ನ.27 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಿಂದ ಜನತಾ ದರ್ಶನ; ಭದ್ರತೆ ಹೀಗಿದೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 26, 2023 | 10:05 PM

ನಾಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮದ ಭದ್ರತೆಗೆ ಓರ್ವ ಡಿಸಿಪಿ, 3 ಜನ ಎಸಿಪಿ, 10 ಇನ್ಸ್​ಪೆಕ್ಟರ್​, 15 ಪಿಎಸ್​ಐ ಹಾಗೂ ಪೊಲೀಸ್ ಹೆಡ್​​ ಕಾನ್ಸ್​ಟೇಬಲ್​, ಕಾನ್ಸ್​ಟೇಬಲ್ ಮತ್ತು ಹೋಮ್​ಗಾರ್ಡ್​ ಸೇರಿ ಒಟ್ಟು 550 ಜನಕ್ಕೆ ನೇಮಿಸಲಾಗಿದೆ.

ನ.27 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಿಂದ ಜನತಾ ದರ್ಶನ; ಭದ್ರತೆ ಹೀಗಿದೆ
ಸಿಎಂ ಜನತಾ ದರ್ಶನ
Follow us on

ಬೆಂಗಳೂರು,ನ.26: ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ (ನ.27) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದ ಜನತಾ ದರ್ಶನ(Janata Darshan) ಏರ್ಪಡಿಸಲಾಗಿದೆ. ಎರಡನೇ ಬಾರಿ ಸಿಎಂ ಆದ ಬಳಿಕ ಮೊದಲ ಪೂರ್ಣಾವಧಿ ಜನತಾ ದರ್ಶನ ಇದಾಗಿದ್ದು, ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ ನೀಡುವ ಸಲುವಾಗಿ ಅಹವಾಲುಗಳ ದಾಖಲೀಕರಣಕ್ಕೆ ಹಲವು ತಂಡದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿರಲು ಸಿಎಂ ಸೂಚಿಸಿದ್ದಾರೆ. ಈ ಹಿನ್ನಲೆ ನೂರಕ್ಕೂ ಹೆಚ್ಚು ಅಧಿಕಾರಿಗಳು ಜನತಾ ದರ್ಶನದಲ್ಲಿ ಭಾಗಿಯಾಗಲಿದ್ದು, ಇನ್ನು 20 ಕೌಂಟರ್​ಗಳನ್ನು ತೆರೆಯಲಾಗಿದೆ. ಇನ್ನು ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್​ಗಳು ಇರಲಿವೆ.

ಭದ್ರತೆ ಹೀಗಿದೆ

ನಾಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮದ ಭದ್ರತೆಗೆ ಓರ್ವ ಡಿಸಿಪಿ, 3 ಜನ ಎಸಿಪಿ, 10 ಇನ್ಸ್​ಪೆಕ್ಟರ್​, 15 ಪಿಎಸ್​ಐ ಹಾಗೂ ಪೊಲೀಸ್ ಹೆಡ್​​ ಕಾನ್ಸ್​ಟೇಬಲ್​, ಕಾನ್ಸ್​ಟೇಬಲ್ ಮತ್ತು ಹೋಮ್​ಗಾರ್ಡ್​ ಸೇರಿ ಒಟ್ಟು 550 ಜನಕ್ಕೆ ನೇಮಿಸಲಾಗಿದೆ. ಇನ್ನು ಅಹವಾಲು ಸ್ವೀಕಾರ ಮತ್ತು ಪರಿಶೀಲನೆಗೆ 350 ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಚಿಸಿದೆ. ಇತರೆ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1000 ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿರುತ್ತಾರೆ.

ಇದನ್ನೂ ಓದಿ:ನ.27 ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ: ಈ ದಾಖಲೆಗಳನ್ನು ಒಯ್ಯುವುದು ಅಗತ್ಯ

ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ

ಇನ್ನು ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದು, ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಎಕ್ಸ್​​ ಸಂದೇಶದಲ್ಲಿ ಸಚಿವಾಲಯ ಉಲ್ಲೇಖಿಸಿತ್ತು. ಜನತಾ ದರ್ಶನದ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಗಳು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿದ್ದಾರೆ. ಜನತಾ ದರ್ಶನದ ವೇಳೆಯೇ ಸಿಎಂ ಜಿಲ್ಲಾ, ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಸೂಚನೆ ನೀಡುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ