AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರ ಕಾಲನಿಯಲ್ಲಿ ಪಾನಕ ಮಜ್ಜಿಗೆಯಾದ್ರೂ ತಗೊಳ್ಳಿ ಅಂದ್ರೆ ಬೇಡ ಅಂದಿದ್ರು: ಪೇಜಾವರ ಶ್ರೀಗಳ ಬಗ್ಗೆ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ

ಹಂಸಲೇಖರ ಮಾತಿನಲ್ಲಿ ಯಾವುದು ತಪ್ಪಿದೆ ಎಂದು ಫ್ರೀಡಂ ಪಾರ್ಕ್​ನಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಮಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ರು ಎಂದು ಹೇಳಿ ಈ ವಿಚಾರಗಳನ್ನು ತಿಳಿಸಿದ್ದಾರೆ.

ದಲಿತರ ಕಾಲನಿಯಲ್ಲಿ ಪಾನಕ ಮಜ್ಜಿಗೆಯಾದ್ರೂ ತಗೊಳ್ಳಿ ಅಂದ್ರೆ ಬೇಡ ಅಂದಿದ್ರು: ಪೇಜಾವರ ಶ್ರೀಗಳ ಬಗ್ಗೆ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ
ಜ್ಞಾನಪ್ರಕಾಶ ಸ್ವಾಮೀಜಿ
TV9 Web
| Edited By: |

Updated on:Nov 26, 2021 | 4:58 PM

Share

ಬೆಂಗಳೂರು: ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಂದಾಗ ಪೇಜಾವರರು ನಿರಾಕರಿಸಿದ್ರು. ಅವ್ರು ಈ ನೆಲದ ಕಾನೂನಿಗೆ ಅವ್ರು ಅವಮಾನ ಮಾಡಿಲ್ವಾ. ನಮ್ಮ ದಲಿತರ ಕಾಲನಿಯಲ್ಲಿ ಪಾನಕ ಮಜ್ಜಿಗೆಯಾದ್ರೂ ತಗೊಳ್ಳಿ ಅಂದ್ರೆ ಬೇಡ ಅಂದಿದ್ರು. ಒಂದು ಲೋಟ ಮಜ್ಜಿಗೆ ಕುಡಿಯದೇ, ದಲಿತ ಕಾಲನಿಗೆ ಪಾದಯಾತ್ರೆ ಮಾಡೋದು ಬುಟಾಟಿಕೆಯಲ್ವಾ. ಹಂಸಲೇಖರ ಮಾತಿನಲ್ಲಿ ಯಾವುದು ತಪ್ಪಿದೆ ಎಂದು ಫ್ರೀಡಂ ಪಾರ್ಕ್​ನಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಮಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ರು ಎಂದು ಹೇಳಿ ಈ ವಿಚಾರಗಳನ್ನು ತಿಳಿಸಿದ್ದಾರೆ.

ನಾದಬ್ರಹ್ಮ ಹಂಸಲೇಖ ಹೇಳಿಕೆ ಬೆಂಬಲಿಸಿ ಬೆಂಗಳೂರಿನಲ್ಲಿ ಸಂವಿಧಾನ ಹಿತರಕ್ಷಣಾ ಸಮಿತಿ ಧರಣಿ ನಡೆಸಿದೆ. ಮೆಜೆಸ್ಟಿಕ್​​ನಿಂದ ಫ್ರೀಡಂಪಾರ್ಕ್​ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗಿದೆ. ಮೆರವಣಿಗೆ ಬಳಿಕ ಫ್ರೀಡಂಪಾರ್ಕ್​ನಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. ಪ್ರತಿಭಟನಾ ಜಾಥಾಗೆ ಕನ್ನಡಪರ, ದಲಿತಪರ ಸಂಘಟನೆ, ಹಿಂದುಳಿದ ವರ್ಗಗಳ ಸಂಘಟನೆಗಳು ಸಾಥ್ ನೀಡಿವೆ. ಪ್ರತಿಭಟನಾ ಸ್ಥಳ ಫ್ರೀಡಂಪಾರ್ಕ್‌ಗೆ ಸಚಿವ ಎಸ್. ಅಂಗಾರ ಭೇಟಿ ನೀಡಿದ್ದಾರೆ. ಈ ವೇಳೆ, ಪ್ರತಿಭಟನಾ ಸಮಿತಿ ಸಚಿವರಿಗೆ ಹಲವು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಹಕ್ಕೊತ್ತಾಯದ ಮನವಿಯನ್ನು ಸರ್ಕಾರದ ಪರ ಪಡೆದಿದ್ದೇನೆ. ಸಿಎಂ, ಅಧಿಕಾರಿಗಳ ಜೊತೆ ಚರ್ಚಿಸಿ ಬೇಡಿಕೆ ಈಡೇರಿಸ್ತೇವೆ ಎಂದು ಧರಣಿ ಸ್ಥಳ ಫ್ರೀಡಂಪಾರ್ಕ್‌ನಲ್ಲಿ ಸಚಿವ ಅಂಗಾರ ಹೇಳಿದ್ದಾರೆ.

ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಾಗೂ ಸಿನಿಮಾ ಸಾಹಿತಿ ಹಂಸಲೇಖ ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಪೇಜಾವರಶ್ರೀಗಳ ಕುರಿತಾಗಿ ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಿದ್ದವು. ಈ ಹಿನ್ನೆಲೆಯಲ್ಲಿ ವಾದ, ವಿವಾದಗಳು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿತ್ತು. ಬಳಿಕ ಘಟನೆ ಸಂಬಂಧ ಪ್ರತಿಭಟನೆಗಳು ನಡೆದಿದ್ದವು. ಹಂಸಲೇಖ ವಿರುದ್ಧ ಪೊಲೀಸ್ ದೂರು ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಜ್ಞಾನಪ್ರಕಾಶ ಸ್ವಾಮೀಜಿ ಹೀಗೆ ಹೇಳಿಕೆ ನೀಡಿದ್ದಾರೆ.

ತನಿಖಾಧಿಕಾರಿ ಎದುರು ಕಣ್ಣೀರು ಹಾಕಿದ ಸಂಗೀತ ನಿರ್ದೇಶಕ ಹಂಸಲೇಖ ಪೇಜಾವರ ಮಠದ ದಿವಂಗತ ಸ್ವಾಮೀಜಿ ವಿಶ್ವೇಶ ತೀರ್ಥರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬಸವನಗುಡಿ ಠಾಣೆ ಪೊಲೀಸರು ಗುರುವಾರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ತಾವು ನೀಡಿದ ಹೇಳಿಕೆಯ ಬಗ್ಗೆ ಹಂಸಲೇಖ ಬೇಸರ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೇ, ತನಿಖಾಧಿಕಾರಿ ಮುಂದೆ ಕಣ್ಣೀರು ಹಾಕಿದರು ಎಂದು ಮೂಲಗಳು ಹೇಳಿವೆ. ನಾನು ಏಕೆ ಹಾಗೆ ಹೇಳಿದೆನೋ ಗೊತ್ತಿಲ್ಲ. ನನಗೆ ಅಂಥ ಯಾವ ಉದ್ದೇಶವೂ ಇರಲಿಲ್ಲ. ಮಾತಿನ ಭರದಲ್ಲಿ ಹೇಳಿದೆ. ನನ್ನ ಹೇಳಿಕೆಗೆ ನನ್ನ ಹೆಂಡತಿಯೇ ಬೇಸರ ವ್ಯಕ್ತಪಡಿಸಿದ್ದರು. ನನ್ನ ಜೀವನದಲ್ಲಿ ಎಂದೂ ಹೀಗೆ ಮಾಡಿಕೊಂಡಿರಲಿಲ್ಲ. ನಾನು ಅಂಥ ಹೇಳಿಕೆ ನೀಡಿದ್ದರಿಂದ ತಪ್ಪಾಗಿದೆ ಎಂದು ಹಂಸಲೇಖ ಹೇಳಿದ್ದರು.

ಯಾವುದೇ ಧರ್ಮ ಅಥವಾ ಜಾತಿಯನ್ನು ನಿಂದಿಸುವ ಉದ್ದೇಶ ನನಗೆ ಇರಲಿಲ್ಲ. ಈ ಹೇಳಿಕೆಯಿಂದಾಗಿ ನನ್ನ ವೃತ್ತಿಯಲ್ಲಿಯೂ ಹಿನ್ನಡೆ ಉಂಟಾಗಿದೆ. ತುಂಬಾ ನೋವು ಅನುಭವಿಸಿದ್ದೇನೆ ಎಂದು ಹಂಸಲೇಖ ತನಿಖಾಧಿಕಾರಿ ಎದುರು ಕಣ್ಣೀರು ಹಾಕಿದ್ದರು. ನಂತರ ಐದು ನಿಮಿಷ ಸುಧಾರಿಸಿಕೊಂಡು ಕಣ್ಣೊರೆಸಿಕೊಂಡು ಸಮಾಧಾನ ಮಾಡಿಕೊಂಡರು ಎಂದು ಮೂಲಗಳು ಹೇಳಿವೆ.

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ, ಮೇಲ್ಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವಹೇಳನಕಾರಿ ವಾಕ್ಯ ಪ್ರಯೋಗಿಸಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಫೇಸ್ಬುಕ್​ನಲ್ಲಿ ಜನರು ವಿವಿಧ ರೀತಿಯ ಕಮೆಂಟ್​ಗಳನ್ನು ಮಾಡಿ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ: ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಂಸಲೇಖ ವಿಚಾರಣೆ: ಹೊರಗೆ ಪರ-ವಿರೋಧ ಪ್ರತಿಭಟನೆ

ಇದನ್ನೂ ಓದಿ: Hamsalekha: ವಿಚಾರಣೆಗೆ ಹಾಜರಾದ ಹಂಸಲೇಖ, ಓಡೋಡಿ ಬಂದ ನಟ ಚೇತನ್; ಠಾಣೆಯ ಬಳಿ ಉದ್ವಿಗ್ನ ಪರಿಸ್ಥಿತಿ

Published On - 4:06 pm, Fri, 26 November 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ