ಡಿಕೆ ಶಿವಕುಮಾರ್ ಆಪ್ತ ಯುಬಿ ಶೆಟ್ಟಿ ಮನೆ ಮೇಲೆ ಐಟಿ ದಾಳಿ; ದಾಖಲೆ ಇಲ್ಲದ 70 ಕೋಟಿ ಮೌಲ್ಯದ ಆದಾಯ ಪತ್ತೆ

ಪ್ರಾಜೆಕ್ಟ್ ನಿರ್ಮಾಣದ ವೇಳೆ ನಕಲಿ ಬಿಲ್ ತೋರಿಸಿ, ಕಬ್ಬಿಣ ಹಲವು ಸಾಮಗ್ರಿ ಖರೀದಿಸಿ ಹಣ ಮಂಜೂರು ಮಾಡಿಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ. ಶೆಟ್ಟಿ ಕಂಪನಿ ನಕಲಿ ಬಿಲ್ ತೋರಿಸಿ ಹಣ ಮಂಜೂರು ಮಾಡಿಸಿಕೊಂಡಿತ್ತು ಎಂದು ಹೇಳಲಾಗಿದೆ.

ಡಿಕೆ ಶಿವಕುಮಾರ್ ಆಪ್ತ ಯುಬಿ ಶೆಟ್ಟಿ ಮನೆ ಮೇಲೆ ಐಟಿ ದಾಳಿ; ದಾಖಲೆ ಇಲ್ಲದ 70 ಕೋಟಿ ಮೌಲ್ಯದ ಆದಾಯ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 03, 2021 | 3:45 PM

ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೊಸ ವಿಚಾರವೊಂದು ಬಯಲಾಗಿದೆ. ಯು.ಬಿ. ಶೆಟ್ಟಿ ಬಳಿ ದಾಖಲೆ ಇಲ್ಲದ 70 ಕೋಟಿ ಮೌಲ್ಯದ ಆದಾಯ ಪತ್ತೆಯಾಗಿದೆ. ಅಕ್ಟೋಬರ್ 28 ರಂದು ಯು.ಬಿ. ಶೆಟ್ಟಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿತ್ತು. ಉಡುಪಿ, ಧಾರವಾಡದ ಮನೆ, ಮಂಗಳೂರಿನಲ್ಲಿ ಐಟಿ ದಾಳಿ ಮಾಡಲಾಗಿತ್ತು. ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ಸಿವಿಲ್ ಗುತ್ತಿಗೆದಾರನಾಗಿದ್ದ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆಯಲ್ಲಿ ಬೋಗಸ್ ಬಿಲ್​​ಗಳು, ಎಲೆಕ್ಟ್ರಾನಿಕ್ ಡಿವೈಸ್​ಗಳು ಪತ್ತೆಯಾಗಿವೆ. ಉತ್ತರ ಕರ್ನಾಟಕದಲ್ಲಿ ನೀರಾವರಿಗೆ ಕೆಲವು ಪ್ರಾಜೆಕ್ಟ್ ವಹಿಸಿಕೊಂಡಿದ್ದರು. ಪ್ರಾಜೆಕ್ಟ್ ನಿರ್ಮಾಣದ ವೇಳೆ ನಕಲಿ ಬಿಲ್ ತೋರಿಸಿ, ಕಬ್ಬಿಣ ಹಲವು ಸಾಮಗ್ರಿ ಖರೀದಿಸಿ ಹಣ ಮಂಜೂರು ಮಾಡಿಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ. ಶೆಟ್ಟಿ ಕಂಪನಿ ನಕಲಿ ಬಿಲ್ ತೋರಿಸಿ ಹಣ ಮಂಜೂರು ಮಾಡಿಸಿಕೊಂಡಿತ್ತು ಎಂದು ಹೇಳಲಾಗಿದೆ.

ಪ್ರಾಣಿ ಸಾಕಾಣಿಕೆ‌ ಕೇಂದ್ರಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ಐಟಿ ಇಲಾಖೆಯ ಅಧಿಕಾರಿಗಳು ಇಂದು (ನವೆಂಬರ್ 3) ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಣಿ ಸಾಕಾಣಿಕೆ‌ ಕೇಂದ್ರಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಹಸು, ಕುರಿ, ಕೋಳಿ ಸಾಕಾಣಿಕೆ‌ ಕೇಂದ್ರಗಳ ಮೇಲೆ ದಾಳಿ ಮಾಡಲಾಗಿದೆ. ತಮಿಳುನಾಡು, ಕರ್ನಾಟಕ, ಕೇರಳದಲ್ಲಿ 40 ಕಡೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಆದಾಯ ತೆರಿಗೆ ವಂಚನೆ ಆರೋಪ ತಿಳಿದುಬಂದಿದೆ. ಈ ಸಂಬಂಧ ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆದಾಯದಿಂದ ಗಳಿಸಿದ್ದ ಸ್ಥಿರಾಸ್ತಿಗಳು ಪತ್ತೆ ಆಗಿದೆ. ದಾಳಿ ವೇಳೆ 3.3 ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. 300 ಕೋಟಿಗೂ ಹೆಚ್ಚು ಅಕ್ರಮ ಆಸ್ತಿಯನ್ನು ಐಟಿ ಪತ್ತೆ ಹಚ್ಚಿದೆ.

ತುಮಕೂರು: ಲಂಚ ಸ್ವೀಕರಿಸುವಾಗ ಎಸಿಬಿ ದಾಳಿ ಪ್ರಕರಣವೊಂದರಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ದಾಳಿ ನಡೆಸಲಾಗಿದೆ. ಸಿ.ಎಸ್. ಪುರ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆದಿದೆ.  ಪಿಎಸ್​ಐ ಸೋಮಶೇಖರ್, ಸಿಬ್ಬಂದಿ ನಯಾಜ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಈ ಬಗ್ಗೆ ಎಸಿಬಿ ಅಧಿಕಾರಿಗಳು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡ ಅಗ್ರಹಾರ ಗ್ರಾಮ ಪಂಚಾಯತ್ ಅಧ್ಯಕ್ಷ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ವೈರಲ್ ಆಗಿದೆ. ಕ್ರಷರ್ ಘಟಕದ ಮಾಲೀಕನಿಗೆ 2 ಲಕ್ಷ ಲಂಚ ನೀಡುವಂತೆ ಒತ್ತಾಯಿಸಿದ್ದ ಆಡಿಯೋ ವೈರಲ್ ಆಗಿದೆ. ಅಧ್ಯಕ್ಷ ರಾಜಶೇಖರ್ ಮಾತಾಡಿದ್ದಾರೆಂಬ ಆಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಡಿಸಿಎಂ ಅಜಿತ್​ ಪವಾರ್​ಗೆ ಬಿಗ್​ ಶಾಕ್​; 1000 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ಐಟಿ

ಇದನ್ನೂ ಓದಿ: Bengaluru: ವಿಕ್ರಂ ಇನ್ವೆಸ್ಟ್​ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ