ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.21, 22ರಂದು ಉತ್ತರ ಕರ್ನಾಟಕ ಉತ್ಸವ: ಲೋಗೋ ಬಿಡುಗಡೆ ಮಾಡಿದ ಸಿಎಂ
ಜನವರಿ 21, 22ರಂದು ಬೆಂಗಳೂರಿನ ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7 ರಲ್ಲಿ ಉತ್ತರ ಕರ್ನಾಟಕ ಉತ್ಸವ ನಡೆಯಲಿದೆ.
ಬೆಂಗಳೂರು: ಜನವರಿ 21, 22ರಂದು ಬೆಂಗಳೂರಿನ ಅರಮನೆ ಮೈದಾನದ (Bengaluru Palace Ground) ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7 ರಲ್ಲಿ ಉತ್ತರ ಕರ್ನಾಟಕ ಉತ್ಸವ (North Karnataka Ustav) ನಡೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಜ.11) ಉತ್ಸವದ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಉತ್ಸವನ್ನು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಆಯೋಜಿಸಲಾಗಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಅಧ್ಯಕ್ಷ ಶಿವಕುಮಾರ ಮೇಟಿ ಉತ್ತರ ಕರ್ನಾಟಕ ಭಾಗದವರು ವಿವಿಧ ಉದ್ಯೋಗಳನ್ನು ಅರಸಿ ಬಂದು ಬೆಂಗಳೂರು ಮಹಾ ನಗರದಲ್ಲಿ ನೆಲೆಸಿದ್ದಾರೆ. ನಾವು ನಮ್ಮವರಿಗಾಗಿ ಕೈ ಜೋಡಿಸುತ್ತಾ ಎಲ್ಲರು ಒಂದೆಡೆ ಸೇರಲು ಮತ್ತು ಬೆಳೆಯಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನವರಿ 21 ಮತ್ತು 22 ಶನಿವಾರ ಮತ್ತು ಭಾನುವಾರ ಎರಡು ದಿನ ನಡೆಯುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಮಾರ್ಗ ಬದಲಾವಣೆ, ಇಲ್ಲಿದೆ ಕಂಪ್ಲಿಟ್ ರೂಟ್ ಡೀಟೇಲ್ಸ್
ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಗಳು ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಉತ್ತರ ಕರ್ನಾಟಕದವರಿಗಾಗಿ ರಾಜ್ಯ ಸರ್ಕಾರ ಈಗಾಗಲೇ 3.24 ಗುಂಟೆ ಜಮೀನು ಮಂಜೂರು ಮಾಡಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಿದ್ದೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:06 pm, Wed, 11 January 23