ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ
ಎಚ್ ​ಡಿ ಕುಮಾರಸ್ವಾಮಿ
Follow us
TV9 Web
| Updated By: preethi shettigar

Updated on:Oct 12, 2021 | 12:41 PM

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿ ವಿಚಾರವಾಗಿ ಇಂದು (ಅಕ್ಟೋಬರ್​ 12) ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ. ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸಹಾ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರಬೇಕು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಸಿದ್ದರಾಮಯ್ಯಗೆ ಬೇಕಾಗಿರುವುದು ಕೇವಲ ಅಧಿಕಾರ. ಅಧಿಕಾರ ಸಿಕ್ಕರೆ ಎಲ್ಲಿ ಬೇಕಾದರೂ ಹೋಗುತ್ತಾರೆ. ಕಾಂಗ್ರೆಸ್‌ಗೆ ಹೋಗಿದ್ದು ಅಧಿಕಾರಕ್ಕಾಗಿ ಅಲ್ಲವೇ? ಅಧಿಕಾರಕ್ಕಾಗಿ ಏನು ಕುತಂತ್ರ ಮಾಡಿದರೆಂದು ಗೊತ್ತಿದೆ. ವಿಪಕ್ಷ ಸ್ಥಾನದಲ್ಲಿ ಕೂರಲು 23 ಶಾಸಕರ ಹೊಟ್ಟೆ ಮೇಲೆ ಸಿದ್ದರಾಮಯ್ಯ ಹೊಡೆದಿದ್ದಾರೆ. ಸಿದ್ದರಾಮಯ್ಯ ಸ್ವಾರ್ಥಕ್ಕಾಗಿ ಇದೆಲ್ಲಾ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಪುಟಗೋಸಿ ವಿಪಕ್ಷ ಸ್ಥಾನಕ್ಕಾಗಿ ಇದೆಲ್ಲಾ ಮಾಡಿದ್ದೀರಿ. ಮೈತ್ರಿ ಸರ್ಕಾರ ತೆಗೆಯಲು ಮಹಾನ್ ಕೆಲಸ ಮಾಡಿದ್ದೀರಿ. ಯಡಿಯೂರಪ್ಪ ಸಿಎಂ ಆದಾಗ ಸಿದ್ದರಾಮಯ್ಯ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ್ದು, ಸಿದ್ದರಾಮಯ್ಯಗೆ ನನ್ನ ಬಗ್ಗೆ‌ ಮಾತನಾಡದಿದ್ದರೆ ನಿದ್ದೆ ಬರುವುದಿಲ್ಲ. ಮಂಡ್ಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಿಸಿದರು ಅಂತಾ ನಾನು ಹೇಳಿಲ್ಲ. ಸಿದ್ದರಾಮಯ್ಯ ಸ್ವತಃ ಬೆನ್ನು ತಟ್ಟಿಕೊಳ್ಳುವುದು ಬೇಡ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಕುತಂತ್ರದಿಂದ ನಿಖಿಲ್‌ರನ್ನು ಸೋಲಿಸಿದರು: ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿಕೊಂಡು ಮಂಡ್ಯದಲ್ಲಿ ಕುತಂತ್ರದಿಂದ ನಿಖಿಲ್‌ರನ್ನು ಸೋಲಿಸಿದರು. ಮಹಾಭಾರತದಲ್ಲಿ ಕೌರವರಂತೆ ಚಕ್ರವ್ಯೂಹವನ್ನು ರಚಿಸಿದರು. ಆ ಚಕ್ರವ್ಯೂಹದಲ್ಲಿ ನಿಖಿಲ್‌ರನ್ನು ಸಿಲುಕಿಸಿ ಸೋಲಿಸಿದ್ದರು. ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾತ್ರ ಏನೂ ಇಲ್ಲ. ಸಿದ್ದರಾಮಯ್ಯನವರು ಸ್ವತಃ ಬೆನ್ನು ತಟ್ಟಿಕೊಳ್ಳುವುದು ಬೇಡ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಾ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ? ಸಿದ್ದರಾಮಯ್ಯಗೆ ಹೆಚ್​ಡಿಕೆ ಪ್ರಶ್ನೆ

ಯಡಿಯೂರಪ್ಪ ಆಪ್ತನ ಮೇಲೆ ಐಟಿ ದಾಳಿ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿ ಪ್ರಯಾಣ

Published On - 12:17 pm, Tue, 12 October 21