ನಮಗೆ BBMP ಬೇಡ, ಪ್ರತ್ಯೇಕ ಮುನ್ಸಿಪಲ್​ ವಲಯ ನೀಡಿ: ರಾಜ್ಯ ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳಿಂದ ಪತ್ರ

ಹೊರವರ್ತುಲ ರಸ್ತೆ, ಸುತ್ತಮುತ್ತ ಪ್ರದೇಶ ಪ್ರತ್ಯೇಕ ಮುನ್ಸಿಪಲ್ ವಲಯವೆಂದು ಘೋಷಿಸಲು ಹೊರವರ್ತುಲ ರಸ್ತೆಯ ಕಂಪನಿಗಳ ಸಂಘ ಮನವಿ ಮಾಡಿದೆ.

ನಮಗೆ BBMP ಬೇಡ, ಪ್ರತ್ಯೇಕ ಮುನ್ಸಿಪಲ್​ ವಲಯ ನೀಡಿ: ರಾಜ್ಯ ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳಿಂದ ಪತ್ರ
ಬೆಳ್ಳಂದೂರು ಮಳೆ
Follow us
TV9 Web
| Updated By: ಆಯೇಷಾ ಬಾನು

Updated on:Sep 14, 2022 | 8:23 AM

ಬೆಂಗಳೂರು: ನಮಗೆ BBMP ಬೇಡ, ಪ್ರತ್ಯೇಕ ಮುನ್ಸಿಪಲ್​ ವಲಯ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳು ಪತ್ರ ಬರೆದಿವೆ. ಬಿಬಿಎಂಪಿ ಐಟಿ ಕಂಪನಿಗಳಿರುವ ಪ್ರದೇಶ ಅಸಮರ್ಪಕವಾಗಿ ನಿರ್ವಹಣೆ ಮಾಡುತ್ತಿದೆ. ಹೊರವರ್ತುಲ ರಸ್ತೆ, ಸುತ್ತಮುತ್ತ ಪ್ರದೇಶ ಪ್ರತ್ಯೇಕ ಮುನ್ಸಿಪಲ್ ವಲಯವೆಂದು ಘೋಷಿಸಲು ಹೊರವರ್ತುಲ ರಸ್ತೆಯ ಕಂಪನಿಗಳ ಸಂಘ ಮನವಿ ಮಾಡಿದೆ.

ಇತ್ತೀಚೆಗೆ ಸುರಿದ ಮಳೆಯಿಂದ ಐಟಿ ಬಿಟಿ ಕಂಪನಿಗಳಿಗೆ ಹಾನಿಯಾಗಿತ್ತು. ಐಟಿ ಬಿಟಿ ನೌಕರರ ಲೇಔಟ್ ಗಳಿಗೆ ಮಳೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸರ್ಕಾರಕ್ಕೆ ಪ್ರತ್ಯೇಕ ಮುನ್ಸಿಪಲ್ ವಲಯ ಕೋರಿ ಮನವಿ ಸಲ್ಲಿಸಲಾಗಿದೆ. ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ಒಆರ್‌ಆರ್‌ಸಿಎ) ಐಟಿ ಸಚಿವ ಸಿಎನ್ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ 17 ಕಿಮೀ ವ್ಯಾಪ್ತಿಯನ್ನು ಪ್ರತ್ಯೇಕ ಪುರಸಭೆಯ ವಲಯವಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ. ಇನ್ನು ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ತಮಗೆ ಆದ ನಷ್ಟದ ಬಗ್ಗೆ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿ ತನ್ನ ಅಳಲು ತೋಡಿಕೊಂಡಿದೆ. ಇದನ್ನೂ ಓದಿ: ಸುಮಾರು 40 ಐಟಿ-ಬಿಟಿ ಕಂಪನಿಗಳಿಂದ ರಾಜಕಾಲುವೆ ಒತ್ತುವರಿಯಾಗಿದೆ: ಸಚಿವ ಆರ್.ಅಶೋಕ್

2027ಕ್ಕೆ ಕ್ರಿಯಾ ಯೋಜನೆಯನ್ನು ಅಭಿವೃದ್ಧಿಪಡಿಸಬೇಕು ಮತ್ತು ಪ್ರತ್ಯೇಕ ಪುರಸಭೆಯ ವಲಯ ರಚನೆಯ ಮೇಲ್ವಿಚಾರಣೆಗೆ ತಜ್ಞರ ಸಮಿತಿಯನ್ನು ಕರೆಯಬೇಕು ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ. ಹೊಸ ವಲಯವು ವಿಶ್ವ ದರ್ಜೆಯ ತಂತ್ರಜ್ಞಾನ ಕಾರಿಡಾರ್ ಆಗಿ ಪರಿವರ್ತಿಸಲು ಸ್ಪಷ್ಟವಾದ ಐದು ವರ್ಷಗಳ ಯೋಜನೆಯನ್ನು ಹೊಂದಿರಬೇಕು ಎಂದು ಹೇಳಿದೆ. ಹೊಸ ಮುನ್ಸಿಪಲ್ ವಲಯದ ಆಡಳಿತದ ನಿರ್ವಹಣೆಯು ಸಾರ್ವಜನಿಕ ಖಾಸಗಿ ಸಹಭಾಗಿತ್ವವನ್ನು ಒಳಗೊಂಡಿರಬೇಕು. ಅದರ ಜವಾಬ್ದಾರಿ ನಿರ್ವಹಣೆ ಮತ್ತು ಐಟಿ-ಬಿಟಿ ಸಚಿವಾಲಯದ ಮೇಲ್ವಿಚಾರಣೆಯನ್ನು ಹೊಂದಿರಬೇಕು ಎಂದು ಸಲಹೆ ನೀಡಿದೆ. ಇದು ಟೆಕ್ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನವನ್ನು ಸಹ ಕೋರಿದೆ.

ಒಆರ್‌ಆರ್‌ಸಿಎ ಸದಸ್ಯರು ಈ ಹಿಂದೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಗಸ್ಟ್ 30 ರಂದು ನಮಗೆ ಮೂಲಸೌಕರ್ಯಗಳ ಕೊರೆತೆ ಇದೆ. ಇಲ್ಲಿ ಕಳಪೆ ಮೂಲಸೌಕರ್ಯಗಳಿಂದ ನಮಗೆ ತೊಂದರೆ ಆಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದ ತಮಗೆ 225 ಕೋಟಿ ರೂಪಾಯಿಗಳ ನಷ್ಟ ಆಗಿದೆ ಎಂದು ಪತ್ರ ಬರೆದಿದ್ದರು. ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

Published On - 8:23 am, Wed, 14 September 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?