ಕತ್ತಲಲ್ಲಿ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ಶಿಖಂಡಿ ಸ್ಥಿತಿಗೆ ಕಾಂಗ್ರೆಸ್ ಬಂದಿದೆ: ಜೆಡಿಎಸ್ ಕಿಡಿ
HD ಕುಮಾರಸ್ವಾಮಿ ವಿರುದ್ದ ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಸರಣಿ ಟ್ವಿಟ್ ಮೂಲಕ ಜೆಡಿಎಸ್ ಕಿಡಿಕಾರಿದೆ. ಕೊಳಕುಮಂಡಲ ಕಾಂಗ್ರೆಸ್‌ಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕುಮಾರಸ್ವಾಮಿ ನಡೆಸಿದ ಸರ್ಜಕಲ್ ಸ್ಟ್ರೈಕ್‌ಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಮಾರಿ ಉಳಿಸಿಕೊಳ್ಳಲು ಕಾಂಗ್ರೆಸ್ ಕರೆಂಟ್ ವೈರ್ ಮೊರೆ ಹೋಗಿದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.
ಬೆಂಗಳೂರು, ನ.15: ತಮ್ಮ ನಿವಾಸದ ದೀಪಾಲಂಕಾರಕ್ಕೆ ಹೆಚ್ಡಿ ಕುಮಾರಸ್ವಾಮಿಯವರು (HD Kumaraswamy) ಅಕ್ರಮವಾಗಿ ವಿದ್ಯುತ್ ಪಡೆದಿದ್ದಾರೆ ಎಂದು ಕಾಂಗ್ರೆಸ (Congress) ಆರೋಪ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ವಿರುದ್ಧ ಜೆಡಿಎಸ್ ರಾಜ್ಯ ಘಟಕ ಕಿಡಿಕಾರಿದೆ. HD ಕುಮಾರಸ್ವಾಮಿ ವಿರುದ್ದ ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಸರಣಿ ಟ್ವಿಟ್ ಮೂಲಕ ಕಿಡಿಕಾರಿದೆ. ಕೊಳಕುಮಂಡಲ ಕಾಂಗ್ರೆಸ್‌ಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕುಮಾರಸ್ವಾಮಿ ನಡೆಸಿದ ಸರ್ಜಕಲ್ ಸ್ಟ್ರೈಕ್‌ಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಮಾರಿ ಉಳಿಸಿಕೊಳ್ಳಲು ಕಾಂಗ್ರೆಸ್ ಕರೆಂಟ್ ವೈರ್ ಮೊರೆ ಹೋಗಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ಶಿಖಂಡಿ ಸ್ಥಿತಿಗೆ ಬಂದಿದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.
ರಾಜಕೀಯವಾಗಿ ಕುಮಾರಸ್ವಾಮಿ ಎದುರಿಸಲಾಗದ ನರಸತ್ತ ಪಕ್ಷ
ಪಾಪ ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ. ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟ ಮೇಲೂ ಕಾಂಗ್ರೆಸ್ ವಿಕೃತಿ ಮಿತಿ ಮೀರಿದೆ. ಬೆಸ್ಕಾಂ ವಿದ್ಯುತ್ ವೇಗದಲ್ಲಿ ಎಫ್ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರು ತಿಹಾರ್ ಜೈಲಿಗೆ ಹೋಗುವ ತಪ್ಪೇನು ಮಾಡಿಲ್ಲ. ಈಡಿ, ಐಟಿ, ಸಿಬಿಐ ಅವರ ಬೆನ್ನತ್ತಿಲ್ಲ. ಪುಡಿರೌಡಿ, ಕಿಡಿಗೇಡಿ ಕುಮಾರನ ಕೈಚಳಕ್ಕೆ ಹೆದರುವ ಪ್ರಶ್ನೆಯೂ ಇಲ್ಲ. ಐಷಾರಾಮಯ್ಯನ ಮುಖ ಉಳಿಸಲು ಕರೆಂಟ್ ವೈರ್ ಹಿಡಿದು ಕೆಟ್ಟಿದೆ ಗುಜರಿ ಶಾಪ್ ಕಾಂಗ್ರೆಸ್. ಮಾಜಿ ಸಿಎಂ ಸ್ಪಷ್ಟನೆಗಿಂತ ನೀತಿಗೆಟ್ಟ ರಾಜಕಾರಣದಲ್ಲೇ ಹೆಚ್ಚು ನಂಬಿಕೆ. ಕಂಡವರ ಭೂಮಿಗೆ ಬೇಲಿ ಹಾಕುವ ಕಿಡಿಗೇಡಿಕುಮಾರ ಪರ ಬ್ಯಾಟಿಂಗ್ ಬೀಸಿದ್ದು ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕನ್ನಡಿಗರಿಗಾಗಿ ಕಿಸಿದಿದ್ದೇನೂ ಇಲ್ಲ. ರಾಜಕೀಯವಾಗಿ ಕುಮಾರಸ್ವಾಮಿ ಎದುರಿಸಲಾಗದ ನರಸತ್ತ ಪಕ್ಷ. ಕರೆಂಟ್ ವೈರ್ ಹಿಡಿದು ಶಕುನಿ ಯುದ್ದ ಆರಂಭಿಸಿದೆ. ಕುಮಾರಸ್ವಾಮಿ ಅವರ ಒಂದೇ ಒಂದು ಕ್ಷಿಪಣಿ ಸಾಕು. ಕಾಂಗ್ರೆಸ್ ರಕ್ಕಸ ರಿಪಬ್ಲಿಕ್ ಉಡೀಸ್ ಆಗಲಿಕ್ಕೆ ಶಿಖಂಡಿ ಅಂತ್ಯಕಾಲ ಆರಂಭವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಇದನ್ನೂ ಓದಿ: ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್ಡಿ ಕುಮಾರಸ್ವಾಮಿ ವಿರುದ್ಧ FIR
ಕೊಳಕು ಮಂಡಲ @INCKarnataka ಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ @hd_kumaraswamy ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್ʼಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಅವರ ಭಾನುವಾರದ ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ.1/8#ಕೊಳಕುಮಂಡಲ_ಕಾಂಗ್ರೆಸ್
— Janata Dal Secular (@JanataDal_S) November 15, 2023
ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ‘ಶಿಖಂಡಿ’ಸ್ಥಿತಿಗೆ ಬಂದಿದೆ. ಪಾಪ.. ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ. ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್ ವೈರ್ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು ‘ಶಕುನಿ ಯುದ್ಧ’ ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ ಎಂದು ವಾಗ್ದಾಳಿ ಮಾಡಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:31 pm, Wed, 15 November 23