IT Raids In Bengaluru: ಲೋಕಾಯುಕ್ತ ಬೆನ್ನಲ್ಲೇ ಬೆಂಗಳೂರಿನಲ್ಲಿ ಐಟಿ ದಾಳಿ

IT officials raid On businessman: ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ಇಂದು(ನವೆಂಬರ್ 21) ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ.

IT Raids In Bengaluru: ಲೋಕಾಯುಕ್ತ ಬೆನ್ನಲ್ಲೇ ಬೆಂಗಳೂರಿನಲ್ಲಿ ಐಟಿ ದಾಳಿ
ಸಾಂದರ್ಭಿಕ ಚಿತ್ರ
Edited By:

Updated on: Nov 21, 2023 | 8:58 AM

ಬೆಂಗಳೂರು, (ನವೆಂಬರ್ 21): ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ಇಂದು(ನವೆಂಬರ್ 21) ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ(IT Raids). ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್ ನಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವರ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ನಿನ್ನೆ(ನವೆಂಬರ್ 2)) ಅಷ್ಟೇ ಬೆಂಗಳೂರಿನಲ್ಲಿ ಒಟ್ಟು 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. ಅಲ್ಲದೇ ಮೊನ್ನೇ ಬೆಂಗಳೂರಿನ ವಿವಿದೆಡೆ ಡ್ರೈಫ್ರೂಟ್ ವ್ಯಾಪಾರಿಗಳ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 am, Tue, 21 November 23