ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆಯಿಂದ ವಾತಾವರಣದಲ್ಲೂ ನಿಧಾನವಾಗಿ ಬದಲಾವಣೆಯಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ (ಜೂನ್ 3, ಗುರುವಾರ) ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಒಂದು ದಾಖಲೆ ನಿರ್ಮಾಣವಾಗಿದೆ. ಕಳೆದ 7 ವರ್ಷಗಳಲ್ಲಿ ಜೂನ್ ತಿಂಗಳಲ್ಲಿನ ಅತ್ಯಂತ ತೇವಭರಿತ ದಿನವೆಂಬ ಹೆಸರಿಗೆ ಜೂನ್ 3 ಪಾತ್ರವಾಗಿದೆ. ಬೆಂಗಳೂರಿನಲ್ಲಿ ಜೂನ್ 3ರ ಬೆಳಗ್ಗೆ 8:30ರಿಂದ ಜೂನ್ 4ರ ಬೆಳಗ್ಗೆ 8:30ರವರೆಗೆ 52.44 ಮಿಲಿಮೀಟರ್ ಮಳೆಯಾಗಿದ್ದು, ಜೂನ್ 3 ಕಳೆದ 7 ವರ್ಷಗಳಲ್ಲಿ ಜೂನ್ ತಿಂಗಳಲ್ಲಿನ ಅತ್ಯಂತ ತೇವಭರಿತ ದಿನ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಜಿಲ್ಲೆಯಲ್ಲಿ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ದಳದ 49 ಮಳೆ ಅಳತೆ ಕೇಂದ್ರಗಳಿದ್ದು, ಎಲ್ಲಾ 5 ತಾಲೂಕುಗಳಲ್ಲೂ ಉತ್ತಮ ಮಳೆಯಾಗಿದೆ ಎಂದು ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಭಾರತೀಯ ಹವಾಮಾನ ಇಲಾಖೆಯ ಮೂರು ಮಳೆ ಅಳತೆ ಕೇಂದ್ರಗಳು ಮಾತ್ರ ಇವೆ.
After seeing the hottest June day in 7 years, #Bengaluru city saw it’s wettest June day in 7 years by recording 52.4 mm of rainfall till 8:30 am today.#HAL received 41.3mm.#BengaluruRains #Premonsoon #Karnataka
— Bengaluru Weather (@BngWeather) June 4, 2021
ಕರ್ನಾಟಕ ರಾಜಧಾನಿಯಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸೂಚನೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ನಿನ್ನೆ (ಜೂನ್ 4) ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡಿನ ಎಲ್ಲಾ ಭಾಗಗಳಲ್ಲೂ ಮಳೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಸೆಂಟಿ ಮೀಟರ್ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ ಪ್ರದೇಶದಲ್ಲಿ ಕೂಡ 11 ಸೆಂಟಿ ಮೀಟರ್ ಮಳೆ ಸುರಿದಿದೆ. ಜೊತೆಗೆ, ಬೆಳಗಾವಿಯಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ.
ಕಾರವಾರ, ಬಾದಾಮಿ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ 7 ಸೆಂಟಿ ಮೀಟರ್ ಮಳೆ ಆಗಿದೆ. ಮುಂದಿನ ಮೂರು ದಿನಗಳ ಕಾಲ ಈ ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ. ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿಯ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಆಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ ಕೊಡಲಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿಯೂ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಕೊವಿಡ್ ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯತ್ಗೂ 50 ಸಾವಿರ ಅನುದಾನ ಬಿಡುಗಡೆ: ಸಿಎಂ ಯಡಿಯೂರಪ್ಪ
Kerala budget: ಕೇರಳ ಬಜೆಟ್ನಲ್ಲಿ ₹20,000 ಕೋಟಿ ಕೊವಿಡ್ ಪ್ಯಾಕೇಜ್ ಘೋಷಿಸಿದ ವಿತ್ತ ಸಚಿವ ಬಾಲಗೋಪಾಲ್
(Bengaluru records its wettest day in June in June 7 years)