AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕರ್ನಾಟಕದ ಸೊಕ್ಕಿನ ಮನುಷ್ಯ, ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಸಿಎಂ ವಿರುದ್ಧ ಜೆಡಿಎಸ್ ಕಿಡಿ

ಸರಣಿ ಟ್ವಿಟ್ ಮೂಲಕ ಸಿಎಂ ಸಿದ್ದರಾಮಯ್ಯರ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಸೊಕ್ಕಿನ ಮನುಷ್ಯಕ್ಕೆ ಟ್ಯಾಗ್ ಮಾಡಿ ಟಾಂಗ್ ಕೊಟ್ಟಿದೆ.

ಸಿದ್ದರಾಮಯ್ಯ ಕರ್ನಾಟಕದ ಸೊಕ್ಕಿನ ಮನುಷ್ಯ, 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ? ಸಿಎಂ ವಿರುದ್ಧ ಜೆಡಿಎಸ್ ಕಿಡಿ
ಸಿಎಂ ಸಿದ್ದರಾಮಯ್ಯ
Sunil MH
| Updated By: ಆಯೇಷಾ ಬಾನು|

Updated on: Jan 07, 2024 | 9:46 AM

Share

ಬೆಂಗಳೂರು, ಜ.07: ಜೆಚ್​ಡಿ ದೇವೇಗೌಡರ (HD Deve Gowda) ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮಾಡಿದ ಟೀಕೆಗೆ ಸರಣಿ ಟ್ವಿಟ್ ಮಾಡುವ ಮೂಲಕ ಜೆಡಿಎಸ್ (JDS) ಆಕ್ರೋಶ ಹೊರ ಹಾಕಿದೆ. ಸಿದ್ದರಾಮಯ್ಯ ಸೊಕ್ಕಿನ ಮನುಷ್ಯ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಗೌಡರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಕರ್ನಾಟಕದ ಸೊಕ್ಕಿನ ಮನುಷ್ಯ ಎಂದು ಜೆಡಿಎಸ್ ಎಕ್ಸ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ.

ಗೌಡರು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಸೊಕ್ಕಿನ ಮನುಷ್ಯಕ್ಕೆ ಟ್ಯಾಗ್ ಮಾಡಿ ಟಾಂಗ್ ಕೊಟ್ಟಿದೆ.

ಸಿದ್ದರಾಮಯ್ಯರದು ತುಘಲಕ್ ಮನಃಸ್ಥಿತಿ

ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ,ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ ಎಂದು ಕಿಡಿಕಾರಿದೆ.

ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯಕ್ಕೆ ಸುಗ್ರಿವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ. ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ.

ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ