IT Raid: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಐಟಿ ದಾಳಿ
IT Raid: ಆದಾಯ ತೆರಿಗೆ ವಂಚನೆ ಹಿನ್ನೆಲೆ, ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳಿಂದ ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರು: ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ಐಟಿ ದಾಳಿಯಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳು ಶೋಭಾ ಡೆವಲಪರ್ಸ್ ಮೇಲೆ ದಾಳಿ ಮಾಡಿದ್ದಾರೆ. ಇಂದು(ಮಾರ್ಚ್ 20) ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಸುಮಾರು 50 ವಾಹನಗಳಲ್ಲಿ ಹತ್ತು ಅಧಿಕಾರಿಗಳನ್ನೊಳಗೊಂಡ ಐದು ತಂಡಗಳಿಂದ ಏಕಕಾಲಕ್ಕೆ ದಾಳಿಯಾಗಿದ್ದು, ಅಧಿಕಾರಿಗಳು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಪರಿಶೀಲನೆ
ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಐವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನು ಐಟಿ ದಾಳಿ ಹಿನ್ನಲೆ ಶೋಬಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಇಂದಿನ ಕೆಲಸ ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಯಾವುದೇ ನೌಕರರನ್ನ ಹೊರಗೆ ಹೋಗದಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ಎಲ್ಲ ನೌಕರರನ್ನ ಕಚೇರಿ ಅವರಣದಲ್ಲೆ ಸ್ಥಳೀಯ ಪೊಲೀಸರು ಇರಿಸಿದ್ದಾರೆ.
IT ದಾಳಿ ವಿಚಾರ; IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಎಂದ ರಾಜ್ಯ ಉಸ್ತುವಾರಿ ಸುರ್ಜೇವಾಲ
ಇನ್ನು ಶೋಭಾ ಡೆವಲಪರ್ಸ್ ಮೇಲೆ IT ದಾಳಿ ವಿಚಾರ ಕುರಿತು ಮಾತನಾಡಿದ ಸುರ್ಜೇವಾಲಾ‘ IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಆಗಿದೆ. ಸಿಬಿಐ ಎನ್ನುವುದು ಕ್ಯಾಪ್ಟ್ಯೂವ್ ಬ್ಯೂರೋ ಇನ್ವೆಸ್ಟಿಗೇಶನ್ ಆಗಿದೆ. ಬಿಜೆಪಿ ED, CBI ಬಳಸಿಕೊಂಡು ಚುನಾವಣೆ ತಯಾರಿ ನಡೆಸಿದೆ. ಚುನಾವಣೆ ಮೈದಾನದಲ್ಲಿ IT, ED, CBI ಇಳದಿವೆ. ನಮ್ಮ ಮೇಲೆ ಸುಳ್ಳು ಸುಳ್ಳು ಆರೋಪ ಹೇರಲು ಮುಂದಾಗಿದೆ. ಇಂದು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದೆ ಎಂದಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:08 pm, Mon, 20 March 23