ಮೀಸಲಾತಿ ಒಪ್ಪುವಂತೆ ಶ್ರೀಗಳಿಗೆ ಸಿಎಂ ಒತ್ತಡ: ಡಿಕೆಶಿ ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ

ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂತ ಕಾಣುತ್ತೆ. ಡಿಕೆ ಶಿವಕುಮಾರ್​ ಅವರು ಕೂಡ ನಮ್ಮ ಹೋರಾಟದ ವೇಳೆ ಪಾದಯಾತ್ರೆಗೆ ಬಂದು ಬೆಂಬಲ ಕೊಟ್ಟಿದ್ದರು. ದೂರವಾಣಿ ಮೂಲಕವೂ ಹೋರಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕೇಂದ್ರ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ಅವರು ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಮೀಸಲಾತಿ ಒಪ್ಪುವಂತೆ ಶ್ರೀಗಳಿಗೆ ಸಿಎಂ ಒತ್ತಡ: ಡಿಕೆಶಿ ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ
ಬಸವ ಜಯಮೃತ್ಯಂಜಯ ಸ್ವಾಮೀಜಿ
Follow us
|

Updated on: Mar 26, 2023 | 4:43 PM

ಬೆಂಗಳೂರು: ಪಂಚಮಸಾಲಿ ಲಿಂಗಾಯತ (Panchamsali Lingayat)​ ಸಮಾಜಕ್ಕೆ ನೀಡಿರುವ 2ಡಿ ಮೀಸಲಾತಿಯನ್ನು (2d Reservation) ಒಪ್ಪುವಂತೆ ಸ್ವಾಮೀಜಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಒತ್ತಡ ಹಾಕಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ (DK Shivakumar) ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂತ ಕಾಣುತ್ತೆ. ಡಿಕೆ ಶಿವಕುಮಾರ್​ ಅವರು ಕೂಡ ನಮ್ಮ ಹೋರಾಟದ ವೇಳೆ, ಪಾದಯಾತ್ರೆಗೆ ಬಂದು ಬೆಂಬಲ ಕೊಟ್ಟಿದ್ದರು. ದೂರವಾಣಿ ಮೂಲಕವೂ ಹೋರಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕೇಂದ್ರ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ಅವರು ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚುನಾವಣೆ ನೀತಿ ಸಂಹಿತೆ ಬಂದರೇ ಕಷ್ಟ ಆಗಬಹುದು. ನಮ್ಮ ಹೋರಾಟದಿಂದ ಸಮುದಾಯದ ಜನ ನಿರಾಶೆ ಆಗಬಾರದು. ಈ ಕಾರಣಕ್ಕಾಗಿ ನಾವು 2ಡಿ ಮೀಸಲಾತಿಯನ್ನು ಒಪ್ಪಿಕೊಂಡಿದ್ದೇವೆ. ಹೊಟ್ಟೆ ತುಂಬಾ ಊಟ ಕೊಡಿ ಅಂತ ಸರ್ಕಾರವನ್ನ ಕೇಳಿದ್ವಿ, ಆದರೆ ಸರ್ಕಾರದಿಂದ ಅದು ಸಾಧ್ಯವಾಗಲಿಲ್ಲ, ಹಸಿವು ನೀಗಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಶ್ರೀಗಳಿಗೆ 25 ಬಾರಿ ಕರೆ​ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಡ ಹಾಕಿದ್ದಾರೆ: ಡಿಕೆ ಶಿವಕುಮಾರ್ ಸ್ಫೋಟಕ ಆರೋಪ

ಈ ಹೋರಾಟದಿಂದ ನಾವು ಒಂದು ಮೆಟ್ಟಿಲನ್ನು ಹತ್ತಿದ್ದೇವೆ. ಎರಡೂವರೆ ವರ್ಷದ ಹೋರಾಟದ ಫಲವಾಗಿ ಮೊದಲ ಹಂತದ ಜಯ ಸಿಕ್ಕಿದೆ. ನಮ್ಮ ಹೋರಾಟಕ್ಕೆ ಮಣಿದು ಶೇ.7 ರಷ್ಟು ಮೀಸಲಾತಿ ಸರ್ಕಾರ ನೀಡಿದೆ. ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಸ್ವಲ್ಪ ಮಟ್ಟಿಗಾದರೂ ಮೀಸಲಾತಿ ಪಡೆದುಕೊಂಡಿರೋದು ಖುಷಿ ಕೊಟ್ಟಿದೆ. ನಿರ್ಮಲಾನಂದನಾಥ ಸ್ವಾಮೀಜಿ, ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಹೋರಾಟಕ್ಕೆ ಜಯ ಸಿಕ್ಕ ಬಳಿಕ ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿದ್ದೇವೆ, ಚುನಾವಣೆ ಬಳಿಕ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಜೇನುಗೂಡಿಗೆ ಕೈಹಾಕಿ ಕಡಿಸಿಕೊಂಡರೂ ನಾನು ಮೀಸಲಾತಿ ಕೊಟ್ಟಿದ್ದೇನೆ: ಸಿಎಂ ಬೊಮ್ಮಾಯಿ

ಜೇನುಗೂಡಿಗೆ ಕೈಹಾಕಿ ಕಡಿಸಿಕೊಂಡರೂ ನಾನು ಮೀಸಲಾತಿ ಕೊಟ್ಟಿದ್ದೇನೆ. ಬೇರೆಯವರ ರೀತಿ ಮೀಸಲಾತಿ  ಬೇಡಿಕೆ ವಿಚಾರವನ್ನು ಮುಂದೆ ಹಾಕಬಹುದಿತ್ತು. ಸಮಾಜದ ಮೀಸಲಾತಿ ಬೇಡಿಕೆ ಮುಂದೆ ಹಾಕಿ ಕೆಲವರು ಅನುಭವಿಸಿದರು. ಮುಂಬರುವ ದಿನ ಒಗ್ಗಟ್ಟಾಗಿ ಒಂದಾಗಿ ನಾಡು ಕಟ್ಟುವ ಸಂಕಲ್ಪ ಮಾಡೋಣ. ಪಂಚಮಸಾಲಿ ಸಮುದಾಯದ ಬೆಂಬಲ, ಮಾರ್ಗದರ್ಶನ ನನ್ನ ಮೇಲಿದೆ. ಎಲ್ಲ ಸಮುದಾಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?