ಮುಂದಿನ ಮಳೆಗಾಲದಲ್ಲಿ​ ಎಷ್ಟೇ ಮಳೆ ಬಂದರೂ ಬೆಂಗಳೂರಲ್ಲಿ ಪ್ರವಾಹ ಆಗಲ್ಲ : ಸಚಿವ ಅಶ್ವಥ್ ನಾರಾಯಣ್ ಭರವಸೆ

ಐಟಿ-ಬಿಟಿ ಕಂಪನಿ ಜೊತೆ ಬೆಂಗಳೂರು ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಡಾ. ಸಿ. ಎನ್​ ಅಶ್ವತ್​ ನಾರಾಯಣ ಹೇಳಿದ್ದಾರೆ.

ಮುಂದಿನ ಮಳೆಗಾಲದಲ್ಲಿ​ ಎಷ್ಟೇ ಮಳೆ ಬಂದರೂ ಬೆಂಗಳೂರಲ್ಲಿ ಪ್ರವಾಹ ಆಗಲ್ಲ : ಸಚಿವ ಅಶ್ವಥ್ ನಾರಾಯಣ್ ಭರವಸೆ
ಐಟಿ-ಬಿಟಿ ಕಂಪನಿಗಳೊಂದಿಗೆ ಸಚಿವ ಅಶ್ವಥ್​ ನಾರಾಯಣ ಸಭೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 07, 2022 | 10:35 PM

ಬೆಂಗಳೂರು: ಐಟಿ-ಬಿಟಿ (IT-BT) ಕಂಪನಿ ಜೊತೆ ಬೆಂಗಳೂರು (Bengaluru) ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಡಾ. ಸಿ. ಎನ್​ ಅಶ್ವತ್​ ನಾರಾಯಣ (Ashwath Narayan) ಹೇಳಿದ್ದಾರೆ. ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿ ಐಟಿ-ಬಿಟಿ ಕಂಪನಿ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು ಮಳೆಯಿಂದ ಆಗಿರುವ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಮಹದೇವಪುರ ಕ್ಷೇತ್ರ ಸುತ್ತಮುತ್ತಿನ ಹಾನಿ ಬಗ್ಗೆ ಚರ್ಚೆ ಆಗಿದೆ ಎಂದರು.

ಯಾವುದೇ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡಲು ನಾವು ಸಿದ್ಧರಿದ್ದೇವೆ. ಮುಂದಿನ ಬಾರಿ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಬಿಬಿಎಂಪಿ ವಲಯ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಬೆಂಗಳೂರು ನಗರದ ಹಲವೆಡೆ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.

ನಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳಲು ನಾವು ಸಿದ್ಧರಿದ್ದೇವೆ. ಬೆಂಗಳೂರಿಗೆ ಅಪಕೀರ್ತಿ ತರಲು ಯಾರೂ ಮಾತನಾಡಿಲ್ಲ. ಏನೇ ಸಮಸ್ಯೆ ಇದ್ದರೂ ಬಗೆಹರಿಸಿಕೊಳ್ಳೋಣ ಎಂದಿದ್ದೇವೆ. ಐಟಿ-ಬಿಟಿ ಕಂಪನಿಗಳಿಂದ ಸಲಹೆ, ಮಾರ್ಗದರ್ಶನ ಪಡೆದಿದ್ದೇವೆ ಎಂದು ತಿಳಿಸಿದರು.

ಸಮಸ್ಯೆ ಇಲ್ಲದೇ ನಿರ್ವಹಣೆ ಮಾಡಲು ಸಂಪೂರ್ಣ ಸಹಕಾರ ಇದೆ‌. ಸ್ಪಷ್ಟವಾಗಿ ಸರ್ಕಾರವೂ ಉತ್ತರ ಕೂಡ ನೀಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಈ ಯೋಜನೆಯನ್ನು ತಿಳಿಸಿದ್ದಾರೆ. ಮಹದೇವಪುರ ಕ್ಷೇತ್ರ ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮಳೆಯಿಂದ ಆಗಿರೋ ಸಮಸ್ಯೆ ಬಗ್ಗೆ ಚರ್ಚೆಯಾಗಿದೆ. ಅಲ್ಲಿನ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಮಾಡಿದರೆ, ಯಾವುದೇ ಮಳೆ, ಪ್ರವಾಹ ಬಂದರೂ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡಲು ನಾವು ಬದ್ದರಾಗಿದ್ದೇವೆ. ಮಹದೇವಪುರದಲ್ಲಿ ಫ್ಲಡ್ ಆಗದಂತೆ ನೋಡಿಕೊಳ್ಳುವುದಾಗಿ ಅವರಿಗೆ ತಿಳಿಸಿದ್ದೇವೆ. ಅವರ ಕಡೆಯಿಂದಲೂ ಸಮಾಧಾನಕರವಾಗಿದ್ದಾರೆ. ತಿಂಗಳಿಗೊಮ್ಮೆ ವರ್ಚುವಲ್ ಮೀಟಿಂಗ್ ಮಾಡಲು ನಿರ್ಧಾರ ಮಾಡಿದ್ದೇವೆ. ತಿಂಗಳಲ್ಲಿ ಕನಿಷ್ಠ ಒಂದು ಸಭೆ ಮಾಡುತ್ತೇವೆ ಎಂದು ಮಾತನಾಡಿದರು.

ಮುಂದಿನ ಮಾನ್ಸೂನ್​ನಲ್ಲಿ​ ಎಷ್ಟೇ ಮಳೆ ಬಂದರೂ ಪ್ರವಾಹ ಆಗಲ್ಲ. ಹೇಗೆ ಮಾಡುತ್ತೇವೆ ಅಂತ ಮಾಡಿ ತೋರಿಸುತ್ತೇವೆ. ಯಾವುದೇ ಬೇಡಿಕೆ ಇದ್ದರು ಟೈಮ್ ಲೈನ್ ಬೇಕು. ಅದನ್ನ ಹಂತ ಹಂತವಾಗಿ ಮಾಡುತ್ತೇವೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ವಿಂಗ್ ಇರಬೇಕು ಅಂತ ಹೇಳಿದ್ದಾರೆ. ಐದು ವರ್ಷದ ಪ್ಲಾನ್ ಅವರು ಕೇಳಿದ್ದಾರೆ. ಹೊಸೂರು ರಸ್ತೆಯಲ್ಲಿ ಮೆಟ್ರೋ, ಎಲಿವೇಟೆಡ್ ಕಾರಿಡಾರ್ ಬಗ್ಗೆ ಹೇಳಿದ್ದಾರೆ. ನಿಮಗೆ ಏನು ಬೇಕು ಹೇಳಿ, ನಾವು ಎಲ್ಲವನ್ನೂ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ನುಡಿದರು.

ಮೋಹನ್ ದಾಸ್ ಪೈ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು ಮೋಹನ್ ದಾಸ್ ಪೈ ಮಾಹಿತಿ ನೀಡಿದ್ದಾರೆ. ಅವರು ನಮ್ಮನ್ನು ಹೊಗಳಿರುವ ವಿಚಾರವೂ ಇದೆ. ಅವರು ನಮ್ಮ ಬೆಂಗಳೂರಿನ ಧ್ವನಿ. ಅವರನ್ನು ನಾವು ಎಂದೂ ಖಂಡಿಸಿಲ್ಲ. ಅವರ ಸಲಹೆ, ಮಾರ್ಗದರ್ಶನ ಪಡೆದಿದ್ದೇವೆ‌ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಬೆಂಗಳೂರು ಜಲಮಂಡಲಿ ಅಧಿಕಾರಿಗಳು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಇನ್ಫೋಸಿಸ್, ವಿಪ್ರೊ, ಎಂಫಸಿಸ್, ನಾಸ್ಕಾಂ, ಗೋಲ್ಡ್ಮನ್ ಸ್ಯಾಕ್ಸ್, ಇಂಟೆಲ್, ಟಿಸಿಎಸ್, ಫಿಲಿಪ್ಸ್, ಸೊನಾಟಾ ಸಾಫ್ಟ್‌ವೇರ್ ಮುಂತಾದ ಕಂಪನಿಗಳ ಮುಖ್ಯಸ್ಥರು ಇಲ್ಲವೇ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Wed, 7 September 22

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ