ಇನ್ಮುಂದೆ ಕಲುಷಿತ ನೀರು ಸೇವಿಸಿ ಮರಣ ಹೊಂದಿದರೇ ಜಿ.ಪಂ ಸಿಇಒಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ

| Updated By: ವಿವೇಕ ಬಿರಾದಾರ

Updated on: Aug 22, 2023 | 10:18 PM

ಕುಡಿಯುವ ನೀರಿನ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆ ನಡೆಸಿದರು. ಸಭೆಯಲ್ಲಿ "ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೇ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್​​ ಎಚ್ಚರಿಕೆ ನೀಡಿದರು.

ಇನ್ಮುಂದೆ ಕಲುಷಿತ ನೀರು ಸೇವಿಸಿ ಮರಣ ಹೊಂದಿದರೇ ಜಿ.ಪಂ ಸಿಇಒಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಸಭೆ
Follow us on

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಕಲುಷಿತ ನೀರು (Contaminated water) ಸೇವನೆಯಿಂದ ಅನೇಕರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಮತ್ತು ಚಿತ್ರದುರ್ಗ ಜಿಲ್ಲೆಯದ್ದೇ ಇದೆ. ಈ ಕುಡಿಯುವ ನೀರಿನ ಕುರಿತು ಇಂದು (ಆ.22) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆ ನಡೆಸಿದರು. ಸಭೆಯಲ್ಲಿ “ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೇ ಜಿಲ್ಲಾ ಪಂಚಾಯಿತಿ (Jilla Panchayat) ಸಿಇಒ (CEO) ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್​​ ಎಚ್ಚರಿಕೆ ನೀಡಿದರು.

ಅಲ್ಲದೇ ಕಲುಷಿತ ನೀರು ಸೇವನೆಯಿಂದ ಸಾವು ಪ್ರಕರಣಗಳಾದರೆ ನಗರಸಭೆಗಳ ಆಯುಕ್ತರ ಮೇಲೂ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಚಿತಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಮೃತಪಟ್ಟಿದ್ದು, ಚಿತ್ರದುರ್ಗ ಒಂದರಲ್ಲೇ 6-7 ಜನ ಸಾವಿಗೀಡಾಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ. ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಕುಡಿಯುವ ನೀರು ಕುಡಿದು ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ ಎಂದರು.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ

ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಇನ್ನು ಕೆಲವು ಜಿಲ್ಲಗಳ ವಸತಿ ನಿಲಯಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಅನೇಕ ಕೆಲಸಗಳಾಗಬೇಕು. ಪೈಪ್​ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ