AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ಐಟಿ ದಾಳಿ

ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್​​ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ಐಟಿ ದಾಳಿ
KGF Babu
ಆಯೇಷಾ ಬಾನು
|

Updated on:Apr 19, 2023 | 10:57 AM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 20 ದಿನಗಳು ಮಾತ್ರ ಬಾಕಿ ಇವೆ. ಎಲ್ಲೆಡೆ ರಾಜಕೀಯ ಪಕ್ಷಗಳ ಪ್ರಚಾರ ಜೋರಾಗಿದೆ. ಇದರ ನಡುವೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು ಪದೇ ಪದೇ ದಾಳಿ ನಡೆಸುತ್ತಿದ್ದಾರೆ(IT Raid). ಕಳೆದ ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು(KGF Babu) ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ(Congress) ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿ ರಾಜ್ಯಾದ್ಯಂತ 50 ಕಡೆ ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಕೆಜಿಎಫ್ ಬಾಬು ಚಿಕ್ಕಪೇಟೆ ಕ್ಷೇತ್ರದ ಸ್ಪರ್ಧಿ

ಇಂದು(ಏಪ್ರಿಲ್ 19) ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್​​ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಪೇಟೆ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಬಯಸಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೆಜಿಎಫ್ ಬಾಬು, ಕ್ಷೇತ್ರದಲ್ಲಿ ಅನೇಕ ಸಾಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್​ ಪಕ್ಷವು ಬಾಬುಗೆ ಟಿಕೆಟ್ ನೀಡಲಿಲ್ಲ. ಹಾಗಾಗಿ ​ಬಾಬು ಅವರು ತಮ್ಮ ಪತ್ನಿಯನ್ನು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ ಎಂಬುದು ಗಮನಾರ್ಹ.

ಇದನ್ನೂ ಓದಿ: Karnataka Elections: ಪದ್ಮನಾಭನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡು ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್​ನವರನ್ನು ಹೆದರಿಸೋಕೆ ಏನು ಬೇಕಾದರೂ ಮಾಡಲಿ

ಇನ್ನು ಐಟಿ ದಾಳಿ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಜತೆ ಇರುವವರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿದೆ. ಕಾಂಗ್ರೆಸ್​ನವರನ್ನು ಹೆದರಿಸೋಕೆ ಏನು ಬೇಕಾದರೂ ಮಾಡಲಿ. ಅವರು ಏನೇ ಮಾಡಿದರೂ ನಾವು ರಾಜ್ಯದಲ್ಲಿ ಬದಲಾವಣೆ ತರುತ್ತೇವೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ನಡೆಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:25 am, Wed, 19 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್