AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​; ಈ ಬಗ್ಗೆ ಚರ್ಚೆ ಮಾಡ್ತೀನಿ -ಸಿಎಂ ಸಿದ್ದರಾಮಯ್ಯ

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ‌ ಮಾಡ್ತಾರೆ ಎಂದರು.

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​; ಈ ಬಗ್ಗೆ ಚರ್ಚೆ ಮಾಡ್ತೀನಿ -ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on: Jun 25, 2024 | 1:35 PM

Share

ಬೆಂಗಳೂರು, ಜೂನ್.25: ರಾಜ್ಯದಲ್ಲಿ ಎದುರಾದ ದರ ಬಿಸಿ ಏರಿಕೆ ನಡುವೆ ಕೆಎಂಎಫ್ (KMF) ಕೂಡ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಹಾಲಿನ ಪ್ರಮಾಣವನ್ನ(Milk Price) ಹೆಚ್ಚಿಸೋದ್ರ ಜೊತೆಗೆ ದರವನ್ನೂ ಏರಿಸಿದೆ. ಒಂದು ಲೀಟರ್ ಬದಲಿಗೆ 1050 ಎಂಎಲ್​ನ ಪ್ಯಾಕೆಟ್ ಹಾಲು​ ಸಿಗಲಿದೆ. 50 ಎಂಲ್​ ಹಾಲಿನ ಪ್ಯಾಕೆಟ್​ಗೆ 2 ರೂಪಾಯಿ ದರ ಏರಿಸಲಾಗಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ‌ ಮಾಡ್ತಾರೆ. ನನಗೆ ಗೊ‌ತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.

ಸದ್ಯ ಕೆಎಂಎಫ್‌ನ 1 ಲೀಟರ್‌ ಹಾಲಿಗೆ ಪ್ರಸ್ತುತ ದರ $42. ಆದರೆ, 1 ಲೀಟಲ್‌ ಹಾಲಿಗೆ ಹೆಚ್ಚುವರಿಯಾಗಿ 50 ಎಂಎಲ್‌ ಸೇರ್ಪಡೆ ಮಾಡಲಾಗ್ತಿದೆ. ಆ 50 ಎಂಎಲ್‌ ಹಾಲಿನ 2 ರೂಪಾಯಿ 10 ಪೈಸೆಯಾಗುತ್ತೆ. ಅದಕ್ಕಾಗಿ 1050 ಎಂಎಲ್‌ನ ಈ ಪ್ಯಾಕೆಟ್ ಹಾಲಿನ ದರ ನಾಳೆಯಿಂದ 44 ರೂಪಾಯಿ ಆಗಿರಲಿದೆ. ನಿಜಕ್ಕೂ 44 ರೂಪಾಯಿ 10 ಪೈಸೆ ದರ ಏರಿಕೆಯಾಗಬೇಕು. 10 ಪೈಸೆ ಕಡಿಮೆ ಮಾಡಲಾಗ್ತಿದೆ. ಜತೆಗೆ ಏಜೆಂಟ್‌ರಿಗೆ 10 ಪೈಸೆ ಹೆಚ್ಚಿನ ಬೆಲೆಯನ್ನೇ ಸರ್ಕಾರವೇ ಭರಿಸಲಿದೆಯಂತೆ. ಲೀಟರ್‌ಗೆ 20 ಪೈಸೆಯಷ್ಟು ಸರ್ಕಾರಕ್ಕೇ ನಷ್ಟವಾಗುತ್ತಂತೆ. ಜತೆಗೆ ಅರ್ಧ ಲೀಟರ್‌ ಹಾಲಿಗೂ 50 ಎಂಎಲ್‌ ಹೆಚ್ಚಿಸಿದ್ರೆ ಹೆಚ್ಚುವರಿ 2 ರೂಪಾಯಿ ರೇಟ್ ನಾಳೆಯಿಂದ ಜಾರಿಗೆ ಬರಲಿದೆ.

ಇದನ್ನೂ ಓದಿ: Nandini Milk Price Hike: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ

ಇನ್ನು ಇದೇ ವೇಳೆ ಡಿಸೆಂಬರ್‌ 20ರಿಂದ 3 ದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಬಳಿಕ ಸಿಎಂ ಮಾಹಿತಿ ನೀಡಿದ್ದಾರೆ. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21 ಮತ್ತು 22ರಂದು ನಡೆಯಲಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಎಲ್ಲ‌ ರೀತಿ ಸಹಕಾರ ನೀಡುತ್ತೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಶೀಘ್ರವೇ ಪ್ರಕಟಿಸುತ್ತೇವೆ. ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ನವರು ಕೆಲ ಹೆಸರುಗಳನ್ನು ನೀಡಿದ್ದಾರೆ. ಚರ್ಚೆ ಮಾಡಿ ಹೆಸರು ಅಂತಿಮಗೊಳಿಸಲಾಗುವುದು. ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ