ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ದುರದೃಷ್ಟಕರ ಎಂದ ಗೃಹ ಸಚಿವ, ದೌರ್ಜನ್ಯ ಎಂದ ಸಿದ್ದರಾಮಯ್ಯ

ಕರ್ನಾಟಕದ ವಿವಿಧೆಡೆ ನಡೆಯುತ್ತಿರುವ ಜಾತ್ರೆಗಳಲ್ಲಿ ಹಿಂದೂಯೇತರ ಸಮುದಾಯಗಳಿಗೆ ಸೇರಿದವರು ವ್ಯಾಪಾರ, ವ್ಯವಹಾರ ನಡೆಸುವಂತಿಲ್ಲ ಎಂದು ನಿರ್ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ದುರದೃಷ್ಟಕರ ಎಂದ ಗೃಹ ಸಚಿವ, ದೌರ್ಜನ್ಯ ಎಂದ ಸಿದ್ದರಾಮಯ್ಯ
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 23, 2022 | 11:06 AM

ಬೆಂಗಳೂರು: ಕರ್ನಾಟಕದ ವಿವಿಧೆಡೆ ನಡೆಯುತ್ತಿರುವ ಜಾತ್ರೆಗಳಲ್ಲಿ ಹಿಂದೂಯೇತರ ಸಮುದಾಯಗಳಿಗೆ ಸೇರಿದವರು ವ್ಯಾಪಾರ, ವ್ಯವಹಾರ ನಡೆಸುವಂತಿಲ್ಲ ಎಂದು ನಿರ್ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಇಲ್ಲ, ತರಿಸಿಕೊಳ್ಳುತ್ತೇನೆ’ ಎಂದು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ವಿರೋಧಿಸಿ ಒಂದು ಕೋಮಿಗೆ ಸೇರಿದವರು ಬಂದ್ ಮಾಡಿ ಪ್ರತಿಕ್ರಿಯಿಸಿದರು. ಅದರ ಮುಂದುವರಿದ ಭಾಗವಾಗಿ ಹೀಗಾಗುತ್ತಿದೆ. ಇದು ದುರದೃಷ್ಟಕರ ಬೆಳವಣಿಗೆ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದರು.

ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಳ್ಳುತ್ತೇವೆ. ಈ ಎಲ್ಲ ಪರಿಸ್ಥಿತಿಗೆ ಕಾಂಗ್ರೆಸ್‌ನವರೇ ಕಾರಣ. ಅವರೇ ಹೊಣೆ ಹೊರಬೇಕು. ಅಧಿಕಾರಕ್ಕಾಗಿ ಒಂದು ಕೋಮಿನ ಓಲೈಕೆ ಮಾಡಿ ಈ ದೇಶದಲ್ಲಿ ಎಲ್ಲಾ ಮನಸ್ಸನ್ನು ಒಡೆದಿದ್ದು ಕಾಂಗ್ರೆಸ್ಸಿಗರು ಎಂದು ಖಂಡಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ಎಲ್ಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ. ವಿವಾದ ಕುರಿತ ಸಂಪೂರ್ಣ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಶಾಂತಿ ಸುವ್ಯವಸ್ಥೆಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್​ನವರು ಸತ್ಯ ಹೇಳುವುದನ್ನು ಮರೆತರು. ಕಾಂಗ್ರೆಸ್​ನವರ ಪ್ರತಿಕ್ರಿಯೆಗೆ ಯಾವ ಬೆಲೆಯೂ ಇಲ್ಲ. ಜನಸಮುದಾಯವು ಕೇಳುವುದಿಲ್ಲ ಎಂದು ವಿವರಿಸಿದರು.

ವ್ಯಾಪಾರಕ್ಕೆ ಅವಕಾಶ ಕೊಡಬೇಕು: ಡಿಕೆಶಿ ಕಲಬುರ್ಗಿ: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ಸರಿಯಲ್ಲ. ಎಲ್ಲಕಡೆ ಎಲ್ಲರಿಗೂ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಚರ್ಚ್, ಮಸೀದಿ ಮುಂದೆ ಹಿಂದುಗಳಿಗೆ ಅವಕಾಶ ನೀಡದೇ ಹೋದ್ರೆ ಏನಾಗುತ್ತೆ? ಅನೇಕರು ಅನೇಕ ರೀತಿಯ ಕೆಲಸ ಮಾಡುತ್ತಿದ್ದಾರೆ. ಯಾರೂ ತೊಂದರೆ ಕೊಡುವ ಕೆಲಸವನ್ನು ಮಾಡಬಾರದು ಎಂದು ಸಲಹೆ ಮಾಡಿದರು.

ಸಹಬಾಳ್ವೆಗೆ ಒತ್ತುಕೊಡಿ: ಖಾದರ್ ಮಂಗಳೂರು: ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ಇಲ್ಲಿ ಎಲ್ಲ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ ಕೆಲವರು ಧರ್ಮಗಳ ನಡುವೆ ಕಂದಕವನ್ನು ಸೃಷ್ಟಿಸುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ವಿಪಕ್ಷದ ಉಪನಾಯಕರಾಗಿರುವ ಯು.ಟಿ.ಖಾದರ್ ಹೇಳಿದರು. ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳು ವಿರೋಧಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು ಕರಾವಳಿ ಭಾಗದ ಮುಲ್ಕಿ ಸೇರಿದಂತೆ ಹಲವೆಡೆ ಕೆಲವರು ಸ್ವಹಿತಾಸಕ್ತಿಗಾಗಿ ಭಿತ್ತಿಪತ್ರಗಳನ್ನು ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ. ಇದೊಂದು ಅಸಹ್ಯದ ಕೃತ್ಯ. ಇದಕ್ಕೆ ಹಿಂದೂ ಸಹೋದರರು ಬೆಂಬಲ ಕೊಡಬಾರದು. ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದೆ. ಒಳಗೊಳಗೆ ಖುಷಿ ಪಡುತ್ತಿದೆಯಾ? ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ‌ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪ ಮಾಡಿದರು.

ಅವಕಾಶ ನಿರಾಕರಣೆ ತಪ್ಪು: ಸಿದ್ದರಾಮಯ್ಯ ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಈ ರೀತಿ ಅವಕಾಶ ನಿರಾಕರಿಸುವುದು ತಪ್ಪು ಎಂದಿದ್ದಾರೆ. ಅಂಗಡಿ ಟೆಂಡರ್ ನಿರಾಕರಿಸುವುದು, ಅವಕಾಶ ನಿರಾಕರಣೆ ಮಾಡುವುದು ದೌರ್ಜನ್ಯ ಎನಿಸಿಕೊಳ್ಳುತ್ತದೆ. ಇದು ಮೂಲಭೂತ ಹಕ್ಕನ್ನು ಹತ್ತಿಕ್ಕುವ ಕೆಲಸ. ಇದು ಸಂಪೂರ್ಣ ಕಾನೂನು ಬಾಹಿರ ಎಂದಿದ್ದಾರೆ. ನಮ್ಮ ದೇಶದಲ್ಲಿ ಮುಕ್ತ ವ್ಯಾಪಾರಕ್ಕೆ ಅವಕಾಶವಿದೆ. ಮುಕ್ತ ವ್ಯಾಪಾರಕ್ಕೆ ನಿರ್ಬಂಧಿಸುವುದು ಕಾನೂನುಬಾಹಿರವಾಗುತ್ತದೆ ಎಂದರು.

ಇದನ್ನೂ ಓದಿ: ಕನಕಾಚಲಪತಿ ಗರುಡೋತ್ಸವ, ಶಿವಮೊಗ್ಗ ಕೋಟೆ ಮಾರಿಕಾಂಬ, ಮಂಗಳೂರು ಬಪ್ಪನಾಡು ಜಾತ್ರೆ ಆರಂಭ

ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕಿಲ್ಲ ಜಾಗ, ಭಜರಂಗ ದಳದಿಂದ ಕ್ಯಾಂಪೇನ್

Published On - 10:53 am, Wed, 23 March 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ