AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈ ಬಾಂಗ್ಲಾ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮುಸ್ಲಿಂ ಮಹಿಳೆಯ ಬಂಧನ

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣಗಳು ಈ ಹಿಂದೆ ಬೆಂಗಳೂರು ಹಾಗೂ ಕರ್ನಾಟಕದ ಇತರ ಕೆಲವು ಕಡೆಗಳಲ್ಲಿ ವರದಿಯಾಗಿದ್ದವು. ಆದರೆ, ಈಗ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ ಘಟನೆ ವರದಿಯಾಗಿದೆ. ಈ ರೀತಿ ಘೋಷಣೆ ಕೂಗಿದ ಆರೋಪದಲ್ಲಿ ಮುಸ್ಲಿಂ ಮಹಿಳೆಯೊಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.

ಜೈ ಬಾಂಗ್ಲಾ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮುಸ್ಲಿಂ ಮಹಿಳೆಯ ಬಂಧನ
ಪೊಲೀಸ್ ವಶದಲ್ಲಿ ಆರೋಪಿ ಸರ್ಬಾನು ಖಾತುನ್
ರಾಮು, ಆನೇಕಲ್​
| Edited By: |

Updated on: Jan 13, 2026 | 11:14 AM

Share

ಬೆಂಗಳೂರು, ಜನವರಿ 13: ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು (Muslim Woman) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಸರ್ಬಾನು ಖಾತುನ್ (25) ಎಂದು ಗುರುತಿಸಲಾಗಿದ್ದು, ಅವರು ಪಶ್ಚಿಮ ಬಂಗಾಳ (West Bengal) ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸರ್ಬಾನು ಖಾತುನ್ ಹುಲಿಮಂಗಲದ ಪೋಡು ಪ್ರದೇಶದ ಬಳಿ ಇರುವ ಶೆಡ್‌ನಲ್ಲಿ ವಾಸವಾಗಿದ್ದರು.

ಕಳೆದ ಮೂರು ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಕ್ರಮ ವಲಸಿಗರ ಕುರಿತು ಕಾರ್ಯಾಚರಣೆ ನಡೆಸಿ, ಶೆಡ್‌ಗಳ ಮೇಲೆ ದಾಳಿ ನಡೆಸಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಸಂದರ್ಭದಲ್ಲಿ, ಅಕ್ರಮವಾಗಿ ವಾಸವಾಗಿದ್ದರೆನ್ನಲಾದ ಜಹಿದುಲ್ ಇಸ್ಲಾಂ (35) ಮತ್ತು ಫಿರ್ದೋಸ್ (32) ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಶೆಡ್‌ಗಳ ಸಮೀಪದಲ್ಲೇ ವಾಸವಾಗಿದ್ದ ಸರ್ಬಾನು ಖಾತುನ್, ಶೆಡ್‌ಗಳನ್ನು ತೆರವುಗೊಳಿಸುವ ವೇಳೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಆ ವೇಳೆ ಅಲ್ಲಿದ್ದ ಹಿಂದೂ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ ಉದ್ದಟತನದಿಂದ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದರ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ, ದಾಖಲೆಗಳ ಪರಿಶೀಲನೆಗಾಗಿ ಮಹಿಳೆಯನ್ನು ಎಫ್‌ಆರ್‌ಆರ್‌ಒ (ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಷನ್ ಆಫೀಸ್) ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ