ಬೆಂಗಳೂರು, (ಫೆಬ್ರವರಿ 16): ಕರ್ನಾಟಕ ಹೈಕೋರ್ಟ್ಗೆ (Karnataka High Court )ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್ಚಂದ್ರ ಅಂಜಾರಿಯಾ (NV Anjaria) ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಇದೀಗ ರಾಷ್ಟ್ರಪತಿ ಅಂಕಿತ ಬಿದ್ದಿದ್ದು, ದಿನೇಶ್ ಕುಮಾರ್ ನಿವೃತ್ತಿ ನಂತರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಇತ್ತೀಚೆಗಗಷ್ಟೇ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿಯವರು ಆದೇಶ ಹೊರಡಿಸಿದ್ದು. ವರಾಳೆ ಅವರ ಹುದ್ದೆಗೆ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಫೆಬ್ರವರಿ 24ರಂದು ದಿನೇಶ್ ಕುಮಾರ್ ಅವರು ನಿವೃತ್ತಿಯಾಗಲಿದ್ದಾರೆ.
ಇನ್ನು ಕರ್ನಾಟಕ ಹೈಕೋರ್ಟ್‌ನ ನೂತನ ಸಿಜೆ ಅಂಜಾರಿಯಾ ಅವರು 2011ರಿಂದ ಗುಜರಾತ್ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿಯಾಗಿದ್ದರು. ಹೈಕೋರ್ಟ್ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳ ವಕೀಲಿಕೆ ಮಾಡಿದ್ದಾರೆ. ಅಲ್ಲದೇ ಸಿವಿಲ್ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ