AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್​​ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ

Gruha Jyothi scheme: ಗೃಹ ಜ್ಯೋತಿ ಯೋಜನೆಗೆ ಹೊಸ ಷರತ್ತು ವಿಧಿಸಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು 'ಗೃಹಜ್ಯೋತಿ' ಯೋಜನೆಯಿಂದ ಹೊರಹಾಕಲು ಸರ್ಕಾರ ಕುತಂತ್ರ ಹೆಣೆದಿದೆ ಎಂದು ಆರೋಪಿಸಿದೆ. ಆದರೆ ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕೃತ ಸ್ಪಷ್ಟನೆ ನೀಡಿದ್ದು, ಇದೆಲ್ಲದರ ಮಾಹಿತಿ ಇಲ್ಲಿದೆ.

ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್​​ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ
ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ Image Credit source: Tv9 Kannada
Sunil MH
| Edited By: |

Updated on:Jul 01, 2026 | 5:11 PM

Share

ಮುಖ್ಯಾಂಶಗಳು

  • ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ ಸಂಬಂಧ ಜೆಡಿಎಸ್​​ ಕಿಡಿ
  • 'ಉಚಿತ ವಿದ್ಯುತ್ ಪಡೆಯಲು ಪಾನ್ ಕಾರ್ಡ್ ಯಾಕೆ ಬೇಕು?'
  • ರಾಜ್ಯ ಕಾಂಗ್ರೆಸ್​​ ಸರ್ಕಾರದಿಂದ ಕುತಂತ್ರ ಎಂದು ಆರೋಪ

ಬೆಂಗಳೂರು, ಜುಲೈ 01: ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್​)​​ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿರುವ ಜೆಡಿಎಸ್​​, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ ಎಂದು ಗಂಭೀರ ಆರೋಪ ಮಾಡಿದೆ.

‘ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ನಾಮ’

ಮನೆ-ಮನೆ ಪರಿಶೀಲನೆ ನೆಪದಲ್ಲಿ ಎಸ್ಕಾಂ ಅಧಿಕಾರಿಗಳನ್ನು ಬಿಟ್ಟು, ಜನಸಾಮಾನ್ಯರನ್ನು ದಾಖಲೆಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಶುರುವಾಗಿದೆ. ಉಚಿತ ವಿದ್ಯುತ್ ಪಡೆಯಲು ಪಾನ್ ಕಾರ್ಡ್ (PAN Card) ಯಾಕೆ ಬೇಕು? ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಕರ್ನಾಟಕದ ನಿವಾಸಿ ಎಂದು ದೃಢೀಕರಿಸಲು ಆಧಾರ್ ಕಾರ್ಡ್‌ ಅಥವಾ ವೋಟರ್ ಐಡಿ ಸಾಲದೇ? ಎಂದು ಪ್ರಶ್ನಿಸಿರುವ ಜೆಡಿಎಸ್​, ಕಳ್ಳ ಮಾರ್ಗದಲ್ಲಿ ಷರತ್ತುಗಳನ್ನು ವಿಧಿಸಿ ಫಲಾನುಭವಿಗಳ ಸಂಖ್ಯೆ ಕಡಿತಗೊಳಿಸಿ ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ನಾಮ ಹಾಕುವ ನಿಮ್ಮ ಉದ್ದೇಶ ಸ್ಪಷ್ಟವಾಗಿದೆ. ಬಡವರು, ರೈತರು ಮತ್ತು ಮಧ್ಯಮ ವರ್ಗದವರನ್ನು ದಿನಕ್ಕೊಂದು ದಾಖಲೆ ಕೇಳಿ ಕಚೇರಿಗಳಿಗೆ ಅಲೆದಾಡಿಸಿ, ಸತಾಯಿಸಿ, ಸೌಲಭ್ಯಗಳಿಂದ ವಂಚಿಸುವುದೇ ನಿಮ್ಮ ಸಾಧನೆಯೇ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜು. 1ರಿಂದ ಗೃಹ ಜ್ಯೋತಿ ಯೋಜನೆ ಪರಿಶೀಲನೆ; ನಿಮ್ಮ ಮನೆಗೆ ಬರುವ ಸಿಬ್ಬಂದಿಗೆ ಯಾವೆಲ್ಲಾ ದಾಖಲೆ ತೋರಿಸ್ಬೇಕು?

ಇಂಧನ ಸಚಿವ ಕೆ.ಜೆ. ಜಾರ್ಜ್​​ ಸ್ಪಷ್ಟನೆ

ವಿಪಕ್ಷಗಳ ಆರೋಪಗಳ ಬೆನ್ನಲ್ಲೇ ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದು, ಅರ್ಹರಲ್ಲದವರನ್ನು ಮಾತ್ರ ಪರಿಷ್ಕರಣೆ ಮಾಡುತ್ತೇವೆ. ಯಾರೆಲ್ಲ ಅರ್ಹರಿದ್ದಾರೆ ಅವರಿಗೆ ಮತ್ತೆ ಕೊಡುತ್ತೇವೆ. ಗೃಹಜ್ಯೋತಿಗೆ ಜಾತಿ ಪ್ರಮಾಣಪತ್ರದ ಅವಶ್ಯಕತೆ ಇಲ್ಲ. ಜಾತಿ ಹೆಸರು ಕಾಲಂನಲ್ಲಿ ಬರೆದರೆ ಸಾಕು. ವಿರೋಧ ಪಕ್ಷದಲ್ಲಿ ಸುಮ್ಮನೇ ಕೂರಲು ಇವರಿಗೆ ಆಗುತ್ತಿಲ್ಲ. ಫಾರಂ ನೋಡಿದ ಮೇಲೆ ಹೇಳಲಿ, ಅದನ್ನು ತೆಗೆದು ನೋಡಿದ ಮೇಲೆ ಎಲ್ಲರಿಗೂ ಗೊತ್ತಾಗುತ್ತದೆ. ನಾವೇನು ವ್ಯವಹಾರ ಪತ್ರವನ್ನು ಕೊಡುವಂತೆ ಬರೆದಿದ್ದೀವಾ? ಎಂದವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:00 pm, Wed, 1 July 26

Follow Us
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ನಿರ್ಮಾಪಕಿ ಬಳಿಕ ಈಗ ಹಿನ್ನೆಲೆ ಗಾಯಕಿಯಾದ ಗಣೇಶ್ ಪತ್ನಿ ಶಿಲ್ಪಾ
ನಿರ್ಮಾಪಕಿ ಬಳಿಕ ಈಗ ಹಿನ್ನೆಲೆ ಗಾಯಕಿಯಾದ ಗಣೇಶ್ ಪತ್ನಿ ಶಿಲ್ಪಾ