ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರುನೇಮಕ
Jayaprakash Hegde: ಜಾತಿ ಗಣತಿ ವರದಿ ಜಟಾಪಟಿ ಬೆನ್ನಲ್ಲೇ ಇದೀಗ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕಾತಿ ಮಾಡಲಾಗಿದೆ. ಎರಡು ತಿಂಗಳ ಅವಧಿಗೆ ಅಂದರೆ 2024 ಜನವರಿ 31ರವರೆಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಮರುನೇಮಕಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಬೆಂಗಳೂರು, ನವೆಂಬರ್ 24: ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಚರ್ಚೆ ಬೆನ್ನಲ್ಲೇ ಇದೀಗ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕಾತಿ ಮಾಡಲಾಗಿದೆ. ಎರಡು ತಿಂಗಳ ಅವಧಿಗೆ ಅಂದರೆ 2024 ಜನವರಿ 31ರವರೆಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ (Jayaprakash) ಅವರನ್ನು ಮರುನೇಮಕಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಮರುನೇಮಕ ಮಾಡಲಾಗಿದೆ.
ಈ ಕುರಿತಾಗಿ ಮೌಖಿಕವಾಗಿ ಮುಂದುವರಿಯುಂತೆ ಜಯಪ್ರಕಾಶ್ ಹೆಗ್ಡೆ ಅವರಿಗೆ ಸಿಎಂ ಸಿದ್ದರಾಮಯ್ಯ ಈ ಹಿಂದೆಯೇ ಸೂಚಿಸಿದ್ದರು ಎನ್ನಲಾಗಿದೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ನೀಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಣಯ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಡಿಕೆ ಶಿವಕುಮಾರ್, ಲಿಂಗಾಯತರು, ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಪರ-ವಿರೋಧ ವ್ಯಕ್ತವಾಗುತ್ತಿವೆ. ಕಾಂತರಾಜು ವರದಿ ಹೆಸರು ಮರುನಾಮಕರಣ ಮಾಡಿ, ಡಾ.ಜಯಪ್ರಕಾಶ್ ಹೆಗಡೆ ವರದಿ ಅಂತಾ ಬದಲಾಯಿಸಲಾಗಿದೆ. ಇತ್ತೀಚೆಗೆ ಜಾತಿ ಗಣತಿ ವರದಿಯ ಮೂಲ ಪ್ರತಿ ಕಾಣೆಯಾಗಿದ್ದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದರು.
The tenure of Jayaprakash Hegde, Karnataka Backward Classes Commission Chairman extended till 31st of January 2024. His term was to expire today.
— ANI (@ANI) November 24, 2023
ಬಳಿಕ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದು, ಮೂಲ ಪ್ರತಿ ಅಂದರೆ ದತ್ತಾಂಶ ಅಲ್ಲ. ದತ್ತಾಂಶ ಎಲ್ಲವೂ ಸುರಕ್ಷಿತವಾಗಿದೆ. ಇಂದಿನ ಸದಸ್ಯರು, ಅಧ್ಯಕ್ಷರು ಹಾಗೂ ಸೆಕ್ರೆಟರಿ ಸಹಿ ಇರುವ ದತ್ತಾಂಶ. ಹಾರ್ಡ್ ಕಾಪಿ ಮತ್ತು ಪ್ರಿಂಟೆಡ್ ಕಾಪಿಯೂ ಇದೆ. ಕಾಂತರಾಜ್ ವರದಿಯ ಮೂಲ ಪ್ರತಿಯ ಕೆಲ ವರ್ಕ್ಶೀಟ್ಗಳು ಸಿಗುತ್ತಿಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ: ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ
ವರದಿ ಮತ್ತು ದತ್ತಾಂಶವನ್ನು ಸರ್ಕಾರಕ್ಕೆ ಕೊಡುವುದು ನಮ್ಮ ಜವಾಬ್ದಾರಿ. ಡಿಸೆಂಬರ್ ಅಥವಾ ಜನವರಿಯೊಳಗೆ ವರದಿ ಕೊಡಲು ಸಿಎಂ ಸಿದ್ದರಾಮಯ್ಯ ಹೇಳಿದ್ದಾರಂತೆ. ಅಷ್ಟರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತೇವೆ. 100ಕ್ಕೆ ಶೇ.90ಕ್ಕಿಂತ ಹೆಚ್ಚು ಜನಗಣತಿಯಾಗಿದೆ, ಅದರಲ್ಲಿ ಡೌಟ್ ಇಲ್ಲ ಎಂದು ತಿಳಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:00 pm, Fri, 24 November 23