AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HIV ತವರಾಗುತ್ತಿದೆಯಾ ಬೆಂಗಳೂರು?: ಯುವ ಜನತೆಯಲ್ಲೇ ಸೋಂಕು ಪತ್ತೆಯಿಂದ ಹೆಚ್ಚಿದ ಆತಂಕ

ಬೆಂಗಳೂರಿನ ಯುವ ಜನತೆಯಲ್ಲಿ ಹೆಚ್‌ಐವಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳು ಮತ್ತು ಐಟಿ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲು ಹಾಗೂ ಹೈ-ರಿಸ್ಕ್ ವಲಯಗಳಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಕಳೆದ 5 ತಿಂಗಳ ಅವಧಿಯಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಪೈಕಿ ಸೋಂಕಿಗೆ ತುತ್ತಾದವರು ಬಹುತೇಕ ಸಲಿಂಗಿಗಳು ಎನ್ನಲಾಗಿದೆ.

HIV ತವರಾಗುತ್ತಿದೆಯಾ ಬೆಂಗಳೂರು?: ಯುವ ಜನತೆಯಲ್ಲೇ ಸೋಂಕು ಪತ್ತೆಯಿಂದ ಹೆಚ್ಚಿದ ಆತಂಕ
ಸಾಂದರ್ಭಿಕ ಚಿತ್ರImage Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on:Jul 30, 2026 | 6:29 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಹೆಚ್​​ಐವಿ ಸೋಂಕಿತರ ಸಂಖ್ಯೆ ಹೆಚ್ಚಳ
  • ಐದೇ ತಿಂಗಳಲ್ಲಿ 4,795 HIV ಪಾಸಿಟಿವ್ ಕೇಸ್​​ಗಳು ಪತ್ತೆ
  • ಅವಿವಾಹಿತರಲ್ಲಿಯೇ ಸೋಂಕು ಹೆಚ್ಚಳ- ಆರೋಗ್ಯ ಇಲಾಖೆ

ಬೆಂಗಳೂರು, ಜುಲೈ 30:  ಸಲಿಂಗ ಕಾಮದ ಪರಿಣಾಮವಾಗಿ ಬೆಂಗಳೂರಿನಲ್ಲಿ ಹೆಚ್​​ಐವಿ ಸೋಂಕಿತ ಪುರುಷರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಡೇಟಿಂಗ್​​ ಆ್ಯಪ್​​ಗಳ ಹೆಚ್ಚಳವೂ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆತಂಕಕಾರಿ ವಿಚಾರವೆಂದರೆ ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳ ಹಾಸ್ಟೆಲ್​​ ವಿದ್ಯಾರ್ಥಿಗಳು ಮತ್ತು ಪಿಜಿಗಳಲ್ಲಿ ನೆಲೆಸಿರುವವರೇ ಹೆಚ್ಚಿನ ಪೈಕಿ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಐದೇ ತಿಂಗಳಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆ

ಕಳೆದ 5 ತಿಂಗಳ ಅವಧಿಯಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಪೈಕಿ ಸೋಂಕಿಗೆ ತುತ್ತಾದವರು ಬಹುತೇಕ ಸಲಿಂಗಿಗಳು. ದೇಶದಲ್ಲಿ ಅತಿ ಹೆಚ್ಚು ಏಡ್ಸ್ ಕೇಸ್​​ ದಾಖಲಾಗುವ ರಾಜ್ಯವಾಗಿ ಕರ್ನಾಟಕ ಮಾರ್ಪಟ್ಟಿದ್ದು, ಅದರಲ್ಲೂ ಬೆಂಗಳೂರಿನಲ್ಲಿಯೇ ಅಧಿಕ ಪ್ರಕರಣಗಳು ದಾಖಲಾಗುತ್ತಿರೋದು ಆರೋಗ್ಯ ಇಲಾಖೆಯ ಟೆನ್ಷನ್​​ಗೆ ಕಾರಣವಾಗಿದೆ. ಗಮನಿಸಲೇ ಬೇಕಾದ ವಿಷಯ ಎಂದರೆ ಅವಿವಾಹಿತರಲ್ಲಿಯೇ HIV ಸೋಂಕು ಹೆಚ್ಚಿದ್ದು, ಇದರ ಪ್ರಮಾಣ ಶೇ. 20-25ರಷ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳನ್ನೂ ಕಾಡುತ್ತಿದೆ ಹೃದಯಾಘಾತದ ಸಮಸ್ಯೆ! ಆತಂಕ ಬೇಡ, ಜಾಗೃತಿ ಇರಲಿ ಎಂದ ಬೆಂಗಳೂರಿನ ವೈದ್ಯರು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕಿ ಪದ್ಮಾ ಬಸವಂತಪ್ಪ, ಸೋಂಕಿತರಿಂದ ಇತರರಿಗೂ ಅಪಾಯ ಇರುವ ಕಾರಣ ಕಾಲೇಜು, ಐಟಿ ಕಂಪನಿಗಳು, ಕಾರ್ಮಿಕರು, ಚಾಲಕರು, ಟ್ರಕ್ ಚಾಲಕರಿಗೆ ಜಾಗೃತಿ ಮೂಡಿಸಬೇಕು. ಸಲಿಂಗ ಕಾಮ, ಲೈಂಗಿಕ ಕಾರ್ಯಕರ್ತರು ಹೈ ರಿಸ್ಕ್ ಕ್ಯಾಟಗರಿಗೆ ಬರ್ತಾರೆ. ಹೀಗಾಗಿ ಇವರಿಗೆ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಮಾಡಲಾಗ್ತಿದೆ. ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಆಪ್​​ಗಳ ಮೂಲಕ ಲೈಂಗಿಕ ಚಟುವಟಿಕೆಗಳು ಹೆಚ್ಚಾಗ್ತಿವೆ ಎಂದು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ನಿಯಮದ ಪ್ರಕಾರ ಹೆಚ್​​ಐವಿ ಪರೀಕ್ಷೆ ಕಡ್ಡಾಯ ಮಾಡಲು ಸಾಧ್ಯವಿಲ್ಲ, ಗಮನಕ್ಕೆ ತರದೇ ಟೆಸ್ಟ್ ಮಾಡಲು ಆಗಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:21 pm, Thu, 30 July 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ