IT Raid: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ
ಬೆಂಗಳೂರಿನಲ್ಲಿ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಆರೋಪದ ಮೇಲೆ ದಾಳಿ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಬೆಂಗಳೂರು, (ಸೆಪ್ಟೆಂಬರ್ 27): ಬೆಂಗಳೂರಿನಲ್ಲಿ (Bengaluru) ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ(IT Raid). 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ (IT Officers) ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು(ಸೆ.27) ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.
ಆ ಉದ್ಯಮಿ ಯಾರು? ಯಾಕಾಗಿ ದಾಳಿ ಮಾಡಲಾಗಿದೆ? ಏಷ್ಟು ತೆರಿಗೆ ವಂಚನೆ ಮಾಡಿದ್ದಾರೆ ಎನ್ನುವ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಎಲ್ಲಾ ದಾಖಲೆ ಪರಿಶೀಲನೆ ನಡೆಸಿದ ಬಳಿಕ ಖುದ್ದು ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಪತ್ರಿಕಾ ಪ್ರಕರಣೆ ಮೂಲಕ ಮಾಹಿತಿ ನೀಡಲಿದ್ದಾರೆ.
Published On - 10:27 am, Wed, 27 September 23