Karnataka Budget 2023: ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದೆ.

Karnataka Budget 2023: ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ
ಪ್ರಾತಿನಿಧಿಕ ಚಿತ್ರImage Credit source: eesanje.com
Follow us
TV9 Web
| Updated By: Digi Tech Desk

Updated on:Feb 10, 2023 | 8:50 AM

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ (legislature) ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್​ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ವರ್ಷದ ಮೊದಲ ಅಧಿವೇಶನ ಇದಾಗಿದೆ. ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್ ಅವರು ಜಂಟಿ ಅಂಧಿವೇಶನದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಲಿದ್ದಾರೆ. ಜೊತೆಗೆ ಈ ವರ್ಷದ ಸರ್ಕಾರದ ಮುನ್ನೋಟದ ಬಗ್ಗೆ ಭಾಷಣದಲ್ಲಿ ಪ್ರಸ್ತಾಪ ಮಾಡುವುದು ರೂಢಿಯಲ್ಲಿದೆ.

ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ

ಫೆ. 17 ರಂದು ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ ಮಾಡಲಿದ್ದಾರೆ. ಚುನಾವಣಾ ವರ್ಷವಾಗಿರುವುರಿಂದ ಸಿಎಂ ಬೊಮ್ಮಾಯಿ ಜನಪ್ರಿಯ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಫೆ.10ರಂದು ಅಧಿವೇಶನ ಪ್ರಾರಂಭವಾಗಿ ಫೆಬ್ರವರಿ ಅಂತ್ಯದವರೆಗೂ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆ ಬಳಿಕ ಉಭಯ ಸದನಗಳಲ್ಲಿ ಬಜೆಟ್ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಬಳಿಕ ಸರ್ಕಾರ ಶಾಸಕರು ಮಾಡಿದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಆ ನಂತರ ಉಭಯ ಸದನಗಳಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ಪಡೆಯುವುದು ವಾಡಿಕೆ.

ಇದನ್ನೂ ಓದಿ: Budget 2023 ಮಧ್ಯಮ ವರ್ಗಕ್ಕೆ ಬಜೆಟ್​​​ನಲ್ಲಿ ಏನೇನಿರುತ್ತದೆ?; ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ಚುನಾವಣಾ ವರ್ಷದಲ್ಲಿ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸದೇ ಜೂನ್ ಅಂತ್ಯದವರೆಗೆ ಲೇಖಾನುದಾನ ಪಡೆಯುವ ಸಂಪ್ರದಾಯವಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:19 pm, Wed, 25 January 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ