ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಬಿಜೆಪಿ ನಾಯಕರು ರಾಜ್ಯಕ್ಕೆ ದಂಡೆತ್ತಿ ಬರುತ್ತಿದ್ದಾರೆ. ಇದೇ ಮಾರ್ಚ್ 12ರಂದು ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಸಂಜೆ 5.20ಕ್ಕೆ HAL ಏರ್ಪೋರ್ಟ್ಗೆ ಬಂದಿಳಿಯಲಿದ್ದು ರಸ್ತೆ ಮಾರ್ಗವಾಗಿ ಕೆ.ಆರ್.ಪುರನಲ್ಲಿ ನಡೆಯಲಿರುವ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಕೆ.ಆರ್.ಪುರಂನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕೆಆರ್ ಪುರಂನ ಗಣಪತಿ ದೇವಸ್ಥಾನದ ಬಳಿ ಪಕ್ಷದ ಮಹಿಳಾ ಕಾರ್ಯಕರ್ತರಿಂದ ಸ್ವಾಗತ ಕೋರಿದ ನಂತರ ರೋಡ್ ಶೋ ನಡೆಸಿ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್, ಎಂಟಿಬಿ ನಾಗರಾಜ್, ಡಾ.ಕೆ.ಸುಧಾಕರ್, ಮುನಿರತ್ನ ಸೇರಿದಂತೆ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ. ಜೆಪಿ ನಡ್ಡಾ ಆಗಮನ ಹಿನ್ನೆಲೆ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Bengaluru-Mysuru Highway:ಮಾ.12ರಂದು ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಡ್ರೋನ್ ಹಾರಾಟ ನಿಷೇಧ
ಮಂಡ್ಯ: ಮಂಡ್ಯವನ್ನ ಕಬ್ಜ ಮಾಡಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಖಾಡಕ್ಕೆ ಇಳಿಯುತ್ತಿದ್ದಾರೆ. ಮಾರ್ಚ್ 12ರಂದು ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ(Bengaluru-Mysuru Highway) ಮಾಡಲು ಸಕ್ಕರೆ ನಾಡಿಗೆ ಆಗಮಿಸುತ್ತಿರುವ ಮೋದಿ ಹೈವೇ ಲೋಕಾರ್ಪಣೆ ವೇಳೆ ರೋಡ್ ಶೋ(Modi Road Show) ನಡೆಸಲಿದ್ದಾರೆ. ಈ ಹಿನ್ನೆಲೆ ಮೋದಿ ಸಂಚರಿಸುವ ಮಾರ್ಗದಲ್ಲಿ ಡ್ರೋನ್ ಹಾರಾಟ ನಿಷೇಧ ಹೇರಿ ಮಂಡ್ಯ ಜಿಲ್ಲಾಧಿಕಾರಿ ಗೋಪಾಲಕೃಷ್ಣರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಮಾರ್ಚ್ 12ಕ್ಕೆ ಮಂಡ್ಯದಲ್ಲಿ ಮೋದಿ ಮೆಗಾ ರೋಡ್ ಶೋ ಹಿನ್ನಲೆ ಡ್ರೋನ್ ಹಾಗೂ ಹೆಲಿಕ್ಯಾಮ್ ಹಾರಿಸಲು ಜಿಲ್ಲಾಡಳಿತ ನಿಷೇಧ ಹೇರಿದೆ. ಭದ್ರತಾ ಹಿತಾದೃಷ್ಠಿಯಿಂದ 15 ಕಿಲೋ ಮೀಟರ್ ವರೆಗೂ ಡ್ರೋನ್ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಎಸ್.ಪಿ.ಜಿ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಏರಿಯಲ್ ಸರ್ವೆ ನಡೆಸಿದೆ. ವಿಶೇಷ ಭದ್ರತಾ ತಂಡದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಮಾನವ ರಹಿತ ಎಲೆಕ್ಟ್ರಿಕಲ್ ವಸ್ತು ಹಾಗೂ ಹೆಲಿಕಾಪ್ಟರ್ ಹಾರಟಕ್ಕೂ ನಿಷೇಧ ಹೇರಲಾಗಿದೆ. ಡ್ರೋನ್ ಅಥವಾ ಹೆಲಿಕ್ಯಾಮ್ ಹಾರಿಸಿದರೆ ಕಾನೂನು ರೀತಿಯ ಕ್ರಮ ತೆಗೆದು ಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:16 am, Thu, 9 March 23