AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎನ್ನುವುದು ಸುಳ್ಳು ಸುದ್ದಿ; ಪೆಟ್ರೋಲ್ ಬಂಕ್ ಮಾಲೀಕರ ಸಂಘದಿಂದ ಸ್ಪಷ್ಟನೆ

Petrol bunk Owners Strike: ತೆರಿಗೆ ನೀತಿ ಪ್ರಶ್ನಿಸಿ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಮುಷ್ಕರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲ ಪೆಟ್ರೋಲ್ ಬಂಕ್ಗಳು ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ. ನಾಳೆ ಪೆಟ್ರೋಲ್ ಬಂಕ್ ಬಂದ್ ಎನ್ನುವುದು ಸುಳ್ಳು ಸುದ್ದಿ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟ ಪಡಿಸಿದೆ.

ನಾಳೆ ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎನ್ನುವುದು ಸುಳ್ಳು ಸುದ್ದಿ; ಪೆಟ್ರೋಲ್ ಬಂಕ್ ಮಾಲೀಕರ ಸಂಘದಿಂದ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:May 30, 2022 | 5:07 PM

Share

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂಬುವುದು ಸುಳ್ಳು ಸುದ್ದಿ ಎಂದು ಟಿವಿ9ಗೆ ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ. ನಾಳೆ ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎನ್ನುವುದು ಸುಳ್ಳು ಸುದ್ದಿ. ಬೆಂಗಳೂರು ಸೇರಿ ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಬಂದ್ ಪ್ರಶ್ನೆ ಇಲ್ಲ. ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಸಮಸ್ಯೆ ಆಗಲ್ಲ ಎಂದು ತಿಳಿಸಿದ್ದಾರೆ.

ತೆರಿಗೆ ನೀತಿ ಪ್ರಶ್ನಿಸಿ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಮುಷ್ಕರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲ ಪೆಟ್ರೋಲ್ ಬಂಕ್ಗಳು ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ. ನಾಳೆ ಪೆಟ್ರೋಲ್ ಬಂಕ್ ಬಂದ್ ಎನ್ನುವುದು ಸುಳ್ಳು ಸುದ್ದಿ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟ ಪಡಿಸಿದೆ. ಇದನ್ನೂ ಓದಿ: GT vs RR Final: ಕೊಹ್ಲಿ ದಾಖಲೆ ಮುರಿಯಲ್ಲಾಗಲಿಲ್ಲ! ಈ ಐಪಿಎಲ್​ನಲ್ಲಿ ಬಟ್ಲರ್ ಸೃಷ್ಟಿಸಿದ ಪ್ರಮುಖ ದಾಖಲೆಗಳಿವು

ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್​ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್ ಡೀಸೆಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಸದ್ಯ ಇದು ಸುಳ್ಳು ನಾಳೆ ಎಂದಿನಂತೆ ಎಲ್ಲಾ  ಪೆಟ್ರೋಲ್ ಬಂಕ್ ತೆರೆಯಲಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟ ಪಡಿಸಿದೆ.

ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಂದಿನಂತೆ ವಾಹನ ಸವಾರರಿಗೆ ಇಂಧನ ಲಭ್ಯವಾಗಲಿದೆ. ನಾಳೆ ಒಂದು ದಿನದ ಮುಷ್ಕರಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮುಂದಾಗಿದ್ದರು. ಆದರೆ ಈಗಾಗಲೇ ಮಂಗಳವಾರ ಮತ್ತು ಬುಧವಾರಕ್ಕೆ ಆಗುವಷ್ಟು ಇಂಧನವನ್ನು ಶನಿವಾರ ಮತ್ತು ಭಾನುವಾರವೇ ಮಾಲೀಕರು ಖರೀದಿ ಮಾಡಿದ್ದಾರೆ. ಹೀಗಾಗಿ ಗ್ರಾಹಕರಿಗೆ ನಾಳೆ ಯಾವುದೇ ಸಮಸ್ಯೆ ಆಗೋದಿಲ್ಲ ಎಂದು ಪೆಟ್ರೋಲ್ ಬಂಕ್ ಮಾಲೀಕರು ತಿಳಿಸಿದ್ದಾರೆ.

Published On - 4:35 pm, Mon, 30 May 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!