AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ತನಿಖಾ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು RCB ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಿದೆ. 11 ಜನ ಸಾವನ್ನಪ್ಪಿದ ಈ ದುರಂತದ ಬಗ್ಗೆ ವಿವರವಾದ ತನಿಖೆ ನಡೆಸಲಾಗಿದೆ ಮತ್ತು ವರದಿಯು ಸಚಿವ ಸಂಪುಟದಲ್ಲಿ ಚರ್ಚಿಸಲ್ಪಡಲಿದೆ.

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ತನಿಖಾ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ
ಕಾಲ್ತುಳಿತ
ಹರೀಶ್ ಜಿ.ಆರ್​.
| Edited By: |

Updated on:Jul 11, 2025 | 8:11 PM

Share

ಬೆಂಗಳೂರು, ಜುಲೈ 11: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಐಪಿಎಲ್ (IPL) ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy Stadium Stampede) ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ, ಕರ್ನಾಟಕ ಹೈಕೋರ್ಟ್​ನ ನಿವೃತ್ತ ನ್ಯಾ. ಮೈಕೆಲ್​ ಡಿ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿತ್ತು. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶನ ನೀಡಿತ್ತು. ಅದರಂತೆ, ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ಅವರು ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.

ವರದಿ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಲ್ತುಳಿತ ದುರಂತದ ಕುರಿತು ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಅವರು ತನಿಖೆ ನಡೆಸಿ ಇಂದು ಎರಡು ಸಂಪುಟದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು. ಬರುವ ಗುರುವಾರ (ಜು. 17) ದಂದು ನಡೆಯುವ ಸಚಿವ ಸಂಪುಟದಲ್ಲಿ ವರದಿ ಮಂಡಿಸುತ್ತೇನೆ ಎಂದು ಹೇಳಿದರು.

ಸಿಐಡಿ ತನಿಖೆಯಲ್ಲಿ ಏನಿದೆ?

ಇದೇ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ಕೂಡ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ವೇಳೆ ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. ಕಿಂಗ್​ ವಿರಾಟ್​ ಕೊಹ್ಲಿಗಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ಘಟನೆಗೆ ಮುಖ್ಯ ಕಾರಣ ಅಂತ ಸಿಐಡಿ ತನಿಖೆಯಲ್ಲಿ ತಿಳಿದು ಬಂದಿದೆ ಮೂಲಗಳು ತಿಳಿಸಿದ್ದವು. ಘಟನೆಗೆ ಇನ್ನೂ ಹಲವು ಕಾರಣಗಳನ್ನು ಸಿಐಡಿ ತನಿಖೆಯಲ್ಲಿ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಗಾಗಿ ತರಾತುರಿ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತಕ್ಕೆ ಕಾರಣ!

ಪಿಐಎಲ್ ದಾಖಿಸಿಕೊಂಡ ಕೋರ್ಟ್​

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಹೈಕೋರ್ಟ್​ನ ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ನಡೆಸುತ್ತಿದೆ. ಕಳೆದ ತಿಂಗಳು ಜೂ.23 ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾಗಿ (ನ್ಯಾಯಾಲಯಕ್ಕೆ ನೆರವಾಗುವ ವಕೀಲ) ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ಪೀಠ ನೇಮಕ ಮಾಡಿತ್ತು. ಪಿಐಎಲ್‌ ಹಾಗೂ ಪ್ರಕರಣದ ಇತರೆ ದಾಖಲೆಗಳನ್ನು ಎಸ್.ಸುಶೀಲಾರಿಗೆ ನೀಡಲು ಪೀಠ ಸೂಚನೆ ನೀಡಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Fri, 11 July 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು