ಜೆಡಿಎಸ್​​ ಪಕ್ಷಕ್ಕೆ ಕಗ್ಗಂಟಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಾಸನ ಕ್ಷೇತ್ರದಲ್ಲಿ ಮುಂದುವರೆದ ಟಿಕೆಟ್ ಗೊಂದಲ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2022 | 3:13 PM

ಜೆಡಿಎಸ್​​ ಪಕ್ಷಕ್ಕೆ ಕಗ್ಗಂಟ್ಟಾಗಿ ಪರಿಣಮಿಸಿದ್ದ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯ ಬಿಡುಗಡೆ ಮಾಡಲಾಗಿದೆ. ನ. 1ರಂದು 90 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಈ ಹಿಂದೆ ಹೇಳಿದ್ದರು.

ಜೆಡಿಎಸ್​​ ಪಕ್ಷಕ್ಕೆ ಕಗ್ಗಂಟಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಾಸನ ಕ್ಷೇತ್ರದಲ್ಲಿ ಮುಂದುವರೆದ ಟಿಕೆಟ್ ಗೊಂದಲ
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
Follow us on

ಬೆಂಗಳೂರು: ಜೆಡಿಎಸ್​​ ಪಕ್ಷಕ್ಕೆ ಕಗ್ಗಂಟಾದ ಅಭ್ಯರ್ಥಿಗಳ (candidates) ಪಟ್ಟಿ ಬಿಡುಗಡೆ ಮಾಡಲಾಗಿದೆ. ನ. 1ರಂದು 90 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಈ ಹಿಂದೆ ಹೇಳಿದ್ದರು. ಆದರೆ ಕೊನೆ ಹಂತದಲ್ಲಿ ಪಟ್ಟಿ ಬಿಡುಗಡೆ ವಿಚಾರ ಕೈಬಿಟ್ಟಿದ್ದರು. ಕೆಲ ಕ್ಷೇತ್ರಗಳಲ್ಲಿ ಇಬ್ಬರು ಆಕಾಂಕ್ಷಿಗಳು ಇರುವುದರಿಂದ ವಿಳಂಬವೆನ್ನಲಾಗುತ್ತಿದೆ. ಹಾಸನ ಕ್ಷೇತ್ರದಿಂದ ಪತ್ನಿ ಭವಾನಿ ಕಣಕ್ಕಿಳಿಸಲು ರೇವಣ್ಣ ನಿರ್ಧಾರ ಮಾಡಿದ್ದು, ಶಾಸಕ ಪ್ರೀತಂ ಗೌಡ ಸೋಲಿಸಲು ಭವಾನಿ ಸ್ಪರ್ಧಿಸಿದರೆ ಒಳ್ಳೆಯದು ಎನ್ನಲಾಗುತ್ತಿದ್ದು, ಟಿಕೆಟ್​ಗಾಗಿ ವರಿಷ್ಠರ ಬಳಿ ಹೆಚ್​​.ಡಿ.ರೇವಣ್ಣ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಭವಾನಿ ಸ್ಪರ್ಧಿಸಿದರೆ ಮತ್ತೆ ಕುಟುಂಬ ರಾಜಕಾರಣದ ಆರೋಪ ಕೇಳಿಬರಬಹುದು. ಹಳೇ ಮೈಸೂರು ಭಾಗದಲ್ಲಿ ಪಕ್ಷದ ಮೇಲೆ ಅಡ್ಡಪರಿಣಾಮ ಬೀರಬಹುದು ಎನ್ನುವ ಲೆಕ್ಕಾಚಾರವಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡುವ ಬಗ್ಗೆ ಹೆಚ್​ಡಿಕೆಗೆ ಮನಸ್ಸಿಲ್ಲವೆನ್ನಲಾಗುತ್ತಿದ್ದು, ಹೀಗಾಗಿ ಹಾಸನ ಕ್ಷೇತ್ರದಲ್ಲಿ ಟಿಕೆಟ್ ಗೊಂದಲ ಮುಂದುವರೆದಿದೆ. ಇನ್ನು ಮಾಜಿ ಶಾಸಕ ಪ್ರಕಾಶ್​ ಪುತ್ರ ಸ್ವರೂಪ್​ಗೆ ಟಿಕೆಟ್ ನೀಡಲು ಹೆಚ್​​.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಆರು ತಿಂಗಳು ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿವೆ. ಆದರೆ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (ಅ.21) ಪ್ರಕಟಿಸಿತ್ತು. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.

ಜೆಡಿಎಸ್‌ ಜೊತೆ ಮುನಿಸಿಕೊಂಡು ಪಕ್ಷ ತೊರೆಯಲು ಮುಂದಾಗಿದ್ಧ ಶಾಸಕ ಜಿ.ಟಿ.ದೇವೇಗೌಡರ ಅವರನ್ನು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಖುದ್ಧು ಭೇಟಿಯಾಗಿ ಮನವೊಲಿಸಿದ್ದರು. ಅವರು ನಡೆಸಿದ ಸಂಧಾನ ಯಶ್ವಸಿಯಾಗಿದ್ದು, ಜಿ.ಟಿ. ದೇವೇಗೌಡರು ಜೆಡಿಎಸ್‌ನಲ್ಲೇ ಉಳಿದಿದ್ದಾರೆ. ಇನ್ನೂ ಮೈಸೂರು ಚುನಾವಣಾ ಉಸ್ತುವಾರಿಯನ್ನು ಜಿ.ಟಿ ದೇವೇಗೌಡರಿಗೆ ನೀಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಮುಂದಿನ ಚುನಾವಣೆಗೆ ಚಾಮುಂಡೇಶ್ವರಿಯಿಂದಲೇ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಪುತ್ರ ಜಿ. ಟಿ. ಹರೀಶ್ ಗೌಡಗೆ ಸಹ ಟಿಕೆಟ್ ಪಡೆಯುವಲ್ಲಿ ಜಿಟಿಡಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:06 pm, Fri, 4 November 22