ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ 8 ಜಿಲ್ಲೆಗಳಲ್ಲಿ ತಾತ್ಕಾಲಿಕ ವಿನಾಯಿತಿ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಜುಲೈ 16ರಂದು ನಡೆಯಬೇಕಿರುವ ಅಭಿಯಾನಕ್ಕೆ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ಉಡುಪಿ (Udupi), ದಕ್ಷಿಣ ಕನ್ನಡ (Dakshin Kannada), ಉತ್ತರ ಕನ್ನಡ (Uttar Kannada), ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಿನಾಯಿತಿ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ನಿಗದಿಯಂತೆ ಅಭಿಯಾನ ಮುಂದುವರಿಯುತ್ತೆ.
ಹಾಸನ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲೆಯ ಆಲೂರು, ಸಕಲೇಶಪುರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಆದೇಶ ಹೊರಡಿಸಿದ್ದಾರೆ.
Published On - 8:57 pm, Fri, 15 July 22