IT Raids: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ, ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್

IT Raid: ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 04) ಬೆಳ್ಳಂಬೆಳಗ್ಗೆ ಐಟಿ ನಡೆದಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಬಂಂದಿದ್ದು, ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿವೆ.

IT Raids: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ  ದಾಳಿ, ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 04, 2023 | 9:05 AM

ಬೆಂಗಳೂರು, (ಅಕ್ಟೋಬರ್ 04): ಬೆಂಗಳೂರಿನ (Bengaluru 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ(IT Raid) ಮಾಡಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 04) ಬೆಳ್ಳಂಬೆಳಗ್ಗೆ ಬೆಂಗಳೂರಿನ 10 ಕಡೆಗಳಲ್ಲಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಬಂಂದಿದ್ದು, ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿವೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್​ಐಆರ್ 

ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಎಲ್ಲೆಲ್ಲಿ ದಾಳಿ?

  • ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಸಹ ಐಟಿ ದಾಳಿಯಾಗಿದೆ. ಪ್ರಶಾಂತನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
  • ಬೆಂಗಳೂರಿನ ಮೇಕ್ರಿಸರ್ಕಲ್ ಬಳಿಯ ಗಜರಾಜ ಜುವೆಲರ್ಸ್ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಅಂಗಡಿ ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
  • ಬೆಂಗಳೂರಿನ ಶಾಂತಿನಗರದ ಉದ್ಯಮಿ ನವೀನ್​ ಮನೆ ಮೇಲೂ ಐಟಿ ದಾಳಿಯಾಗಿದೆ. ಎರಡು ಇನೋವಾ ಕಾರಿನಲ್ಲಿ ಬಂದಿರುವ ಎಂಟು ಮಂದಿ ಐಟಿ ಅಧಿಕಾರಿಗಳು, ನವೀನ್ ಅವರ ಶಾಂತಿನಗರದಲ್ಲಿನ ದೊಡ್ಡ ಐಶಾರಾಮಿ ಬಂಗಲೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಕಳೆದ ತಿಂಗಳು ಅಂದರೆ ಸೆಪ್ಟೆಂಬರ್ 27ರಂದು ಸಹ ಬೆಂಗಳೂರಿನ ವಿವಿದೆಡೆ ಐಟಿ ದಾಳಿಯಾಗಿತ್ತು. ಬೆಂಗಳೂರಿನ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:18 am, Wed, 4 October 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ