AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.5ರಂದು ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಉದ್ಘಾಟನೆ, ಕೈಗೆಟುಕುವ ದರದಲ್ಲಿ ಚಿಕಿತ್ಸೆ

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ವೃತ್ತಿಪರ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಡಿಸೆಂಬರ್ 5ರ ಸಂಜೆ 6 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಆರಂಭವಾಗಲಿದೆ.

ಡಿ.5ರಂದು ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಉದ್ಘಾಟನೆ, ಕೈಗೆಟುಕುವ ದರದಲ್ಲಿ ಚಿಕಿತ್ಸೆ
Jaydev Memorial Rashtrotthana Hospital
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 03, 2022 | 6:38 PM

Share

ಬೆಂಗಳೂರು: ಸ್ವಾಸ್ಥ್ಯವೆಂದರೆ ಕೇವಲ ಅನಾರೋಗ್ಯದಿಂದ ಮುಕ್ತವಾಗಿರುವುದಲ್ಲ, ನಮ್ಮ ಮನಸ್ಸು ಮತ್ತು ದೇಹ ಎರಡನ್ನೂ ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಂಡು, ನಿರಂತರ ಸುಧಾರಣೆ ತರುವುದೇ ಸ್ವಾಸ್ಥ್ಯ. ಈ ಚಿಂತನೆಯೊಂದಿಗೆ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ (Jaydev Memorial Rashtrotthana Hospital And Research Centre )ಇದೇ ಡಿಸೆಂಬರ್ 5ರಂದು ಬೆಂಗಳೂರಿನಲ್ಲಿ ಉದ್ಘಾಟನೆಯಾಗಲಿದೆ.

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ವೃತ್ತಿಪರ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಡಿಸೆಂಬರ್ 5ರ ಸಂಜೆ 6 ಗಂಟೆಗೆ ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರದಲ್ಲಿ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವನ್ನು ಪ್ರಾರಂಭಿಸುತ್ತಿದೆ. ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರದಲ್ಲಿ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದಾರೆ.

ಇನ್ನು ಇನ್ಫೋಸಿಸ್ ಫೌಂಡೇಷನ್​ ಸಂಸ್ಥಾಪಕಿ ಸುಧಾಮೂರ್ತಿ, ನಾರಾಯಣ ಹೆಲ್ತ್​ ಸ್ಥಾಪಕ ಮತ್ತು ಅಧ್ಯಕ್ಷ ಡಾ ದೇವಿ ಪ್ರಸಾದ್ ಶೆಟ್ಟಿ ಹಾಗೂ ಆರ್​ಎಸ್​ಎಸ್​ ಸರಕಾರ್ಯವಾಹಕ ದತ್ತಾತ್ರೇಯ ಹೊಸಬಾಳೆ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

160 ಹಾಸಿಗೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಸ್ತುತ 19 ಜನರಲ್ ವಾರ್ಡ್​ಗಳು, 72 ಸೆಮಿ ಪ್ರೈವೇಟ್ ವಾರ್ಡ್, 11 ಎಮರ್ಜೆನ್ಸಿ ವಾರ್ಡ್ ಹಾಗೂ 17 ಪ್ರೈವೇಟ್ ವಾರ್ಡ್​ಗಳು ಸೇರಿದಂತೆ ಒಟ್ಟು 160 ಹಾಸಿಗೆಗಳನ್ನು ಹೊಂದಿರುವ ಸಮಗ್ರ ಆಧುನಿಕ ವೈದ್ಯಕೀಯ ಮೂಲಸೌಕರ್ಯ ಲಭ್ಯವಿದೆ.

ವೈದ್ಯಕೀಯ ಚಿಕಿತ್ಸಾ ವಿಭಾಗಗಳು: ಜನರಲ್ ಮೆಡಿಸಿನ್, ಕಾರ್ಡಿಯಾಲಾಜಿ, ಅರ್ಥೊಪೆಡಿಕ್ಸ್, ನ್ಯೂರಾಲಜಿ, ಗೈನಕಾಲಜಿ, ಗ್ಯಾಸ್ಟ್ರೋಎಂಟರಾಲಜಿ, ಪೀಡಿಯಾಟ್ರಿಕ್ಸ್, ಆಯುರ್ವೇದ, ಹೋಮಿಯೋಪತಿ, ಯೋಗ, ನ್ಯಾಚುರೋಪತಿ.

ಸೇವೆ- ಸೌಲಭ್ಯಗಳು: ತುರ್ತು ಚಿಕತ್ಸಾ ಘಟಕ, ಡಯಾಲಿಸಿಸ್, ಓಟಿ, ಐ.ಸಿ.ಯು, ಡಯಾಗ್ನೋಸ್ಟಿಕ್ ಸೇವೆಗಳನ್ನು ಆ ಆಸ್ಪತ್ರೆ ಹೊಂದಿದೆ.

ಈ ರಾಷ್ಟ್ರೋತ್ಥಾನ ಆಸ್ಪತ್ರೆಯು ಒಂದೇ ಸೂರಿನಡಿ ಅಧುನಿಕ ವೈದ್ಯಪದ್ಧತಿ(ಅಲೋಪತಿ) ಆಯುರ್ವೆದ, ಹೋಮಿಯೋಪತಿ, ಯೋಗ, ನ್ಯಾಚುರೋಪತಿ ಸೇರಿದಂತೆ ಮೊದಲಾದ ಚಿಕಿತ್ಸಾ ಸೌಲಭ್ಯಗಳನ್ನು ಒಳಗೊಂಡಿರುವ ಒಂದು ಸಮಗ್ರ ಚಿಕಿತ್ಸೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ. ರಾಜ್ಯದ ಪ್ರತಿಷ್ಠಿತ ಸ್ವಯಂಸೇವಾ ಸಂಸ್ಥೆಗಳಲ್ಲೊಂದಾದ ರಾಷ್ಟ್ರೋತ್ಥಾನ ಪರಿಷತ್ ಇಂದು ಸಮಾಜ ನಿರ್ಮಾಣದ ಗುರಿಯೊಂದಿಗೆ ಸೇವೆ, ಆರೋಗ್ಯ, ಶಿಕ್ಷಣ ಮತ್ತು ಸಾಹಿತ್ಯ ಸಂಬಂಧಿತ ಹತ್ತಾರು ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಾದ್ಯಂತ ವ್ಯಾಪಿಸಿದೆ. ಸೇವೆಯ ಜಗತ್ತನ್ನು ಲೈಫ್ ಮಿಷನ್ ಆಗಿ ಸ್ವೀಕರಿಸಿರುವ ರಾಷ್ಟ್ರೋತ್ಥಾನ ಪರಿಷತ್ ಕಳೆದ 3 ದಶಕಗಳಿಂದ ರಕ್ತ ಕೇಂದ್ರ ಸಂರಕ್ಷಾ (ತಲಸ್ಸೆಮಿಯಾ ಮಕ್ಕಳ ಆರೈಕೆ ಕೇಂದ್ರ) ಮುಂತಾದ ಆರೋಗ್ಯ ಸೇವಾ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ.

ಸಮಾಜ ಎಲ್ಲಾ ಸ್ತರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕಾಯಕದಲ್ಲಿ ನಿರತವಾಗಿದೆ. ಇದೀಗ ರಾಷ್ಟ್ರೋತ್ಥಾನ ಆಸ್ಪತ್ರೆ ಮೂಲಕ ಇನ್ನಷ್ಟು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:30 pm, Sat, 3 December 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ