AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ಅಂತಿಮ ನಿರ್ಧಾರ ಪ್ರಕಟ

ರಾಜಕೀಯ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಲು ದೇವೇಗೌಡರು ಒಲವು ತೋರಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೈತ್ರಿ ಬಗ್ಗೆ ನಿರ್ಧಾರ ಮಾಡಲು ದೇವೇಗೌಡರು ಕುಮಾರಸ್ವಾಮಿಗೆ ಸಲಹೆ ನೀಡುತ್ತಾರೆ.

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ಅಂತಿಮ ನಿರ್ಧಾರ ಪ್ರಕಟ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 12, 2021 | 10:17 AM

Share

ಬೆಂಗಳೂರು: ಕಲಬುರಗಿ ಪಾಲಿಕೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ನಾಳೆ (ಸೆ.13) ಜೆಡಿಎಸ್ (JDS) ಅಂತಿಮ ನಿರ್ಧಾರವನ್ನು ತಿಳಿಸಲಿದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ದಳಪತಿಗಳು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಬಿಜೆಪಿ ಬೆಂಬಲಿಸಬೇಕಾ? ಅಥವಾ ಕಾಂಗ್ರೆಸ್ ಬೆಂಬಲಿಸಬೇಕಾ? ಎನ್ನುವ ಬಗ್ಗೆ ಕುಮಾರಸ್ವಾಮಿ (HD Kumarswamy) ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಒಂದು ವೇಳೆ ನಾಳೆ ಅಂತಿಮ ತೀರ್ಮಾನಕ್ಕೆ ಬರದಿದ್ದರೆ ಬೆಂಗಳೂರಿನಲ್ಲಿರುವ ಬೇರೆಡೆಗೆ ಸದಸ್ಯರನ್ನು ಸ್ಥಳಾಂತರ ಮಾಡುವ ಸಾಧ್ಯತೆಯಿದೆ.

ರಾಜಕೀಯ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಲು ದೇವೇಗೌಡರು ಒಲವು ತೋರಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೈತ್ರಿ ಬಗ್ಗೆ ನಿರ್ಧಾರ ಮಾಡಲು ದೇವೇಗೌಡರು ಕುಮಾರಸ್ವಾಮಿಗೆ ಸಲಹೆ ನೀಡುತ್ತಾರೆ. ಹೀಗಾಗಿ ನಾಳೆ ಅಂತಿಮ ನಿರ್ಧಾರವನ್ನು ಹೆಚ್.ಡಿ.ಕುಮಾರಸ್ವಾಮಿ ಪ್ರಕಟ ಮಾಡಲಿದ್ದಾರೆ.

ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ವಿಚಾರವಾಗಿ ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ. ಸಭೆಯಲ್ಲಿ ಯಾರಿಗೆ ಬೆಂಬಲ ನೀಡಬೇಕೆಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು ಅವರನ್ನು ಕಂದಾಯ ಸಚಿವ ಆರ್. ಅಶೋಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆಗೆ ಚರ್ಚಿಸಿದ ನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಹೊಂದಾಣಿಕೆ ಬಗ್ಗೆ ಹೇಳಿರಬಹುದು. ಆದರೆ ಸಿದ್ದರಾಮಯ್ಯ ಹೇಳುವವರೆಗೆ ಅದು ಅಂತಿಮವಾಗದು ಎಂದು ಕೇತಗಾನಹಳ್ಳಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ ಕಲಬುರಗಿಯಲ್ಲಿ ಕಾಂಗ್ರೆಸ್​ ಜತೆ ಕೈ ಜೋಡಿಸಲು ಜೆಡಿಎಸ್​​ ಒಲವು; ಮುಂದಿನ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮೈತ್ರಿ ನಿಲುವು

ಕಲಬುರಗಿ: ಜೆಡಿಎಸ್​​ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್​

(JDS announces Kalaburagi mayor election final decision tomorrow)

Published On - 9:34 am, Sun, 12 September 21