AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಬಂತು ಲಸಿಕೆ: ಶಾಲೆಗಳಲ್ಲಿ ಲಸಿಕಾಕರಣದ ಬಗ್ಗೆ ಸಚಿವ ಸುಧಾಕರ್ ಮಾಹಿತಿ

ಜೆಇ (ಜೆನವ್ಯಾಕ್ ಜೆಇ) ಮೆದುಳು ಜ್ವರ ನಿಯಂತ್ರಣಕ್ಕೆ ನಾಳೆಯಿಂದ (ಡಿ. 05) 48 ಲಕ್ಷ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲು ತೀರ್ಮಾನಿಸಿದ್ದು, ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಬಂತು ಲಸಿಕೆ: ಶಾಲೆಗಳಲ್ಲಿ ಲಸಿಕಾಕರಣದ ಬಗ್ಗೆ ಸಚಿವ ಸುಧಾಕರ್ ಮಾಹಿತಿ
ಆರೋಗ್ಯ ಸಚಿವ ಡಾ. ಕೆ. ಸುಧಾಕರ್
TV9 Web
| Edited By: |

Updated on:Dec 04, 2022 | 5:05 PM

Share

ಬೆಂಗಳೂರು: ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆಯನ್ನು ಜೆಇ ಮೆದುಳು ಜ್ವರ (JE Brain fever) ಉಂಟು ಮಾಡುತ್ತದೆ. ಹಾಗಾಗಿ ಈ ಜೆಇ (ಜೆನವ್ಯಾಕ್ ಜೆಇ) ಮೆದುಳು ಜ್ವರ ನಿಯಂತ್ರಣ ಹಿನ್ನೆಲೆ ಡಿ. 05 ರಿಂದ 48 ಲಕ್ಷ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (DrKSudhakar) ಮಾಹಿತಿ ನೀಡಿದ್ದಾರೆ. ಡಿಸೆಂಬರ್ ಮೊದಲನೇ ವಾರದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಲಾಗಿದೆ. ಮೊದಲ ವಾರದಲ್ಲಿ ಶಾಲೆಗಳಲ್ಲಿ ಲಸಿಕಾಕರಣ, ಬಳಿಕ 10 ಜಿಲ್ಲೆಗಳಲ್ಲಿ 1 ಮತ್ತು 2ನೇ ಡೋಸ್ ಲಸಿಕೆ ಹಾಕಲಾಗುವುದು. 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪ್ಲೇವಿ ವೈರಸ್ ಎಂಬ ವೈರಾಣುವಿನಿಂದ ಜೆಇ ಮೆದುಳು ಜ್ವರ ಬರುತ್ತದೆ. ಕ್ಯೂಲೆಕ್ಸ್ ಸೊಳ್ಳೆಗಳ ಮೂಲಕ ಈ ಜ್ವರ ಹರಡುತ್ತದೆ.

ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಎರಡು ವಾರಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಮೆದುಳು ಜ್ವರ) ಪಿಡುಗು ಗುರುತಿಸಲ್ಪಟ್ಟಿದೆ. ಭಾರತ ಸೇರಿದಂತೆ ಏಷ್ಯಾದ 11 ರಾಷ್ಟ್ರಗಳು ಪಟ್ಟಿಯಲ್ಲಿವೆ. 1955 ರಲ್ಲಿ ತಮಿಳುನಾಡಿನ ವೆಲ್ಲೂರ್​ನಲ್ಲಿ ಜೆಇ ಮೆದುಳು ಜ್ವರದ ಮೊದಲ ಪ್ರಕರಣ ವರದಿಯಾಗಿತ್ತು.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ; ದೇಶದಲ್ಲಿ ಕರ್ನಾಟಕ 3ನೇ ಸ್ಥಾನ; ಡಾ. ಕೆ ಸುಧಾಕರ್ ಮಾಹಿತಿ

ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ರೋಗ ಪತ್ತೆಗೆ ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Sun, 4 December 22

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ