ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

NV Anjaria: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿ ಅಂಜಾರಿಯ ಅವರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಅಂಜಾರಿಯ ಪ್ರಮಾಣ ವಚನ ಸ್ವೀಕಾರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 25, 2024 | 12:15 PM

ಬೆಂಗಳೂರು, (ಫೆಬ್ರವರಿ 25): ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ((Karnataka High Court Chief Justice)  ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ (NV Anjaria) ಪ್ರಮಾಣ ವಚನ ಸ್ವೀಕರಿಸಿದರು. ಇಂದು(ಫೆಬ್ರವರಿ 25) ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿ ಅಂಜಾರಿಯ ಅವರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ, ಹೊಸ ಮುಖ್ಯನ್ಯಾಯಮೂರ್ತಿ ಯಾರು ಗೊತ್ತಾ?

ಕರ್ನಾಟಕ ಹೈಕೋರ್ಟ್​ನ ನೂತನ ಸಿಜೆ ಅಂಜಾರಿಯಾ ಅವರು 2011ರಿಂದ ಗುಜರಾತ್​ ಹೈಕೋರ್ಟ್​​ನಲ್ಲಿ ನ್ಯಾಯಮೂರ್ತಿಯಾಗಿಯಾಗಿದ್ದರು. ಹೈಕೋರ್ಟ್​ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್​ ಹೈಕೋರ್ಟ್​​ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳ ವಕೀಲಿಕೆ ಮಾಡಿದ್ದಾರೆ. ಅಲ್ಲದೇ ಸಿವಿಲ್​​ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.

ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಾಮೂರ್ತಿ ಪಿಎಸ್ ದಿನೇಶ್ ಕುಮಾರ್ (PS Dinesh Kumar) ಅವರು ಇದೇ ಫೆಬ್ರವರಿ ಫೆ.24ರಂದು ನಿವೃತ್ತಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಕೊಲಿಜಿಯಂ, ಎನ್.ವಿ.ಅಂಜಾರಿಯಾ (NV Anjaria )ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲ್ ಕ್ಲಿಕ್ ಮಾಡಿ