ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ (legislature) ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ವರ್ಷದ ಮೊದಲ ಅಧಿವೇಶನ ಇದಾಗಿದೆ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರು ಜಂಟಿ ಅಂಧಿವೇಶನದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಲಿದ್ದಾರೆ. ಜೊತೆಗೆ ಈ ವರ್ಷದ ಸರ್ಕಾರದ ಮುನ್ನೋಟದ ಬಗ್ಗೆ ಭಾಷಣದಲ್ಲಿ ಪ್ರಸ್ತಾಪ ಮಾಡುವುದು ರೂಢಿಯಲ್ಲಿದೆ.
ಫೆ. 17 ರಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಚುನಾವಣಾ ವರ್ಷವಾಗಿರುವುರಿಂದ ಸಿಎಂ ಬೊಮ್ಮಾಯಿ ಜನಪ್ರಿಯ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಫೆ.10ರಂದು ಅಧಿವೇಶನ ಪ್ರಾರಂಭವಾಗಿ ಫೆಬ್ರವರಿ ಅಂತ್ಯದವರೆಗೂ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆ ಬಳಿಕ ಉಭಯ ಸದನಗಳಲ್ಲಿ ಬಜೆಟ್ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಬಳಿಕ ಸರ್ಕಾರ ಶಾಸಕರು ಮಾಡಿದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಆ ನಂತರ ಉಭಯ ಸದನಗಳಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ಪಡೆಯುವುದು ವಾಡಿಕೆ.
ಇದನ್ನೂ ಓದಿ: Budget 2023 ಮಧ್ಯಮ ವರ್ಗಕ್ಕೆ ಬಜೆಟ್ನಲ್ಲಿ ಏನೇನಿರುತ್ತದೆ?; ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು
ಚುನಾವಣಾ ವರ್ಷದಲ್ಲಿ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸದೇ ಜೂನ್ ಅಂತ್ಯದವರೆಗೆ ಲೇಖಾನುದಾನ ಪಡೆಯುವ ಸಂಪ್ರದಾಯವಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:19 pm, Wed, 25 January 23