ಬೆಂಗಳೂರಿನ 10 ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ISEC

ಬೆಂಗಳೂರಿನಾದ್ಯಂತ 10 ಪ್ರಮುಖ ಜಂಕ್ಷನ್‌ಗಳಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಇದ್ದು ಅದನ್ನು ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ತಾಂತ್ರಿಕ ಪ್ರಸ್ತಾವಗಳ ಕರಡು ವರದಿಯನ್ನು ಸಲ್ಲಿಸಲಾಗಿದೆ.

ಬೆಂಗಳೂರಿನ 10 ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ISEC
ಬೆಂಗಳೂರು ಟ್ರಾಫಿಕ್
Follow us
TV9 Web
| Updated By: ಆಯೇಷಾ ಬಾನು

Updated on: Aug 06, 2023 | 12:31 PM

ಬೆಂಗಳೂರು, ಆ.06: ಬೆಂಗಳೂರಿನಲ್ಲಿರುವ ಪ್ರಮುಖ ಸಂಶೋಧನಾ ಸಂಸ್ಥೆಯಾದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ISEC) ನಗರದಲ್ಲಿ ಅಧ್ಯಯನ ನಡೆಸಿ 10 ಜಂಕ್ಷನ್​ಗಳಲ್ಲಿ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆ ಇದ್ದು ಅದನ್ನು ನಿವಾರಿಸಲು ಶಿಫಾರಸುಗಳೊಂದಿಗೆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಬೆಂಗಳೂರಿನಾದ್ಯಂತ 10 ಪ್ರಮುಖ ಜಂಕ್ಷನ್‌ಗಳಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಇದ್ದು ಅದನ್ನು ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ತಾಂತ್ರಿಕ ಪ್ರಸ್ತಾವಗಳ ಕರಡು ವರದಿಯನ್ನು ಸಲ್ಲಿಸಲಾಗಿದೆ. ಸಾರಕ್ಕಿ ಜಂಕ್ಷನ್, ಸಿಲ್ಕ್ ಬೋರ್ಡ್, ಕಾಡುಬೀಸನಹಳ್ಳಿ, ಟಿನ್ ಫ್ಯಾಕ್ಟರಿ, ಹೆಬ್ಬಾಳ, ಡೈರಿ ಸರ್ಕಲ್, ಗೊರಗುಂಟೆಪಾಳ್ಯ, ಬನಶಂಕರಿ, ಇಬ್ಬಲೂರು, ಮತ್ತು ಕುಮಾರಸ್ವಾಮಿ ಲೇಔಟ್ ಈ 10 ಜಂಕ್ಷನ್‌ಗಳಲ್ಲಿ ಪ್ರತ್ಯೇಕವಾಗಿ ಕೈಗೊಳ್ಳಬೇಕಿರುವ ತಾಂತ್ರಿಕ ಕ್ರಮ, ಸಿಗ್ನಲ್‌ ನಿರ್ವಹಣೆ, ಎಲಿವೇಟೆಡ್‌ ವಾಕ್‌ವೇ, ಎಲಿವೇಟೆಡ್‌ ರಸ್ತೆ, ಅಂಡರ್‌ಪಾಸ್‌ಗಳನ್ನು ನಿರ್ಮಿಸಲು ಶಿಫಾರಸು ಮಾಡಿದೆ.

ಆನ್-ಗ್ರೌಂಡ್ ಸಮೀಕ್ಷೆ ಮತ್ತು ಕಾರ್ಯಸಾಧ್ಯತೆಯ ಅಧ್ಯಯನವನ್ನು ನಡೆಸಿದ ಐಎಸ್‌ಇಸಿ, ಅಲ್ಪಾವಧಿಯಲ್ಲಿ ಸಿವಿಲ್‌ ಕಾಮಗಾರಿಗಾಗಿ ₹ 25 ಕೋಟಿ ಮೀಸಲಿಡುವಂತೆ ಸರ್ಕಾರವನ್ನು ಕೇಳಿದೆ. ಹೆಚ್ಚುವರಿಯಾಗಿ, ಎಂಟು ಜಂಕ್ಷನ್‌ಗಳು ಮತ್ತು ಕ್ಲಸ್ಟರ್‌ಗಳಲ್ಲಿ ಫುಟ್‌ಪಾತ್‌ಗಳ ನಿರ್ಮಾಣಕ್ಕೆ ನಿರ್ದಿಷ್ಟವಾಗಿ ₹8.9 ಕೋಟಿ ಹಂಚಿಕೆಗೆ ವರದಿಯು ಒತ್ತು ನೀಡಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ವಿವಿಧ ಪಾಲುದಾರರೊಂದಿಗೆ ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಅದಕ್ಕಾಗಿ ಶಿಫಾರಸುಗಳನ್ನು ಕೋರಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಮರದಿಂದ ಬಿದ್ದು ಮಾಜಿ ಬಿಜೆಪಿ ಶಾಸಕ ಗನ್​ಮ್ಯಾನ್ ಸಾವು, ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ರೈತ ಬಲಿ

ವಾಲ್ಯೂಮ್-ಟು-ಕ್ಯಾಪಾಸಿಟಿ (ವಿ/ಸಿ) ಅನುಪಾತ ಹೆಚ್ಚಿರುವ ಜಂಕ್ಷನ್‌ಗಳಲ್ಲಿ ಪರಿಹಾರವಾಗಿ ಈ ಶಿಫಾರಸನ್ನು ಮುಂದಿಡಲಾಗಿದೆ. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಇತರ ವಿಧಾನವೆಂದರೆ ವಾಹನಗಳಿಗೆ ಡೈವರ್ಷನ್ ನೀಡುವುದು. ಆದರೆ ಅದು ಸಾಧ್ಯವಾಗದಿದ್ದರೆ, ಇದು ತಾಂತ್ರಿಕವಾಗಿ ಕಾರ್ಯಸಾಧ್ಯವಾದ ಪರಿಹಾರವಾಗಿದೆ ಎಂದು ಅಧ್ಯಯನ ನಡೆಸಿದ ಸಂಶೋಧಕರಲ್ಲಿ ಒಬ್ಬರಾದ ಪ್ರೊ.ಕೃಷ್ಣ ರಾಜ್ ತಿಳಿಸಿದರು.

ಸಾರಕ್ಕಿ, ಡೇರಿ ವೃತ್ತ, ಸಿಲ್ಕ್‌ ಬೋರ್ಡ್‌, ಕುಮಾರಸ್ವಾಮಿ ಲೇಔಟ್‌, ಇಬ್ಬಲೂರುಗಳಲ್ಲಿ ₹3.5 ಕೋಟಿ ವೆಚ್ಚದಲ್ಲಿ ಸ್ಕೈವಾಕ್‌ ಮತ್ತು ₹7 ಕೋಟಿ ವೆಚ್ಚದಲ್ಲಿ ಸಿಎಂಟಿಎ ಜಂಕ್ಷನ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸಲು ಖಾಸಗಿ ಬಸ್‌ಗಳಿಗೆ ಎಚ್‌ಎಸ್‌ಆರ್‌ ರಸ್ತೆ ಸಮೀಪ ಹಾಗೂ ಬಿಎಂಟಿಸಿ ಬಸ್‌ಗಳಿಗೆ ಸಿಲ್ಕ್‌ ಬೋರ್ಡ್‌ ಸಮೀಪ ವಾಹನ ನಿಲ್ದಾಣಗಳ ಪ್ರತ್ಯೇಕ ನಿರ್ಮಾಣ. ನಾಲ್ಕು ಕಡೆ ಮೆಟ್ರೊ ಜೊತೆಗೆ 8.25 ಕಿ.ಮೀ (ಪ್ರತಿ ಕಿ.ಮೀಗೆ ₹72 ಲಕ್ಷ) ಪಾದಚಾರಿ ಸುಧಾರಣೆ ಸೇರಿದಂತೆ ತಾಂತ್ರಿಕ ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ