KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ

ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 26, 2022 | 11:05 AM

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2016ರಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿದ್ದ ತಪ್ಪು ಆದೇಶವನ್ನು ಆರು ವರ್ಷ ಕಳೆದರೂ ತಿದ್ದಿಕೊಳ್ಳುವ ಆಸಕ್ತಿ ತೋರುತ್ತಿಲ್ಲ. ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್​ಸಿ, ‘ಪೆಟ್ರೋಲ್ ವಾಹನದಲ್ಲಿ ಹೆವಿ ಲೈಸೆನ್ಸ್ ಇರಬೇಕು’ ಎಂದು ಸೂಚಿಸಿತ್ತು.

ಪೆಟ್ರೋಲ್ ವಾಹನಗಳ ವಿಭಾಗದಲ್ಲಿ ಬೃಹತ್ ವಾಹನಗಳು ಬರುವುದಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಈ ಆದೇಶ ಹೊರಡಿಸಲಾಗಿತ್ತು. ಪೆಟ್ರೋಲ್ ವಾಹನದಲ್ಲಿ ಹೆವಿ ವೆಹಿಕಲ್ ಲೈಸೆಸ್ಸ್ ಇಲ್ಲ ಎನ್ನುವ ಕಾರಣಕ್ಕೆ ಹಲವು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದರು.

ಇದೀಗ ಏಕಾಏಕಿಯಾಗಿ ಕೆಎಸ್ಆರ್​ಟಿಸಿಯಲ್ಲಿ ಡೀಸೆಲ್ ವೆಹಿಕಲ್​ನಲ್ಲಿ ತರಬೇತಿ ಮುಗಿಸಿರುವವರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳು ಕೆಪಿಎಸ್​ಸಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನ್ಯಾಯಾಲಯ ಸಹ ಪೆಟ್ರೋಲ್ ವಾಹನಗಳಲ್ಲಿ ಭಾರಿ ವಾಹನ ಇರುವುದಿಲ್ಲ ಎಂದು ತೀರ್ಪು ಕೊಟ್ಟಿದೆ. ಆದರೂ ವಂಚಿತ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕೆಪಿಎಸ್​ಸಿಯ ಈ ನಡೆಯ ಹಿಂದೆ ಹುಟ್ಟಿಕೊಂಡಿದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

Published On - 11:05 am, Tue, 26 July 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ