AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರಿನ ಸಂಪರ್ಕಕ್ಕೆ 2.3 ಕೋಟಿ ರೂ. ಕೇಳಿದ ಜಲಮಂಡಳಿ: ಜೆಪಿ ನಗರ ಅಪಾರ್ಟ್​ಮೆಂಟ್ ನಿವಾಸಿಗಳಿಂದ ಚುನಾವಣಾ ಬಹಿಷ್ಕಾರ

Bangalore Water Crisis: ಏಪ್ರಿಲ್ 10 ರಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ರಾಯಲ್ ಲೇಕ್‌ಫ್ರಂಟ್ ರೆಸಿಡೆನ್ಸಿ ನಿವಾಸಿಗಳು ಮತ್ತು ಸೈಟ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘವು ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದೆ. ಆ ಮೂಲಕ ಜಲಮಂಡಳಿಯ ವಿರುದ್ಧ ಪ್ರತಿಭಟನೆಯನ್ನು ದಾಖಲಿಸಿದೆ.

ಕಾವೇರಿ ನೀರಿನ ಸಂಪರ್ಕಕ್ಕೆ 2.3 ಕೋಟಿ ರೂ. ಕೇಳಿದ ಜಲಮಂಡಳಿ: ಜೆಪಿ ನಗರ ಅಪಾರ್ಟ್​ಮೆಂಟ್ ನಿವಾಸಿಗಳಿಂದ ಚುನಾವಣಾ ಬಹಿಷ್ಕಾರ
ಜಲ ಮಂಡಳಿ
Ganapathi Sharma
|

Updated on: Apr 12, 2024 | 10:39 AM

Share

ಬೆಂಗಳೂರು, ಏಪ್ರಿಲ್ 12: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯಾವುದೇ ಮೂಲಸೌಕರ್ಯ ಶುಲ್ಕವನ್ನು ವಿಧಿಸದೆ ಅಪಾರ್ಟ್​ಮೆಂಟ್​ಗಳಿಗೆ ಮತ್ತು ಬಡಾವಣೆಗಳಿಗೆ ಕಾವೇರಿ ನೀರು (Cauvery Water) ಸಂಪರ್ಕವನ್ನು ನೀಡುತ್ತಿದೆ. ಆದರೆ, ಜೆಪಿ ನಗರ 8 ನೇ ಹಂತದ ಪಿಎಚ್‌ಎಸ್‌ನ ರಾಯಲ್ ಲೇಕ್‌ಫ್ರಂಟ್ ನಿವಾಸಿಗಳಿಗೆ ಕಾವೇರಿ ನೀರು ಸಂಪರ್ಕ ಒದಗಿಸಲು 2.3 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ರಾಯಲ್ ಲೇಕ್‌ಫ್ರಂಟ್ ಅಪಾರ್ಟ್​​ಮೆಂಟ್ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿಗಳಿಗೆ ಪತ್ರವನ್ನೂ ಬರೆದಿದ್ದಾರೆ.

ಏಪ್ರಿಲ್ 10 ರಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ರಾಯಲ್ ಲೇಕ್‌ಫ್ರಂಟ್ ರೆಸಿಡೆನ್ಸಿ ನಿವಾಸಿಗಳು ಮತ್ತು ಸೈಟ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘವು ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದೆ. ಆ ಮೂಲಕ ಜಲಮಂಡಳಿಯ ವಿರುದ್ಧ ಪ್ರತಿಭಟನೆಯನ್ನು ದಾಖಲಿಸಿದೆ.

ಜಲ ಮಂಡಳಿಯು ರಾಯಲ್ ಲೇಕ್‌ಫ್ರಂಟ್ ರೆಸಿಡೆನ್ಸಿಯ ಸುತ್ತಮುತ್ತಲಿನ ಸ್ಥಳಗಳನ್ನು ಒಳಗೊಂಡಂತೆ ರೆವೆನ್ಯೂ ಮತ್ತು ‘ಬಿ-ಖಾತಾ’ ಲೇಔಟ್‌ಗಳ ನಿವಾಸಿಗಳಿಗೆ ಯಾವುದೇ ಮೂಲಸೌಕರ್ಯ ಶುಲ್ಕಗಳನ್ನು ವಿಧಿಸದೆಯೇ ಸಂಪರ್ಕ ಒದಗಿಸುತ್ತದೆ. ಆರ್​ಎಲ್​ಎಫ್ ಲೇಔಟ್ ನಮ್ಮ ಸುತ್ತಮುತ್ತಲಿನ ಜನರು ಬಳಸುವ ಉದ್ಯಾನವನಗಳಂತಹ ಸಾಮಾನ್ಯ ಮೂಲಸೌಕರ್ಯಗಳನ್ನು ಸಹ ಹೊಂದಿದೆ ಎಂದು ಪತ್ರದಲ್ಲಿ ನಿವಾಸಿಗಳು ಉಲ್ಲೇಖಿಸಿದ್ದಾರೆ.

ಬಿಡಿಎ ಅನುಮೋದಿತ ಲೇಔಟ್‌ಗಳಾದ ರಘುವನಹಳ್ಳಿಯ ಬಿಸಿಎಂಸಿ ಲೇಔಟ್, ನಾರಾಯಣನಗರ ಹಂತ 1 ಮತ್ತು ಹಂತ 2, ದೊಡ್ಡಕಲ್ಲಸಂದ್ರ, ಬಾಲಾಜಿ ಲೇಔಟ್, ವಾಜರಹಳ್ಳಿ, ಬಿಡಿಎ ನೌಕರರ ಬಡಾವಣೆ, ದೊಡ್ಡಕಲ್ಲಸಂದ್ರ ಮತ್ತು ಬಿಸಿಸಿ ಎಚ್‌ಎಸ್ ಲೇಔಟ್, ವಾಜರಹಳ್ಳಿ ಬಿಡಬ್ಲ್ಯುಎಸ್‌ಎಸ್‌ಬಿ ನೀರಿನ ಸಂಪರ್ಕದ ಪ್ರಯೋಜನ ಪಡೆದಿರುವುದು ನಮಗೆ ತಿಳಿದು ಬಂದಿದೆ. ಯಾವುದೇ ಮೂಲಸೌಕರ್ಯ ಶುಲ್ಕವನ್ನು ಪಾವತಿಸದೆ ಮತ್ತು ಇಂಡಿವಿಜುವಲ್ ಹೌಸ್​ಗಳಿಗೆ ಕೇವಲ ಸಂಪರ್ಕ ಶುಲ್ಕ ಅಷ್ಟೇ ವಿಧಿಸಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಂಘವು ಪತ್ರದಲ್ಲಿ ತಿಳಿಸಿದೆ.

ನಾವು ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ. ಆದರೆ, ಸದ್ಯ ಬೋರ್‌ವೆಲ್​​ಗಳು ಬತ್ತಿ ಹೋಗಿದ್ದು, ಖಾಸಗಿ ಟ್ಯಾಂಕರ್‌ಗಳ ಮೇಲೆ ಹೆಚ್ಚಿನ ದರ ನೀಡಿ ಅವಲಂಬಿತರಾಗಿದ್ದೇವೆ ಎಂದು ಸಂಘದ ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 58 ಲಕ್ಷ ರೂ. ಮೌಲ್ಯದ ಬಂಗಾರ ವಶ

ಕಳೆದ 20 ವರ್ಷಗಳಿಂದ ಜಲ ಮಂಡಳಿಯ ನೀರಿನ ಸಂಪರ್ಕ ಪಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದು ನಿವಾಸಿಗಳು ಹೇಳಿದ್ದಾರೆ. ನಮ್ಮ ಸಂಘದ ಮೂಲಕ ಆರ್‌ಎಲ್‌ಎಫ್ ನಿವಾಸಿಗಳು ಜಲ ಮಂಡಳಿ ಜತೆ ಕಾವೇರಿ ನೀರಿನ ಸಂಪರ್ಕಕ್ಕಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ನಮಗೆ 2.3 ಕೋಟಿ ರೂ. ವರೆಗೆ ಪಾವತಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜತೆಗೆ, ಸಮಸ್ಯೆ ಬಗೆಹರಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಮಾತ್ರವಲ್ಲದೆ ಮುಂದಿನ ಚುನಾವಣೆಗಳನ್ನೂ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ