ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲಕ್ಕೆ ಬೆಂಗಳೂರಿನ 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ದಾಳಿ ಮಾಡಿದ್ದಾರೆ. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.  

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ
ಆದಾಯ ತೆರಿಗೆ ಇಲಾಖೆ
Follow us
ವಿವೇಕ ಬಿರಾದಾರ
|

Updated on:Nov 27, 2024 | 1:32 PM

ಬೆಂಗಳೂರು, ನವೆಂಬರ್​ 27: ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲಕ್ಕೆ ಬೆಂಗಳೂರಿನ (Bengaluru) 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ದಾಳಿ ಮಾಡಿದ್ದಾರೆ. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ತಿಂಗಳು (ನ.07) ರಂದು ಐಟಿ ಅಧಿಕಾರಿಗಳು ಬೆಂಗಳೂರಿನ ಕೆಲವು ಕಂಪನಿಗಳಿಗೆ ಚುರುಕು ಮುಟ್ಟಿಸಿದ್ದರು. ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಕೆಲವು ಕಂಪನಿಗಳ ಮೇಲೆ ದಾಳಿ ಮಾಡಿದ್ದರು. ಕೆಲಸದ ಮೂಡ್​ನಲ್ಲಿದ್ದ ಸಿಬ್ಬಂದಿಗೆ ಶಾಕ್​ ನೀಡಿದ್ದರು.

ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿತ್ತು ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ: ಅಕ್ರಮ: ಬಿಬಿಎಂಪಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಇಡಿ ದಾಳಿ, ಮುಡಾ ಅಧಿಕಾರಿಗಳ ವಿಚಾರಣೆ

ಮುಡಾ ಹಗರಣ ಸಂಬಂಧ ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ‌ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಬಿಲ್ಡರ್​ಗಳಾದ ಮಂಜುನಾಥ್, ಜಯರಾಮ್ ಮನೆ ಮತ್ತು ಕಚೇರಿ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ದಾಳಿಯಾಗಿತ್ತು. ಐವರು ಮುಡಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್​ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅಂತೆಯೇ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವರದಿ: ಪ್ರದೀಪ್​

Published On - 11:50 am, Wed, 27 November 24

Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?