತವಾಗಿ ಪೆಟ್ರೋಲ್, ಡೀಸೆಲ್ ತುಂಬುತ್ತಿದ್ದಾರೆ. ಕಾಳಸಂತೆಯಲ್ಲಿ ಕಡಿಮೆ ದರಕ್ಕೆ ಡೀಸೆಲ್ ಮಾರಾಟವಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ ಎಂದರು. ನೀರಿನ ಟ್ಯಾಂಕರ್​ಗಳಲ್ಲಿ ಡೀಸೆಲ್ ಸಾಗಿಸಲು ಸಾಧ್ಯವಿಲ್ಲ ಎಂದು ಸಚಿವ ಉಮೇಶ್ ಕತ್ತಿ, ಸ್ಟಾಂಪಿಂಗ್ ಮಾಡುವುದು ನಮ್ಮ ಇಲಾಖೆಯ ಕೆಲಸ. ತನಿಖೆ ಮಾಡಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ರಷ್ಯಾ-ಉಕ್ರೇನ್ ಯುದ್ಧದಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ದರ ಏರಿಕೆ ತಡೆಯಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು ಎಂದು ಸದಸ್ಯ ರವಿ ಪ್ರಶ್ನಿಸಿದರು. ಸರ್ಕಾರದ ಪರವಾಗಿ ಉತ್ತರಿಸಿದ ಉಮೇಶ್ ಕತ್ತಿ, ಖಾದ್ಯ ತೈಲ ಮತ್ತು ಖಾದ್ಯ ತೈಲ ಬೀಜಗಳ ಅನಧಿಕೃತ ಬೆಲೆಯೇರಿಕೆಗೆ ಕಡಿವಾಣ ಹಾಕಿದ್ದೇವೆ. ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು, ದೊಡ್ಡ ಮಟ್ಟದ ಗ್ರಾಹಕರಿಗೆ ದಾಸ್ತಾನು ಮಿತಿ ನಿಗದಿ ಮಾಡಲಾಗಿದೆ. ಅಗತ್ಯ ವಸ್ತುಗಳ ಅನಧಿಕೃತ ದಾಸ್ತಾನಿಗೂ ಕಡಿವಾಣ ಹಾಕಿದ್ದೇವೆ. ಆಹಾರ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ಆಗಾಗ್ಗೆ ತಪಾಸಣೆ ನಡೆಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್​ ಬಂಕ್​ಗಳಲ್ಲೂ ತಪಾಸಣೆ ಮತ್ತು ಪರಿಶೀಲನೆ ನಡೆಯುತ್ತಿದೆ. ಅನಧಿಕೃತವಾಗಿ ಅಗತ್ಯ ವಸ್ತುಗಳ ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರುತ್ತಿರುವವ ವಿರುದ್ಧ ಈವರೆಗೆ 75 ಮೊಕದ್ದಮೆ ದಾಖಲು ಮಾಡಲಾಗಿದೆ. ಈ ಪೈಕಿ 29 ಮೊಕದ್ದಮೆಗಳಲ್ಲಿ ₹ 2,96,000 ದಂಡ ವಸೂಲು ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ವಿಧಾನ ಪರಿಷತ್​ನಲ್ಲಿ ಪ್ರತಿಧ್ವನಿಸಿದ ಕೆರೆ, ಜಲಾಶಯಗಳ ಅಭಿವೃದ್ಧಿ ವಿಚಾರ

ಇದನ್ನೂ ಓದಿ: ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯದ ವಿರುದ್ಧ ಪರಿಷತ್​ನಲ್ಲೂ ಒಮ್ಮತದಿಂದ ಖಂಡನಾ ನಿರ್ಣಯ ಅಂಗೀಕಾರ

Published On - 3:15 pm, Mon, 28 March 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ