ಕರ್ನಾಟಕ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ

ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್​ರನ್ನು (BS Patil new Lokayukta of Karnataka) ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ
ಬಿ.ಎಸ್. ಪಾಟೀಲ್
Follow us
TV9 Web
| Updated By: ಆಯೇಷಾ ಬಾನು

Updated on:Jun 14, 2022 | 7:30 PM

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್​ರನ್ನು (BS Patil new Lokayukta of Karnataka) ಸರ್ಕಾರ ನೇಮಕ ಮಾಡಿದೆ. ರಾಜ್ಯ ಸರ್ಕಾರದ ಶಿಫಾರಸಿಗೆ ರಾಜ್ಯಪಾಲ ಗೆಹ್ಲೋಟ್‌ ಅಂಕಿತ ಹಾಕಿದ್ದು ಪ್ರಸ್ತುತ ಉಪ ಲೋಕಾಯುಕ್ತರಾಗಿರುವ ಬಿ.ಎಸ್.ಪಾಟೀಲ್ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ರಾಜಭವನದಲ್ಲಿ ನಾಳೆ ಬೆಳಗ್ಗೆ 9.45ಕ್ಕೆ ಪದಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶ್ವನಾಥ್ ಶೆಟ್ಟಿಯವರಿಂದ ತೆರವಾದ ಸ್ಥಾನಕ್ಕೆ ಬಿ.ಎಸ್.ಪಾಟೀಲ್ ನೇಮಕಗೊಂಡಿದ್ದು 8ನೇ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿದ್ದಾರೆ. ಕಳೆದ ಐದು ತಿಂಗಳಿನಿಂದ ಲೋಕಾಯುಕ್ತ ಹುದ್ದೆ ಖಾಲಿ ಇರುವುದರಿಂದ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಲೋಕಾಯುಕ್ತರ ನೇಮಕವು ‘ಸಕ್ರಿಯ ಪರಿಗಣನೆ’ಯಲ್ಲಿದೆ ಎಂದು ಹೈಕೋರ್ಟ್‌ ಸೂಚಿಸಿದ್ದರಿಂದ ಅದನ್ನು ವಜಾಗೊಳಿಸಲಾಯಿತು.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ನ್ಯಾಯಮೂರ್ತಿ ಪಾಟೀಲ್ ಅವರು ಜೂನ್ 1, 1956 ರಂದು ವಿಜಯಪುರ ಜಿಲ್ಲೆಯ ಪಡೇಕಣ್ಣೂರು ಗ್ರಾಮದಲ್ಲಿ ಜನಿಸಿದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿಎ ಪದವಿಯನ್ನು ಪಡೆದರು. 1980 ರಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.  2004 ರಲ್ಲಿ, ನ್ಯಾಯಮೂರ್ತಿ ಪಾಟೀಲ್ ಅವರು ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು. 13 ವರ್ಷಗಳ ಕಾಲ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. 2018 ರಲ್ಲಿ ಎಚ್‌ಸಿ ನ್ಯಾಯಾಧೀಶರಾಗಿ ನಿವೃತ್ತರಾದರು. ಅವರನ್ನು ನವೆಂಬರ್ 2019 ರಲ್ಲಿ ಉಪಲೋಕಾಯುಕ್ತರಾಗಿ ನೇಮಿಸಲಾಯಿತು.

ಏಪ್ರಿಲ್‌ನಲ್ಲಿ, ಕರ್ನಾಟಕ ಸರ್ಕಾರವು ಲೋಕಾಯುಕ್ತಕ್ಕೆ ಲಗತ್ತಿಸಲಾದ ಎಲ್ಲಾ ಮಂಜೂರಾದ ಎಸ್‌ಪಿ ಮತ್ತು ಡಿವೈಎಸ್‌ಪಿ ಹುದ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಿಗೆ (ಡಿಜಿ ಮತ್ತು ಐಜಿಪಿ) ನಿರ್ದೇಶನ ನೀಡಿತು. ಏಪ್ರಿಲ್ 11, 2022 ರಂದು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಲೋಕಾಯುಕ್ತಕ್ಕೆ ಹಂಚಿಕೆಯಾಗಿದ್ದ 22 ಎಸ್‌ಪಿ ಮತ್ತು 42 ಡಿವೈಎಸ್‌ಪಿ ಹುದ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಡಿಜಿ ಮತ್ತು ಐಜಿಪಿಗೆ ನಿರ್ದೇಶನ ನೀಡಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:10 pm, Tue, 14 June 22

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ