ಬೆಂಗಳೂರು, (ನವೆಂಬರ್ 16): ಬೆಂಗಳೂರಿನಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್ ಅಂಗಡಿ, ಮಾಲೀಕರ ಮನೆಗಳ ಮೇಲೆ ಐಟಿ ದಾಳಿಯಾಗಿದೆ. ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈ ಫ್ರೂಟ್ಸ್ ಅಂಗಡಿ, ಮಾಲೀಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಐಟಿ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.