ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ, ಹೊಸ ಮುಖ್ಯನ್ಯಾಯಮೂರ್ತಿ ಯಾರು ಗೊತ್ತಾ?

Justice NV Anjaria: ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿ (ಸಿಜೆ) ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ.

ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ, ಹೊಸ ಮುಖ್ಯನ್ಯಾಯಮೂರ್ತಿ ಯಾರು ಗೊತ್ತಾ?
ನಿಲಯ್ ವಿಪಿನ್​ಚಂದ್ರ ಅಂಜಾರಿಯಾ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 16, 2024 | 5:22 PM

ಬೆಂಗಳೂರು, (ಫೆಬ್ರವರಿ 16): ಕರ್ನಾಟಕ ಹೈಕೋರ್ಟ್​ಗೆ (Karnataka High Court )ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ (NV Anjaria) ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಇದೀಗ ರಾಷ್ಟ್ರಪತಿ ಅಂಕಿತ ಬಿದ್ದಿದ್ದು, ದಿನೇಶ್ ಕುಮಾರ್ ನಿವೃತ್ತಿ‌ ನಂತರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇತ್ತೀಚೆಗಗಷ್ಟೇ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿಯವರು ಆದೇಶ ಹೊರಡಿಸಿದ್ದು. ವರಾಳೆ ಅವರ ಹುದ್ದೆಗೆ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಫೆಬ್ರವರಿ 24ರಂದು ದಿನೇಶ್ ಕುಮಾರ್ ಅವರು ನಿವೃತ್ತಿಯಾಗಲಿದ್ದಾರೆ.

ಇನ್ನು ಕರ್ನಾಟಕ ಹೈಕೋರ್ಟ್​ನ ನೂತನ ಸಿಜೆ ಅಂಜಾರಿಯಾ ಅವರು 2011ರಿಂದ ಗುಜರಾತ್​ ಹೈಕೋರ್ಟ್​​ನಲ್ಲಿ ನ್ಯಾಯಮೂರ್ತಿಯಾಗಿಯಾಗಿದ್ದರು. ಹೈಕೋರ್ಟ್​ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್​ ಹೈಕೋರ್ಟ್​​ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳ ವಕೀಲಿಕೆ ಮಾಡಿದ್ದಾರೆ. ಅಲ್ಲದೇ ಸಿವಿಲ್​​ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ