ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ; ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ

| Updated By: preethi shettigar

Updated on: Mar 25, 2022 | 8:12 PM

ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ. ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿದೆ.

ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ; ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ
ರೇಣುಕಾಚಾರ್ಯ ಜಯಂತಿ
Follow us on

ಬೆಂಗಳೂರು: ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ (Jagadguru Renukacharya Jayanti) ಆಚರಣೆ ಮಾಡುವಂತೆ ರಾಜ್ಯ ಸರ್ಕಾರ (State Government) ಆದೇಶ ಪ್ರಕಟಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಅಧಿಕೃತವಾಗಿ ಈ ಬಗ್ಗೆ ಆದೇಶ ಹೊರಡಿಸಿದೆ. ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ (celebration) ರಾಜ್ಯ ಸರ್ಕಾರಕ್ಕೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ. ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿದೆ.

ರೇಣುಕಾಚಾರ್ಯ ಅವರು ತಮ್ಮ ಸಿದ್ಧಾಂತ ಶಿಖಾಮಣಿಯಂತಹ ಮಹಾನ್​ ಗೃಂಥವನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹರ್ದತೆ ಬದುಕನ್ನು ಅವರು ನಮಗೆ ಬೋಧಿಸಿದ್ದಾರೆ. ಸದ್ಯ ಇಂತಹ ಮಹಾನ್​ ವ್ಯಕ್ತಿಯ ಜಯಂತಿಯನ್ನು ಮಾರ್ಚ್​ 16 ರಂದು ಆಚರಿಸಿಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಬೆಂಗಳೂರು: ಟಿಪ್ಪು ಇತಿಹಾಸವನ್ನು ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರ: ಬಿ.ಸಿ ನಾಗೇಶ್ ಸ್ಪಷ್ಟನೆ

ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಲಾಗಿದೆಯಾ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೆ, ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸವನ್ನು ಕೈಬಿಟ್ಟಿಲ್ಲ. ಆದರೆ, ಟಿಪ್ಪು ಬಗ್ಗೆ ವೈಭವೀಕರಿಸಿದ ಮಾಹಿತಿಗೆ ಬ್ರೇಕ್ ಹಾಕಲಾಗಿದೆ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಹಾಕಲಾಗಿದೆ. ಈ ಬಗ್ಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಸತ್ಯಾಸತ್ಯತೆ ಇನ್ನಷ್ಟೇ ತಿಳಿದುಬರಬೇಕಿದೆ.

ಆದರೆ, ಪಠ್ಯ ಪುಸ್ತಕದಲ್ಲಿ ಟಿಪ್ಪು ಇತಿಹಾಸವನ್ನು ಕೈಬಿಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ. ಟಿಪ್ಪು ಇತಿಹಾಸ ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರ. ಇತಿಹಾಸದ ಕೆಲ ವಿಚಾರಗಳು ಪಠ್ಯ ಪುಸ್ತಕದಲ್ಲಿ ಕಡೆಗಣನೆ ಮಾಡಲಾಗಿತ್ತು. ಕಡೆಗಣಿಸಿದ ವಿಷಯವನ್ನು ಪರಿಚಯಿಸಲು ಪ್ರಯತ್ನಿಸ್ತಿದ್ದೇವೆ. ಇತಿಹಾಸವನ್ನು ತಿರುಚಲು ಯತ್ನಿಸಿದ್ದನ್ನ ಸರಿಪಡಿಸುತ್ತೇವೆ. ಪಠ್ಯದಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ಈ ಬಗ್ಗೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.

ದುಪಟ್ಟಾ ಧರಿಸಲು ಅನುಮತಿ ನೀಡಲು ಸಿದ್ದರಾಮಯ್ಯ ಆಗ್ರಹದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒತ್ತಡಕ್ಕೆ ಮಣಿದು ದುಪಟ್ಟಾಗೆ ಆಗ್ರಹಿಸಿದ್ದಾರೆ. ತಮ್ಮ ಒಟ್ಟು ಭಾಷಣದಲ್ಲಿ ಹಿಜಾಬ್ ಬಗ್ಗೆ ಮಾತನಾಡಿರಲಿಲ್ಲ. ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಇರುವ ಪ್ರಾಮುಖ್ಯತೆ ಗೊತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪ್ರಾಮುಖ್ಯತೆ ಬಗ್ಗೆ ಗೊತ್ತಿದೆ. ಹೈಕೋರ್ಟ್​ನ ಹಿಜಾಬ್ ತೀರ್ಪನ್ನ ಸರ್ಕಾರ ಪಾಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಕರ್ನಾಟಕ ಸರ್ಕಾರ ತೀರ್ಮಾನ

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ವಿರೋಧ, ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕೆಂದು ಬಸವ ಮಂಟಪದ ಜಗದ್ಗುರುಗಳ ಮನವಿ

Published On - 8:00 pm, Fri, 25 March 22