AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಮಾರ್ಗಸೂಚಿ ಹೊರಡಿಸಿದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ

ಬೆಂಗಳೂರು ನಗರದ ಟ್ರಾಫಿಕ್ ಕಂಟ್ರೋಲ್​​ಗೆ ಪ್ರಧಾನಿ ಸೂಚಿಸಿದ ಹಿನ್ನೆಲೆ, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅವರು ಇಂದು (ಜುಲೈ 6) ಹೆಬ್ಬಾಳ ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಮಾರ್ಗಸೂಚಿ ಹೊರಡಿಸಿದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ
ಹೆಬ್ಬಾಳ ಜಂಕ್ಷನ್​ ಹೊಸ ಟ್ರಾಫಿಕ್​ ಮಾರ್ಗಸೂಚಿ
TV9 Web
| Edited By: |

Updated on:Jul 06, 2022 | 6:41 PM

Share

ಬೆಂಗಳೂರು: ನಗರದ ಟ್ರಾಫಿಕ್ ನಿಯಂತ್ರಣಕ್ಕಾ​​ಗಿ (Traffic Control) ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ಸೂಚಿಸಿದ್ದ ಹಿನ್ನೆಲೆಯಲ್ಲಿ, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ (Joint Police Commissioner Ravi Kante Gowda) ಅವರು ಇಂದು (ಜುಲೈ 6) ಹೆಬ್ಬಾಳ ಜಂಕ್ಷನ್ (Hebbal Junction) ಬಳಿ ಟ್ರಾಫಿಕ್ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.  ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.  ಈ ಎಲ್ಲ ಮಾರ್ಗ ಸೂಚಿಗಳು 08-07-2022 ರ ಶುಕ್ರವಾರ ಬೆಳಗ್ಗೆ 6-00 ಗಂಟೆಯಿಂದ ಜಾರಿಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿ: ಚಾಮುಂಡಿ ಬೆಟ್ಟದಲ್ಲಿ ಹೊಸ ಮನೆಗಳ‌ ನಿರ್ಮಾಣ ಮಾಡುವುದಿಲ್ಲ ಹಾಗೂ ಜನರನ್ನು ಒಕ್ಕಲೆಬ್ಬಿಸುವುದಿಲ್ಲ: ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟನೆ

ಟ್ರಾಫಿಕ್ ಕಂಟ್ರೋಲ್​ಗೆ  ಕೈಗೊಂಡಿರುವ ಕ್ರಮಗಳು

  1.  ಯಲಹಂಕ/ಕೊಡಿಗೇಹಳ್ಳಿ/ಕೆಂಪಾಪುರ/ಜಕ್ಕೂರು ಇತ್ಯಾದಿ ಕಡೆಗಳಿಂದ ಸರ್ವಿಸ್ ರಸ್ತೆಯ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಮೂಲಕ ನೇರವಾಗಿ ಪ್ರವೇಶಿಸುವಂತಿಲ್ಲ. ಬದಲಾಗಿ ಹೆಬ್ಬಾಳ ಸರ್ಕಲ್ ನಲ್ಲಿರುವ ಲೂಪ್ ರ‍್ಯಾಂಪ್​​ನ್ನು ಬಳಸಿ, ನಗರಕ್ಕೆ ಪ್ರವೇಶಿಸಬೇಕು.
  2. ಏರ್‌ಪೋರ್ಟ್​ನ ಏಲಿವೇಟೆಡ್ ಕಾರಿಡಾರ್‌ನಿಂದ ಬೆಂಗಳೂರು ನಗರದ ಕಡೆಗೆ ಬರುವ ಬಸ್‌ಗಳು ಹೆಬ್ಬಾಳ ಸರ್ಕಲ್​​ನಲ್ಲಿ ಬಸ್ ಪ್ರಯಾಣಿಕರನ್ನು ನಿಗದಿಪಡಿಸಿದ ಬಸ್​ಬೇನಲ್ಲಿ ಲೂಪ್ರ‍್ಯಾಂಪ್‌ಗಿಂತ ಮುಂಚೆ ಹತ್ತಿಸಿಕೊಳ್ಳಬೇಕು‌‌
  3. ಏರ್‌ಪೋರ್ಟ್ ಎಕ್ಸ್‌ಪ್ರೆಸ್‌ ಹೆದ್ದಾರಿಯಿಂದ ನಗರಕ್ಕೆ ಬರುವ ವಾಹನಗಳು ಮೊದಲಿನಂತೆ ಹೆಬ್ಬಾಳ ಫ್ಲೈ ಓವರ್ ಮೂಲಕ ನಗರವನ್ನು ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
  4. ಏರ್‌ಪೋರ್ಟ್ ಎಕ್ಸ್ ಪ್ರೆಸ್ ಹೆದ್ದಾರಿಯಿಂದ ಕೆ.ಆರ್​ಪುರಂ, ತುಮಕೂರು ಕಡೆಗೆ ಹೋಗುವವರಿಗೆ ಮೊದಲಿನಂತೆ ಸರ್ವಿಸ್ ರಸ್ತೆ ಮೂಲಕ ಹೋಗಲು ಅವಕಾಶ ನೀಡಲಾಗಿದೆ.
  5. ಏರ್‌ಪೋರ್ಟ್ ಎಕ್ಸ್ ಪ್ರೆಸ್ ಹೆದ್ದಾರಿ ಮೂಲಕ ಕೆಂಪಾಪುರಂ ಕಡೆ ಹೋಗುವವರು ವಿದ್ಯಾಶಿಲ್ಪ/ಯಲಹಂಕ ಬೈಪಾಸ್ ಬಳಿ ಸರ್ವಿಸ್ ರಸ್ತೆಯನ್ನು ಬಳಸಬಹುದು
  6.  ವಾಹನ ಸವಾರರಿಗೆ ಡೈವರ್ಷನ್ ನಾಮಫಲಕ ಹೆಚ್ಚಳ, ವಾಹನ ಸವಾರರಿಗೆ ನಿರ್ದೇಶಿಸಲು ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗುವುದು.
  7. ಯಾವ ಮಾರ್ಗದ ಮೂಲಕ ಹೋಗಬೇಕು ಅನ್ನೋದರ ಕುರಿತು ಸೂಚನಾ ಫಲಕ ಅಳವಡಿಸಲಿದ್ದಾರೆ.

ಇದನ್ನು ಓದಿ: ಚಂಡೀಗಢದಿಂದ ಬಂದು ಚಿಕ್ಕಬಳ್ಳಾಪುರ ಬಳಿ ಫಾರ್ಮ್ ಹೌಸ್ ಮಾಡಿರುವ ಕಳಂಕಿತ ಐಪಿಎಸ್ ಅಮೃತ್ ಪೌಲ್: ಸಿಐಡಿ ಅಧಿಕಾರಿಗಳಿಂದ ದಾಳಿ

Published On - 6:20 pm, Wed, 6 July 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು