AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್​ಗೆ ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಆರೋಪ: ಕೇಂದ್ರದ ಮೌನ ಪ್ರಶ್ನಿಸಿದ ಸಚಿವ ರಿಜ್ವಾನ್​ ಅರ್ಷದ್​​

ಪೆಟ್ರೋಲ್‌ನಲ್ಲಿ ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣದಿಂದ ಇಂಜಿನ್‌ಗಳು ಹಾಳಾಗುತ್ತಿವೆ ಎಂದು ಆರೋಪಿಸಿರುವ ಸಚಿವ ರಿಜ್ವಾನ್ ಅರ್ಷದ್, ಈ ಕುರಿತು ಕೇಂದ್ರ ಸರ್ಕಾರದ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಎಥೆನಾಲ್​​ ಪ್ರಮಾಣ ಕಂಡು ಹಿಡಿಯುವುದೇನು ರಾಕೆಟ್​​ ಸೈನ್ಸಾ? ಇಲ್ಲಿ ಆರೋಪಿಗಳೂ, ನ್ಯಾಯಾಧೀಶರೂ ಅವರೇ ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.

ಪೆಟ್ರೋಲ್​ಗೆ ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಆರೋಪ: ಕೇಂದ್ರದ ಮೌನ ಪ್ರಶ್ನಿಸಿದ ಸಚಿವ ರಿಜ್ವಾನ್​ ಅರ್ಷದ್​​
ಕೇಂದ್ರದ ಮೌನ ಪ್ರಶ್ನಿಸಿದ ಸಚಿವ ರಿಜ್ವಾನ್​ ಅರ್ಷದ್​​
ಹರೀಶ್ ಜಿ.ಆರ್​.
| Edited By: |

Updated on: Nov 09, 2026 | 1:24 PM

Share

ಬೆಂಗಳೂರು, ನವೆಂಬರ್​​ 09: 6 ಕಡೆ ಕಂಪನಿಗಳೇ ಹೆಚ್ಚುವರಿ ಎಥೆನಾಲ್ ಮಿಶ್ರಣ ಮಾಡುತ್ತಿದ್ದು, ಎಥೆನಾಲ್ ಮಿಶ್ರಣ ಆಟೋ ಮ್ಯಾಟಿಕ್ ಎಂದು ಹೇಳುತ್ತಾರೆ. ಹೆಚ್ಚುವರಿ ಮಿಶ್ರಣ ಡೀಲರ್ಸ್ ಕೆಲಸ ಅಂತಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿದ್ದೆ ಸತ್ಯ ಎನ್ನುವಂತಾಗಿದೆ. ಬೇರೆಯವರು ಸತ್ಯ ಹೇಳಿದ್ರೆ ಒತ್ತಡ ಹೇರುತ್ತಾರೆ ಎಂದು ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ. ಪೆಟ್ರೋಲ್​ಗೆ ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಆರೋಪ ಸಂಬಂಧ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ತೈಲ ಕಂಪನಿಗಳು ತಾಂತ್ರಿಕವಾಗಿ ಉತ್ತರಿಸಿವೆ’

ಕಳೆದ ಶುಕ್ರವಾರ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ಎಥೆನಾಲ್ ಪ್ರಮಾಣ ಬಗ್ಗೆ ಚೆಕ್ ಮಾಡಿಸಿದ್ದೆವು. ರಾಷ್ಟ್ರವ್ಯಾಪಿ ಈ ವಿಚಾರ ಚರ್ಚೆಗೆ ಬಂದಿದೆ. ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣದಿಂದ ದಿನನಿತ್ಯ ಪೆಟ್ರೋಲ್ ಬಳಕೆ ಮಾಡುವ ವರ್ಗಕ್ಕೆ ಎಫೆಕ್ಟ್ ಆಗುತ್ತಿದೆ. ರಾಜ್ಯ ಸರ್ಕಾರದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಂತರ ಜನ ಭಾವನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವರದಿಯನ್ನು ದೇಶದ ಜನ ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಮಾಹಿತಿಗೆ ಉತ್ತರ ಕೊಡಬೇಕಿತ್ತು. ಕೇಂದ್ರ ಸರ್ಕಾರ ತೈಲ ಮಾರಾಟ ಕಂಪನಿಗಳಿಂದ ಉತ್ತರ ಕೊಡಿಸಿದೆ. ನಾವು ನಮ್ಮ ವರದಿ ಬಗ್ಗೆ ಗಟ್ಟಿಯಾಗಿ ನಿಂತಿದ್ದೇವೆ, ವರದಿ ಸರಿ ಇದೆ. ತೈಲ ಕಂಪನಿಗಳು ತಾಂತ್ರಿಕವಾಗಿ ಉತ್ತರಿಸಿವೆ, ನೇರ ಉತ್ತರ ಕೊಟ್ಟಿಲ್ಲ. ಎಷ್ಟು ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಆಗ್ತಿದೆ ಎಂದು ಕೇಳಲಾಗಿತ್ತು. ಅದಕ್ಕೆ ತೈಲ ಕಂಪನಿಗಳಿಂದ ನೇರ ಉತ್ತರ ಬಂದಿಲ್ಲ ಎಂದವರು ಹೇಳಿದ್ದಾರೆ.

ಇದನ್ನೂ ಓದಿ: ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಕೇಂದ್ರದ ವಿರುದ್ಧ ಸಚಿವ ಎಂಬಿ ಪಾಟೀಲ್​ ಕಿಡಿ

ಎಥೆನಾಲ್​ನಲ್ಲಿ ಕ್ಲೋರೈಡ್, ಸಲ್ಫರ್ ಜಾಸ್ತಿ ಇದೆ, ಇಂಜಿನ್ ಹಾಳಾಗ್ತಿದೆ. 30% ಎಥೆನಾಲ್ ಮಿಕ್ಸ್ ಮಾಡಿದ್ರೆ ಸಮಸ್ಯೆ ಇದೆ ಎಂದು BMW ಹೇಳಿದೆ. ನಿಮ್ಮ ಸ್ಯಾಂಪಲ್ಸ್ ಸರಿಯಿಲ್ಲ ಎಂದು ತೈಲ ಮಾರಾಟ ಕಂಪನಿ ಹೇಳಿದೆ. ಆದರೆ ನಮ್ಮ ಸ್ಯಾಂಪಲ್ಸ್ ಸರಿ ಇದೆ. ಎಥೆನಾಲ್​​ ಪ್ರಮಾಣ ಕಂಡು ಹಿಡಿಯುವುದೇನು ರಾಕೆಟ್​​ ಸೈನ್ಸಾ? ಇಲ್ಲಿ ಆರೋಪಿಗಳೂ, ನ್ಯಾಯಾಧೀಶರೂ ಅವರೇ ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.

ಕೇರಳದಲ್ಲಿಯೂ ಪೆಟ್ರೋಲ್​​ ಮಾದರಿ ಸಂಗ್ರಹ

ಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್ ಪತ್ತೆ ಹಿನ್ನೆಲೆ ಕೇರಳದ 4 ಜಿಲ್ಲೆಗಳಲ್ಲಿಯೂ ಪೆಟ್ರೋಲ್ ಮಾದರಿ ಸಂಗ್ರಹ ನಡೆದಿದೆ. ತಿರುವಂತಪುರಂ, ಎರ್ನಾಕುಲಂ, ಕೋಝಿಕ್ಕೋಡ್, ಕಣ್ಣೂರಿನ ತಲಾ 5 ಪೆಟ್ರೋಲ್ ಬಂಕ್‌ಗಳಿಂದ ಮಾದರಿಗಳನ್ನು ಸರ್ಕಾರಿ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗ್ತಿದೆ. ಪರೀಕ್ಷಾ ವರದಿ 10 ದಿನಗಳೊಳಗೆ ಲಭ್ಯವಾಗುವ ನಿರೀಕ್ಷೆ ಇದ್ದು, ಶೇ.20ಕ್ಕಿಂತ ಹೆಚ್ಚು ಎಥೆನಾಲ್​ ಪತ್ತೆಯಾದ್ರೆ ಪೆಟ್ರೋಲ್ ಬಂಕ್ ಸೀಲ್ ಮಾಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್