ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು
ಅಂಬಿಕಾಪತಿ ಸೋದರ ಪ್ರದೀಪ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 7:00 PM

ಬೆಂಗಳೂರು, ಅ.13: ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಬೆಂಗಳೂರಿನ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ಮಾಡಿದ್ದರು. ಈ ವೇಳೆ ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯ ಮಂಚದಡಿ ಬಚ್ಚಿಟ್ಟಿದ್ದ  ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಹೌದು, ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ (Former Corporator)​​​​ ​​​ಅಶ್ವತ್ಥಮ್ಮ, ಪತಿ ಗುತ್ತಿಗೆದಾರ ಆರ್​.ಅಂಬಿಕಾಪತಿ ಮತ್ತು ​ಅಂಬಿಕಾಪತಿ ಸೋದರ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆಯಲಾಗಿದೆ.

ಪ್ರದೀಪ್​ನನ್ನು ವಶಕ್ಕೆ ಪಡೆದ ಐಟಿ ಅಧಿಕಾರಿಗಳು

ಹೌದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ
ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಈ ಹಣ ಯಾರಿಗೆ ಸೇರಿದ್ದು, ಯಾಕೆ ಸಂಗ್ರಹಿಸಲಾಗಿತ್ತು, ಎಲ್ಲಿಗೆ ಕಳುಹಿಸಲು ಪ್ಲಾನ್​?

ಇನ್ನು ಈ ಹಣವನ್ನು ಬೆಂಗಳೂರಿನಲ್ಲಿ ಬಿಲ್ಡರ್ಸ್​​​, ಚಿನ್ನದ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರಿಂದ ಈ ಹಣ ಸಂಗ್ರಹಿಸಲಾಗಿದ್ದು, ಈ  ಹಣವನ್ನು ಬೆಂಗಳೂರಿನಿಂದ-ಚೆನ್ನೈಗೆ, ಚೆನ್ನೈಯಿಂದ-ಹೈದ್ರಬಾದ್​ಗೆ ವಾರ್ಗವಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತೆಲೆಂಗಾಣ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇಲ್ಲಿ ಹಣ ಸಂಗ್ರಹಿಸಿ ಅಲ್ಲಿಗೆ ಕಳುಹಿಸಲು ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ. ಚುನಾವಣೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಅಲರ್ಟ್​​​ ಆಗಿದ್ದು, ಕಳೆದ ಮೂರು ದಿನಗಳಿಂದ ರೇಡ್​​​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರ: ಬಾಕ್ಸ್​ಗಳಲ್ಲಿ ಕಂತೆ-ಕಂತೆ ಹಣ ಪತ್ತೆ: ಬಿಲ್ಡರ್​, ಚಿನ್ನದ ವ್ಯಾಪಾರಿ, ಗುತ್ತಿಗೆದಾರರಿಂದ ಇಷ್ಟೊಂದು ಹಣ ಸಂಗ್ರಹಿಸಿದ್ಯಾಕೆ? ಇಲ್ಲಿದೆ ಇನ್ ಸೈಡ್​ ಮಾಹಿತಿ

ಅಂಬಿಕಾಪತಿ ಮನೆ ಮೇಲೂ ಐಟಿ ದಾಳಿ

ಈ ಘಟನೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಮನೆ, ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
Loading...
Unable to load recommendations.
Follow Us